- ಹೈಕಮಾಂಡ್, ಬಿಜೆಪಿ ನಾಯಕರು, ಕಾರ್ಯಕರ್ತರಿಗೆ ಧನ್ಯವಾದ ಹೇಳಿದ ಜ್ಞಾನೇಂದ್ರ
NAMMUR EXPRESS NEWS
ತೀರ್ಥಹಳ್ಳಿ : ತೀರ್ಥಹಳ್ಳಿ ಕ್ಷೇತ್ರದಿಂದ ಹಾಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಬಿಜೆಪಿ ಟಿಕೆಟ್ ನೀಡಲಾಗಿದೆ.
ಸತತವಾಗಿ ಹತ್ತನೇ ಬಾರಿ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದು ಇಡೀ ಕ್ಷೇತ್ರದಲ್ಲಿ ಮುಖಂಡರು, ಕಾರ್ಯಕರ್ತರು ಸಂಭ್ರಮ ವ್ಯಕ್ತಪಡಿಸಿದ್ದಾರೆ.
ಆರಗ ಜ್ಞಾನೇಂದ್ರ ಅವರು ಈ ಬಗ್ಗೆ ಪ್ರತಿಕ್ರಿಯಿಸಿ ಅವಕಾಶ ಮಾಡಿಕೊಟ್ಟರುವಂತಹ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಜೀಯವರಿಗೆ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ದಾ ಅವರಿಗೆ, ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರಿಗೆ, ಬಿ.ಎಸ್ ಯಡಿಯೂರಪ್ಪನವರಿಗೆ ಹಾಗೂ ಕರ್ನಾಟಕದ ನಮ್ಮ ಪಕ್ಷದ ಎಲ್ಲಾ ಹಿರಿಯರಿಗೂ ಹಾಗೂ ನನ್ನ ಜೀವಾಳದಂತಿರುವ ಕಾರ್ಯಕರ್ತರಿಗೆ ತುಂಬು ಹೃದಯದ ಧನ್ಯವಾದಗಳು.ಮತ್ತೊಮ್ಮೆ ತೀರ್ಥಹಳ್ಳಿಯಲ್ಲಿ ಕಮಲವನ್ನು ಅರಳಿಸುವ ನಿಟ್ಟಿನಲ್ಲಿ ನಾವೆಲ್ಲರೂ ಒಮ್ಮತದಿಂದ ಕಾರ್ಯನಿರ್ವಹಿಸೋಣ ಎಂದು ವಿನಂತಿಸಿಕೊಳ್ಳುತ್ತೇನೆ ಎಂದು ಮನವಿ ಮಾಡಿದ್ದಾರೆ.
ಕಳೆದ ಒಂದು ವರ್ಷದಿಂದ ಗೃಹ ಸಚಿವರಾದ್ರೂ ಹಳ್ಳಿ ಹಳ್ಳಿ ಸುತ್ತಾಡಿ ಪಕ್ಷ ಸಂಘಟನೆ ಮಾಡುತ್ತಿದ್ದಾರೆ.