- ಏ.10ರವರೆಗೆ ಭಾರೀ ಮಳೆ: ಜನರಿಗೆ ಎಚ್ಚರಿಕೆ
- ಕಳೆದ ಕೆಲ ದಿನಗಳಿಂದ ಬೆಂಗಳೂರಲ್ಲೂ ಮಳೆ
NAMMUR EXPRESS NEWS
ಬೆಂಗಳೂರು: ರಾಜ್ಯದ ಹಲವೆಡೆ ಕಳೆದ ಎರಡು ಮೂರು ದಿನಗಳಿಂದಲೂ ಭಾರೀ ಮಳೆ ಸುರಿಯುತ್ತಿದೆ. ಬೆಂಗಳೂರು ಸೇರಿದಂತೆ ಹಲವೆಡೆ ಭಾರೀ ಮಳೆಯಾಗಿದೆ.
ಮುಂದಿನ ನಾಲ್ಕು ದಿನಗಳ ಕಾಲ ಬಾರೀ ಮಳೆ ಸುರಿಯುವ ಕುರಿತು ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಅಧಿಕ ಮಳೆಯಾಗುವ ಸಾಧ್ಯತೆಯಿದೆ ಎಂದಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಏಪ್ರಿಲ್ 10ರವರೆಗೆ ಭಾರೀ ಮಳೆಯಾಗಲಿದ್ದು, ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಇಲಾಖೆ ನೀಡಿದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿಯ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲೂ ಮಳೆಯಾಗಲಿದ್ದು ಉತ್ತರ ಒಳನಾಡಿನ ಜಿಲ್ಲೆಗಳಾದ ವಿಜಯಪುರ, ಕಲಬುರಗಿ, ಹಾವೇರಿ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೊಡಗು, ಕೋಲಾರ, ಮೈಸೂರು, ರಾಮನಗರ ಜಿಲ್ಲೆಗಳ ಹಲವು ಕಡೆಗಳಲ್ಲಿ ಗುಡುಗು ಸಹಿತ ಅಧಿಕ ಮಳೆಯಾಗಲಿದೆ. ಕೋಲಾರ, ಮಂಡ್ಯ ಮೈಸೂರು, ಚಾಮರಾಜನಗರ ಹಾಗೂ ಕೊಡಗು ಭಾಗದಲ್ಲಿ ಭಾರಿ ಮಳೆ ಅಬ್ಬರಿಸುವ ಮುನ್ಸೂಚನೆ ಯಿದ್ದು ಬಿರುಗಾಳಿ, ಗುಡುಗು-ಮಿಂಚು ಸಹಿತ ಮಳೆಯಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಕರಾವಳಿಯ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಮೈಸೂರು, ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಸಂಜೆ ವೇಳೆಗೆ ಮೋಡಕವಿದ ವಾತಾವರಣ ನಿರ್ಮಾಣವಾಗಲಿದ್ದು, ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗಲಿದೆ.
ರಾಜಧಾನಿಯಲ್ಲಿ ಮಳೆ ಅವಾಂತರ!
ರಾಜಧಾನಿ ಬೆಂಗಳೂರಲ್ಲಿ ಎರಡು ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಭಾರೀ ಮಳೆಗೆ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಈ ನಡುವೆ ರಾಜ್ಯದಲ್ಲಿ ಭಾರೀ ಬಿಸಿಲು ಜನರನ್ನು ಕಂಗೆಡಿಸಿದೆ.