- ಈಗಾಗಲೇ ಅಭ್ಯರ್ಥಿಗಳ ಪಟ್ಟಿ ಅಂತಿಮ
- ಮಾ.7ರಂದು ಪಟ್ಟಿ ಬಿಡುಗಡೆಗೆ ಸಿದ್ಧತೆ
NAMMUR EXPRESS NEWS
ಹಾಸನ: ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು, ಎಲ್ಲಾ ಪಕ್ಷದಲ್ಲೂ ರಾಜಕೀಯ ಬಿರುಸಿನ ಹಂತ ತಲುಪಿದೆ. ಈ ನಡುವೆ ಮುಂದಿನ ವಾರ ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಆಗುವ ಸಾಧ್ಯತೆಗಳಿವೆ.
ಅದರಂತೆ ಕಾಂಗ್ರೆಸ್ ಪಕ್ಷದ ರಾಜಕೀಯ ಚಟುವಟಿಕೆ ಬಿರುಸುಗೊಂಡಿದೆ. ಅಭ್ಯರ್ಥಿಗಳ ಆಯ್ಕೆಗೆ ಈಗಾಗಲೇ ಆಕಾಂಕ್ಷಿಗಳಿಂದ ಅರ್ಜಿ ಸ್ವೀಕರಿಸಿರುವ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನ ಮಾರ್ಚ್ 7 ರಂದು ಬಿಡುಗಡೆ ಮಾಡಲಿದೆ.
ಈಗಾಗಲೇ ಜೆಡಿಎಸ್ ಪಕ್ಷದಿಂದ ಮುಂಬರುವಂತ ರಾಜ್ಯ ವಿಧಾನಸಭಾ ಚುನಾವಣೆಗೆ ಕೆಲ ಕ್ಷೇತ್ರಗಳಿಗೆ ಅಭ್ಯರ್ಧಿಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಕಾಂಗ್ರೆಸ್ ಪಕ್ಷದಿಂದ ಮಾರ್ಚ್ 7ರಂದು ಮೊದಲ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸುವುದಾಗಿ ತಿಳಿಸಿದ್ದಾರೆ. ಪಕ್ಷದ ಟಿಕೆಟ್ ಗಾಗಿ ಸಲ್ಲಿಸಲಾಗಿದ್ದ ಆಕಾಂಕ್ಷಿಗಳ ಅರ್ಜಿಗಳನ್ನು ಪರಿಶೀಲಿಸಿ, ಸಮಾಲೋಚನೆ ನಡೆಸಲಾಗಿದೆ. ಇದಲ್ಲದೇ ವೀಕ್ಷಕರು ಎಲ್ಲಾ ಜಿಲ್ಲೆಗಳಲ್ಲಿ ಸಂಚರಿಸಿ, ಕಾರ್ಯಕರ್ತರ ಅಭಿಪ್ರಾಯವನ್ನು ಸಂಗ್ರಹಿಸಿ, ಕೆಪಿಸಿಸಿಗೆ ವರದಿ ನೀಡಲಿದ್ದಾರೆ
ಕಾಂಗ್ರೆಸ್ ಪಕ್ಷವು ವೀಕ್ಷಕರು ನೀಡುವ ವರದಿಯ ಆಧಾರದ ಮೇಲೆ ಕಾಂಗ್ರೆಸ್ ಪಕ್ಷದ ಆಕಾಂಕ್ಷಿಗಳ ಪಟ್ಟಿಯನ್ನು ತಯಾರಿಸಿ, ಹೈಕಮಾಂಡ್ ಗೆ ಕಳುಹಿಸಲಾಗಿದ್ದು, ಶೀಘ್ರವೇ ಕಾಂಗ್ರೆಸ್ ಪಕ್ಷದ ಮೊದಲ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಲಿದೆ ಎಂಬುದಾಗಿ ತಿಳಿಸಿದ್ದಾರೆ.
ಪ್ರಚಾರ ಸಮಿತಿ ಸರಣಿ ಸಭೆ
ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾದ ಎಂ.ಬಿ.ಪಾಟೀಲ್ ಅವರ ನೇತೃತ್ವದಲ್ಲಿ ಪ್ರಚಾರ ಸಮಿತಿಯ ರಾಜ್ಯ ಪದಾಧಿಕಾರಿಗಳು ಮತ್ತು ಜಿಲ್ಲಾಧ್ಯಕ್ಷರುಗಳ ಸಭೆ ನಡೆಸಲಾಯಿತು. ಕೆಪಿಸಿಸಿ ಉಪಾಧ್ಯಕ್ಷರಾದ ಬಿ.ಎಲ್ ಶಂಕರ್, ಮಾಜಿ ಸಚಿವರಾದ ಕಿಮ್ಮನೆ ರತ್ನಾಕರ್, ರಾಣಿ ಸತೀಶ್, ಎ.ಬಿ ಪಾಟೀಲ್, ವಿಧಾನಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ, ನಜೀರ್ ಅಹ್ಮದ್, ಶಾಸಕರಾದ ರಿಜ್ವಾನ್ ಅರ್ಷದ್, ಮಾಜಿ ಸಂಸದರಾದ ಬಿ.ಎನ್ ಚಂದ್ರಪ್ಪ, ಮಾಜಿ ಎಂಎಲ್ ಸಿ ರಮೇಶ್ ಬಾಬು ಸೇರಿದಂತೆ ಸಮಿತಿಯ ಪದಾಧಿಕಾರಿಗಳು ಭಾಗವಹಿಸಿದ್ದರು.