- ಬಿಜೆಪಿಯ ಹಲವರಿಗೆ ಟಿಕೆಟ್ ಇಲ್ಲ…?!
- ಕಾಂಗ್ರೆಸ್ ಪಕ್ಷದಿಂದ 140 ಕ್ಷೇತ್ರ ಫೈನಲ್
- ರಾಜ್ಯದಲ್ಲಿ ಚುನಾವಣೆಗೆ ಸಿದ್ಧತೆ ಜೋರು
NAMMUR EXPRESS NEWS
ಬೆಂಗಳೂರು: ಕಾಂಗ್ರೆಸ್, ಬಿಜೆಪಿಯಲ್ಲಿ ಟಿಕೆಟ್ ಕುತೂಹಲ ಹೆಚ್ಚಿದೆ. ಬಿಜೆಪಿಯ ಹಲವು ಮೂಲ ನಾಯಕರಿಗೆ ಟಿಕೆಟ್ ಇಲ್ಲ ಎನ್ನಲಾಗಿದೆ.
ಮೋದಿ ಬಿಜೆಪಿಯಲ್ಲಿ ಕುಟುಂಬ ರಾಜಕಾರಣಕ್ಕೆ ಅವಕಾಶವಿಲ್ಲ ಎಂದು ಘೋಷಿಸಿದ್ದರೂ ಬಿಜೆಪಿಯಲ್ಲಿ ಟಿಕೇಟ್ ಗಾಗಿ ಕಾಯುತ್ತಿರೋ ಅಪ್ಪ ಮಕ್ಕಳ ಪಟ್ಟಿ ದೊಡ್ಡದಿದೆ. ಈ ಮಧ್ಯೆ ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿಸಿಎಂ ಬಿಎಸೈ ನೀಡಿರೋ ಹೇಳಿಕೆ ಈಗ ಬಿಜೆಪಿಯ ಟಿಕೇಟ್ ಆಕಾಂಕ್ಷಿಗಳ ಎದೆಯಲ್ಲಿ ನಡುಕ ಮೂಡಿಸಿದೆ. ಕಲ್ಬುರ್ಗಿಯಲ್ಲಿ ಮಾತನಾಡಿದ ಬಿ.ಎಸ್.ಯಡಿಯೂರಪ್ಪ ಈ ಭಾರಿ ಒಂದು ನಾಲ್ಕು ಶಾಸಕರನ್ನು ಹೊರತು ಪಡಿಸಿ ಉಳಿದವರಿಗೆಲ್ಲ ಬಿಜೆಪಿಯಿಂದ ಟಿಕೇಟ್ ಸಿಗಲಿದೆ ಎಂದಿದ್ದಾರೆ.
ಬಿಜೆಪಿಯ ನಾಯಕ ಬಿ.ಎಸ್.ಯಡಿಯೂರಪ್ಪ ಹೇಳಿರೋ ಈ ಮಾತಿನಿಂದ ಬಿಜೆಪಿ ಪಾಳಯದಲ್ಲಿ ನಡುಕ ಮೂಡಿಸಿದೆ. ಹಲವು ಶಾಸಕರು ಬಿ.ಎಸ್.ಯಡಿಯೂರಪ್ಪ ಹೇಳಿಕೆಯಿಂದ ಕಂಗಾಲಾಗಿದ್ದಾರೆ.
ಬಿಜೆಪಿ ಹೈಕಮಾಂಡ್ ತಳಮಟ್ಟದಿಂದ ಮಾಹಿತಿ ಸಂಗ್ರಹ ಮಾಡಿದ್ದು, ಜನಾಭಿಪ್ರಾಯ ಹಾಗೂ ಕಾರ್ಯಕರ್ತರ ಅಭಿಪ್ರಾಯ ಆಧರಿಸಿ ಹಲವು ಶಾಸಕರ ಮಾರ್ಕ್ಸ್ ಕಾರ್ಡ್ ಸಿದ್ಧಪಡಿಸಿದೆಯಂತೆ. ಇನ್ನೂ ಕೆಲವರಿಗೆ ನಿಮಗೆ ಟಿಕೇಟ್ ಸಿಗೋದು ಅನುಮಾನವಿದೆ. ಇನ್ನಾದರೂ ಕ್ಷೇತ್ರಕ್ಕೆ ಹೋಗಿ ಜನರ ಮನಸ್ಸು ಗೆದ್ದು ಟಿಕೇಟ್ ಪಡೆಯೋ ಪ್ರಯತ್ನ ಮಾಡಿ ಎಂದು ಸೂಚನೆ ನೀಡಿದೆಯಂತೆ. ಇದೇ ಆಧಾರದ ಮೇಲೆ ಬಿಎಸೈ ಹೇಳಿದ್ದಾರೆ ಎನ್ನಲಾಗಿದೆ.
