- ಮಲೆನಾಡ ಆಹಾರ ಮೇಳ ಮತ್ತು ಗೃಹಪಯೋಗಿ ವಸ್ತುಗಳ ಮಾರಾಟ ಮೇಳ
- ಮಲೆನಾಡ ಮಹಿಳಾ ವೇದಿಕೆ ಆಶ್ರಯದಲ್ಲಿ ನಯನಾ ಶೆಟ್ಟಿ ಸಾರಥ್ಯದಲ್ಲಿ ಕಾರ್ಯಕ್ರಮ
- ಸಾಧಕರಿಗೆ ಸನ್ಮಾನ ಸಮಾರಂಭ ಹಾಗೂ ರಾಜ್ಯಮಟ್ಟದ ನೃತ್ಯ ಸ್ಪರ್ಧೆ
NAMMUR EXPRESS NEWS
ತೀರ್ಥಹಳ್ಳಿ : ಮಲೆನಾಡ ಮಹಿಳಾ ವೇದಿಕೆ ಆಶ್ರಯದಲ್ಲಿ ನಯನಾ ಶೆಟ್ಟಿ ಸಾರಥ್ಯದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಮಾರ್ಚ್ 8ರಂದು ಬೆಳಗ್ಗೆ 11:00ಗೆ ಡಾ. ಯು. ಆರ್ ಅನಂತಮೂರ್ತಿ ಸರ್ಕಾರಿ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ಮಲೆನಾಡ ಆಹಾರ ಮೇಳ ಮತ್ತು ಗೃಹ ಉಪಯೋಗಿ ವಸ್ತುಗಳ ಮಾರಾಟಮೇಳ, ಬೃಹತ್ ಮಹಿಳಾ ಜಾಥಾ, ಮಲೆನಾಡ ಮಹಿಳಾ ಸಾಧಕರಿಗೆ ಸನ್ಮಾನ ಸಮಾರಂಭ ಹಾಗೂ ರಾಜ್ಯಮಟ್ಟದ ನೃತ್ಯ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಪ. ಪಂ ಮಾಜಿ ಅಧ್ಯಕ್ಷೆ ಶಬನಂ, ಪ. ಪಂ ಸದಸ್ಯರಾದ ಗೀತಾ ರಮೇಶ್, ಜ್ಯೋತಿ ಮೋಹನ್, ಮಂಜುಳ ನಾಗೇಂದ್ರ, ಜ್ಯೋತಿ ಗಣೇಶ್ ಕಾರ್ಯಕ್ರಮ ಉದ್ಘಾಟಿಸುವರು.
ಸಂಜೆ 6:30ಕ್ಕೆ ಮಹಿಳಾ ಸಾಧಕರಿಗೆ ಸನ್ಮಾನ ಸಮಾರಂಭ ಹಾಗೂ ರಾಜ್ಯಮಟ್ಟದ ನೃತ್ಯ ಸ್ಪರ್ಧೆ ನಡೆಯಲಿದೆ. ತಾಲೂಕು ಬಂಟರ ಮಹಿಳಾ ಸಂಘದ ಅಧ್ಯಕ್ಷರು, ಪ. ಪಂ ಮಾಜಿ ಸದಸ್ಯರು ಹಾಗೂ ಸಹನಾ ಫ್ಯಾಷನ್ ಸಿಲ್ಕ್ ಮಾಲೀಕರಾದ ನಯನ ಶೆಟ್ಟಿ ಅಧ್ಯಕ್ಷತೆ ವಹಿಸುವರು. ಚಲನಚಿತ್ರರಂಗದ ಪ್ರತಿಭಾನ್ವಿತ ಅಭಿನೇತ್ರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮಾಜಿ ಸಚಿವರು ಹಾಗೂ ಕೆಪಿಸಿಸಿ ಸದಸ್ಯರಾದ ಉಮಾಶ್ರೀ, ಮಂಗಳೂರು ನಗರಸಭೆ ಮಾಜಿ ಸದಸ್ಯ ಪ್ರತಿಭಾ ಕುಳಾಯಿ, ಕರ್ನಾಟಕ ಮಹಿಳಾ ಸಹಕಾರಿ ಬ್ಯಾಂಕ್ ಮತ್ತು ರೋಟರಿ ಗವರ್ನರ್ ಅಧ್ಯಕ್ಷರು ಹಾಗೂ ಮಲೆನಾಡು ಅಭಿವೃದ್ಧಿ ಮಂಡಳಿಯ ಮಾಜಿ ಅಧ್ಯಕ್ಷೆ ಬಿ. ಸಿ. ಗೀತಾ ಕಾರ್ಯಕ್ರಮ ಉದ್ಘಾಟಿಸುವರು.
ಗೃಹ ಸಚಿವ ಆರಗ ಜ್ಞಾನೇಂದ್ರ, ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಅಪೇಕ್ಸ್ ಬ್ಯಾಂಕ್ ಮಾಜಿ ಅಧ್ಯಕ್ಷ ಡಾ. ಆರ್ ಎಂ ಮಂಜುನಾಥ ಗೌಡ, ಕರ್ನಾಟಕ ರಾಜ್ಯ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ದೇಶಕ ಆರ್ ಮದನ್, ತಹಶೀಲ್ದಾರ್ ಅಮೃತ್ ಅತ್ರೇಶ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಶೈಲಾ ಎಸ್, ಪಟ್ಟಣ ಪಂಚಾಯತ್ ಅಧ್ಯಕ್ಷೆ ಸುಶೀಲ ಶೆಟ್ಟಿ, ನ್ಯಾಷನಲ್ ಕನ್ಸ್ಟ್ರಕ್ಷನ್ ಅಬ್ದುಲ್ ರೆಹಮಾನ್, ತೀರ್ಥಹಳ್ಳಿ ಕ್ಷೇತ್ರ ಅಮ್ ಆದ್ಮಿ ಪಕ್ಷದ ವಿಧಾನಸಭಾ ಅಭ್ಯರ್ಥಿ ಸಾಲೂರು ಶಿವಕುಮಾರ್ ಗೌಡ ಗೌರವ ಉಪಸ್ಥಿತರಿರುವರು. ಸಮಾರಂಭಕ್ಕೆ ತಾಲೂಕಿನ ಎಲ್ಲ ಮಹಿಳೆಯರು ಪಾಲ್ಗೊಳ್ಳಬೇಕಾಗಿ ಮಲೆನಾಡು ಮಹಿಳಾ ವೇದಿಕೆ ಕೋರಿದೆ.
ತಾಲೂಕಿನ ಸಮಸ್ತ ಮಹಿಳೆಯರು ಸೇರಿದಂತೆ ಸರ್ವರನ್ನು ಸ್ವಾಗತಿಸಲಾಗಿದೆ.