- 7 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರ್: ಶಿಕ್ಷಣ ಸಚಿವ ನಾಗೇಶ್ ಮಾಹಿತಿ
NAMMUR EXPRESS NEWS
ತಿಪಟೂರು: ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು ಸುಸೂತ್ರವಾಗಿ ನಡೆಯುತ್ತಿದೆ. ರಾಜ್ಯದ 1109 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಮೇ ಮೊದಲ ವಾರದಲ್ಲಿ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ನಾಗೇಶ್ ತಿಳಿಸಿದ್ದಾರೆ. ತಿಪಟೂರಿನ ಸರ್ಕಾರಿ ಶಾಲೆಗೆ ಭೇಟಿ ನೀಡಿದ ಬಳಿಕ ನಾಗೇಶ್ ಅವರು ಈ ಮಾಹಿತಿ ಹಂಚಿಕೊಂಡಿದ್ದಾರೆ.7 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಿಯುಸಿ ಪರೀಕ್ಷೆಗೆ ಹಾಜರಾಗಿದ್ದಾರೆ. ಮಾ.9ರಿಂದ ಪರೀಕ್ಷೆ ಆರಂಭವಾಗಿದೆ.
ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ
ಕಲ್ಲಡ್ಕ: ದ್ವಿತೀಯ ಪಿಯುಸಿ ಪರೀಕ್ಷೆ ದಿನವೇ ವಿದ್ಯಾರ್ಥಿನಿಯೋರ್ವಳು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲ್ಲಡ್ಕದಲ್ಲಿ ನಡೆದಿದೆ.
ಬಾಳ್ತಿಲ ಗ್ರಾಮ ಪಂಚಾಯತ್ ಬಳಿಯ ನಿವಾಸಿ ಚಂದ್ರಶೇಖರ್ ಗೌಡ ಮತ್ತು ಸೌಮ್ಯ ದಂಪತಿ ಪುತ್ರಿ ವೈಷ್ಣವಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಕಲ್ಲಡ್ಕ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ವೈಷ್ಣವಿ ಕಾಲೇಜಿಗೆಂದು ಹೊರಟು ಏನೋ
ಮರೆತು ಹೋಗಿದ್ದೇನೆಂದು ವಾಪಾಸ್ ಮನೆಗೆ ಬಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.