- ಶಿವಮೊಗ್ಗದಲ್ಲಿ ಈಶ್ವರಪ್ಪ ವಿರುದ್ಧ ಬಂಡಾಯ ಸ್ಪರ್ಧೆ
- ಶಿವಮೊಗ್ಗ ಕಾಂಗ್ರೆಸ್ ಟಿಕೆಟ್ ಬಹುತೇಕ ಪಕ್ಕಾ!?
NAMMUR EXPRESS NEWS
ಶಿವಮೊಗ್ಗ: ಶಿವಮೊಗ್ಗದಲ್ಲಿ ಬಿಜೆಪಿಗೆ ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ ರಾಜೀನಾಮೆ ನೀಡಿದ್ದು ಬಿಜೆಪಿಯಲ್ಲಿ ಭಾರೀ ಸಂಚಲನ ಮೂಡಿಸಿದ್ದಾರೆ.
ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಲು ಆಯನೂರು ಮಂಜುನಾಥ್ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ಪಟ್ಟಿ ಕೂಡ ಬಿಡುಗಡೆ ಆಗಲು ಸಿದ್ಧತೆ ನಡೆಸಿದ್ದು ಆಯನೂರು ಮಂಜುನಾಥ್ ಹೆಸರು ಘೋಷಣೆಯಾಗುವ ಸಾಧ್ಯತೆ ಇದೆ.
ಆಯನೂರು ಮಂಜುನಾಥ್ ಮಾತನಾಡಿ,ನಾನು ರಾಜೀನಾಮೆ ಕೊಟ್ಟು ಕೆ.ಎಸ್ ಈಶ್ವರಪ್ಪ ವಿರುದ್ಧ ಬಂಡಾಯವಾಗಿ ಸ್ಪರ್ಧೆ ಮಾಡುತ್ತೇನೆ. ನಾನು ಮಾಜಿ ಸಚಿವ ಈಶ್ವರಪ್ಪ ಸವಾಲನ್ನ ಸ್ವೀಕಾರ ಮಾಡುತ್ತೇನೆ. ಈಶ್ವರಪ್ಪರಿಂದ ಅಭಿವೃದ್ದಿಯಾಗಿಲ್ಲ ಪ್ರಚೋದನೆಯೇ ಅವರ ಬಂಡವಾಳವಾಗಿದೆ ಎಂದು ಆರೋಪಿಸಿದ್ದಾರೆ. ಆಯನೂರು ಮಂಜುನಾಥ್ ಅವರ ಈ ನಡೆ ರಾಜಕೀಯವಾಗಿ ಕುತೂಹಲ ಮೂಡಿಸಿದೆ.