- ಮುಂಜಾನೆ ಹೃದಯಾಘಾತ: ಕಾಂಗ್ರೆಸ್ ಪಕ್ಷದ ಸಂಘಟಕ ವಿಧಿವಶ
NAMMUR EXPRESS NEWS
ಬೆಂಗಳೂರು: ಮೈಸೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್ಧ್ರುವನಾರಾಯಣ(61) ಹೃದಯಾಘಾತದಿಂದ ನಿಧನರಾಗಿದ್ದಾರೆ. ಆರ್.ಧ್ರುವನಾರಾಯಣ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಿಂದ 2 ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. ಹಾಗೇ ಕೊಳ್ಳೇಗಾಲ ಕ್ಷೇತ್ರದಿಂದ 1 ಬಾರಿ, ಸಂತೇಮರಹಳ್ಳಿ ಕ್ಷೇತ್ರದಿಂದ 1 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. 1983ರಲ್ಲಿ ಕಾಂಗ್ರೆಸ್ ಪಕ್ಷ ಸೇರುವ ಮೂಲಕ ರಾಜಕೀಯ ಪ್ರವೇಶ 1986ರಲ್ಲಿ ಎನ್ಎಸ್ಯುಐ ಬೆಂಗಳೂರು ಘಟಕದ ಅಧ್ಯಕ್ಷರಾಗಿದ್ದರು.ಈ ಬಾರಿ ನಂಜನಗೂಡು ಕ್ಷೇತ್ರದಿಂದ ಸ್ಪರ್ಧೆಗೆ ಸಿದ್ಧತೆ ನಡೆಸಿದ್ದರು. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಸಂಘಟನೆಯಲ್ಲಿ ಮುಂಚೂಣಿಯಲ್ಲಿದ್ದರು. ಇವರ ಸಾವು ಇದೀಗ ತುಂಬಲಾರದ ನಷ್ಟ ಉಂಟು ಮಾಡಿದೆ.
ಧ್ರುವನಾರಾಯಣ ಅವರಿಗೆ ಮುಂಜಾನೆ ಹೃದಯಘಾತವಾಗಿದ್ದು, ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಪಕ್ಷದ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿಕೆಶಿ ಸೇರಿದಂತೆ ಎಲ್ಲಾ ಪಕ್ಷದ ನಾಯಕರು, ಪ್ರಮುಖರು ಸಂತಾಪ ವ್ಯಕ್ತಪಡಿಸಿದ್ದಾರೆ.
ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ಮಾಜಿ ಸಂಸದರಾದ ಶ್ರೀ ಧ್ರುವ ನಾರಾಯಣ ಅವರ ದಿಢೀರ್ ಸಾವಿನಿಂದ ತೀವ್ರ ಆಘಾತಗೊಂಡಿದ್ದೇನೆ. ವೈಯಕ್ತಿಕವಾಗಿ ಆತ್ಮೀಯರಾಗಿದ್ದ ಅವರು ಕಠಿಣ ನಿರ್ಧಾರ ಕೈಗೊಳ್ಳುವಾಗ ಅತ್ಯುತ್ತಮ ಸಲಹೆ ನೀಡುತ್ತಿದ್ದರು. ಯಾರ ಮನಸ್ಸನ್ನೂ ನೋವಿಸದೆ ಸದಾ ಹಸನ್ಮುಖರಾಗಿದ್ದ ವ್ಯಕ್ತಿತ್ವ ಅವರದ್ದು. ಅವರ ಆತ್ಮಕ್ಕೆ ಸದ್ಗತಿ ಸಿಗಲಿ. pic.twitter.com/uX1o4Nyw0u
— DK Shivakumar (@DKShivakumar) March 11, 2023