ಕಾಂಗ್ರೆಸ್ ಅಭ್ಯರ್ಥಿ ಆಯ್ಕೆಗೆ ಸ್ಕ್ರೀನಿಂಗ್ ಕಮಿಟಿ ಸಭೆ
- 140 ಕ್ಷೇತ್ರ ಫೈನಲ್: ಟಿಕೆಟ್ ಕುತೂಹಲ
ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುವ ಸಲುವಾಗಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮೋಹನ್ ಪ್ರಕಾಶ್ ಅಧ್ಯಕ್ಷತೆಯ ಸ್ಕ್ರೀನಿಂಗ್ ಸಮಿತಿಯು ಮಂಗಳವಾರ ರಾಜ್ಯ ನಾಯಕರೊಂದಿಗೆ ಸುದೀರ್ಘ ಸಭೆ ನಡೆಸಿದ್ದು, ಬುಧವಾರವು ಸಂಭಾವ್ಯರ ಆಯ್ಕೆ ಪ್ರಕ್ರಿಯೆ ಕುರಿತ ಸಭೆ ಮುಂದುವರೆಯಲಿದೆ ಎಂದು ತಿಳಿದುಬಂದಿದೆ. ಮಂಗಳವಾರ 140 ಕ್ಷೇತ್ರಗಳಿಗೆ ತಲಾ ಒಬ್ಬರು ಸಂಭಾವ್ಯರ ಹೆಸರನ್ನು ಅಂತಿಮಗೊಳಿಸಲು ರಾಜ್ಯ ನಾಯಕರೊಂದಿಗೆ ತಡರಾತ್ರಿವರೆಗೆ ಸುದೀರ್ಘ ಚರ್ಚೆ ನಡೆಯಿತು. ಈ ಸಭೆಯು ಬುಧವಾರವು ಮುಂದುವರೆಯಲಿದ್ದು 50-60 ಇತರೆ ಕ್ಷೇತ್ರಗಳ ಸಂಭಾವ್ಯರ ಪಟ್ಟಿ ಅಂತಿಮಗೊಳಿಸುವ ಬಗ್ಗೆಯೂ ಚರ್ಚೆ ಮಾಡಲಿದ್ದಾರೆ. ಬಳಿಕ ಸ್ಕ್ರೀನಿಂಗ್ ಸಮಿತಿಯು ಅಂತಿಮಗೊಳಿಸುವ ಸಂಭಾವ್ಯರ ಪಟ್ಟಿಯನ್ನು ಕೇಂದ್ರ ಚುನಾವಣಾ ಸಮಿತಿಗೆ ಕಳುಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮಂಗಳವಾರದ ಸಭೆಯಲ್ಲಿ ಸ್ಕ್ರೀನಿಂಗ್ ಸಮಿತಿಯ ಪದ ನಿಮಿತ್ತ ಸದಸ್ಯರಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ಪರಿಷತ್ ಪ್ರತಿಪಕ್ಷ ನಾಯಕ ಬಿ ಕೆ ಹರಿಪ್ರಸಾದ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ ಬಿ ಪಾಟೀಲ್, ಚುನಾವಣಾ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಡಾ. ಜಿ. ಪರಮೇಶ್ವರ, ರಾಜ್ಯ ಉಸ್ತುವಾರಿಯಲ್ಲಿರುವ ಎಐಸಿಸಿ ಕಾರ್ಯದರ್ಶಿಗಳು ಭಾಗವಹಿಸಿ ಅಭಿಪ್ರಾಯ ಹಂಚಿಕೊಂಡಿದ್ದಾರೆ.
ಗುರುವಾರ ರಾಜ್ಯಕ್ಕೆ ಚುನಾವಣಾ ಆಯೋಗ
- ಮುಖ್ಯ ಚುನಾವಣಾ ಆಯುಕ್ತರ ನಿಯೋಗದಿಂದ ಪ್ರವಾಸ ಮುಂಬರುವ ಸಾರ್ವತ್ರಿಕ ವಿಧಾನಸಭೆ ಚುನಾವಣೆಯ ಪೂರ್ವ ತಯಾರಿ ಪರಿವೀಕ್ಷಣೆಗಾಗಿ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ನೇತೃತ್ವದ ಹಿರಿಯ ಅಧಿಕಾರಿಗಳ ತಂಡ ಗುರುವಾರದಿಂದ ಮೂರು ದಿನಗಳ ಕಾಲ ಬೆಂಗಳೂರಿಗೆ ಭೇಟಿ ನೀಡಲಿದೆ. ಮೊದಲ ದಿನ ಗುರುವಾರ ಮಧ್ಯಾಹ್ನ ಬೆಂಗಳೂರಿಗೆ ಆಗಮಿಸುವ ನಿಯೋಗವು ಮೊದಲು ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿಗಳು ಸೇರಿದಂತೆ ಹಿರಿಯ ಅಧಿಕಾರಿಗಳೊಂದಿಗೆ ರಾಜ್ಯಮಟ್ಟದಲ್ಲಿ ಚುನಾವಣಾ ಪೂರ್ವ ತಯಾರಿ ಕುರಿತು ಸಭೆ ನಡೆಸಲಿದೆ. ತದನಂತರ ಮುಂಬರುವ ಚುನಾವಣೆ ಬಗ್ಗೆ ಪ್ರತ್ಯೇಕವಾಗಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಲಿದ್ದು ಅವರ ಸಲಹೆ ಮತ್ತು ಅಭಿಪ್ರಾಯಗಳನ್ನು ಪಡೆಯಲಿದೆ. ಎರಡನೆಯ ದಿನ ಶುಕ್ರವಾರ ರಾಜ್ಯದ ಎಲ್ಲ ಜಿಲ್ಲೆ ಚುನಾವಣಾ ಅಧಿಕಾರಿಗಳೊಂದಿಗೆ ಚುನಾವಣೆಯ ಪೂರ್ವಭಾವಿ ತಯಾರಿ ಕುರಿತು ಸಭೆ ನಡೆಸಲಿದೆ. ಅಂದು ಸಂಜೆ ಮತದಾರರ ಜಾಗೃತಿ ಕುರಿತು ವಿಶೇಷ ವಸ್ತು ಪ್ರದರ್ಶನ, ವಿಶೇಷ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದೆ. ಮೂರನೇ ದಿನ ಬೆಳಗ್ಗೆ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ನಂತರ ಪತ್ರಿಕಾಗೋಷ್ಠಿ ನಡೆಸಿ ಕೊಡಲಿದೆ ಎಂದು ಪ್ರಕಟಣೆ ತಿಳಿಸಿದೆ.