- ತೀವ್ರ ಜ್ವರದಿಂದ ಬಳಲುತ್ತಿರುವ ಮಾಜಿ ಸಿಎಂ
NAMMUR EXPRESS NEWS
ಬೆಂಗಳೂರು : ನಿರಂತರ ಪ್ರವಾಸ ಹಾಗೂ ಕಾರ್ಯಕ್ರಮಗಳ ಒತ್ತಡದಿಂದ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ವೈದ್ಯರ ಸಲಹೆಯ ಮೇರೆಗೆ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವಿಶ್ರಾಂತವಾಗಿ ಪ್ರವಾಸ ಮಾಡಿದ್ದ ಮಾಜಿ ಮುಖ್ಯಮಂತ್ರಿಗಳು ಜ್ವರದಿಂದ ಬಳಲುತ್ತಿದ್ದು, ಅವರಿಗೆ ವಿಶ್ರಾಂತಿ ಅಗತ್ಯವಿದೆ ಎಂದು ವೈದ್ಯರು ಸಲಹೆ ಮಾಡಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಮಾಜಿ ಮುಖ್ಯಮಂತ್ರಿಗಳು, ವಿಶ್ರಾಂತಿ ನಂತರ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗುವುದಾಗಿ ತಿಳಿಸಿದ್ದಾರೆ. ಅಲ್ಲದೆ, ಜೆಡಿಎಸ್ ಪಕ್ಷದ ಕಾರ್ಯಕರ್ತರು, ಮುಖಂಡರು ಈ ಬಗ್ಗೆ ಆತಂಕಕ್ಕೆ ಒಳಗಾಗುವುದು ಬೇಡ ಎಂದು ಹೆಚ್.ಡಿ.ಕುಮಾರಸ್ವಾಮಿ ಮನವಿ ಮಾಡಿದ್ದಾರೆ. ವಿಧಾನಸಭೆ ಚುನಾವಣೆಗೆ ಜೆಡಿಎಸ್ ಪಕ್ಷದ ಪರ ಪ್ರಚಾರದಲ್ಲಿ ನಿರತರಾಗಿದ್ದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ, ನಿರಂತರ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿದ್ದ ಕಾರಣ, ಆಯಾಸದಿಂದಾಗಿ ಜ್ವರ ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿಶ್ರಾಂತಿ ತೆಗೆದುಕೊಂಡ ಬಳಿಕ ಚುನಾವಣಾ ಪ್ರಚಾರದ ಕಾರ್ಯಗಳಲ್ಲಿ ಮತ್ತೆ ಭಾಗಿಯಾಗುವುದಾಗಿ ಹೆಚ್ಡಿಕೆ ತಿಳಿಸಿದ್ದಾರೆ.