- ಒಡಿಶಾದಲ್ಲಿ ಘಟನೆ: 900ಕ್ಕೂ ಹೆಚ್ಚು ಮಂದಿಗೆ ಗಾಯ
- ಸಾವಿನ ಸಂಖ್ಯೆ ಇನ್ನು ಹೆಚ್ಚಾಗುವ ಸಾಧ್ಯತೆ
- ರೈಲು ಡಿಕ್ಕಿಗೆ ಕಾರಣ ಏನು? ತನಿಖೆಗೆ ಆದೇಶ!
NAMMUR EXPRESS NEWS
ಒಡಿಶಾ: ಒಡಿಶಾದ ಬಾಲಸೋರ್ನ ಬಹನಾಗಾ ನಿಲ್ದಾಣದ ಬಳಿ 3 ರೈಲುಗಳ ನಡುವೆ ನಡೆದ ರೈಲು ಡಿಕ್ಕಿ ಸುಮಾರು 300 ಮಂದಿ ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಈ ಘಟನೆಯಲ್ಲಿ 300 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ರಕ್ಷಣಾ ಕಾರ್ಯಾಚರಣೆ ಬಿರುಸಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ.
ಯಶವಂತಪುರದಿಂದ ಹೌರಾದೆಡೆಗೆ ಸಾಗುತ್ತಿದ್ದ ಮತ್ತೊಂದು ರೈಲು ಅದೇ ಮಾರ್ಗವಾಗಿ ಸಾಗುತ್ತಿದ್ದಾಗ ಹಳಿ ತಪ್ಪಿದ ಬೋಗಿಗಳಿಗೆ ಡಿಕ್ಕಿ ಹೊಡೆದು ಮತ್ತೊಂದು ಹಳಿ ಮೇಲೆ ಬಿದ್ದಿತ್ತು. ಸ್ವಲ್ಪ ಸಮಯದ ನಂತರ ಯಶವಂತಪುರದಿಂದ ಹೌರಾಕ್ಕೆ ತೆರಳುತ್ತಿದ್ದ ಮತ್ತೊಂದು ರೈಲು ಹಳಿತಪ್ಪಿದ ಬೋಗಿಗಳಿಗೆ ಡಿಕ್ಕಿ ಹೊಡೆದು ಅದರ 3-4 ಬೋಗಿಗಳು ಹಳಿತಪ್ಪಿವೆ ಎಂದು ತಿಳಿಸಿದ್ದಾರೆ.
23 ಬೋಗಿಗಳಲ್ಲಿ 3 ಬೋಗಿಗಳು ಸಂಪೂರ್ಣ ನುಜ್ಜು ಗುಜ್ಜಾಗಿವೆ. ದೇಶದ ದೊಡ್ಡ ದುರಂತ ಇದಾಗಿದೆ. ರೈಲ್ವೆ ಸಚಿವ ಅಶ್ವಿನ್ ವೈಷ್ಣವಿ ತನಿಖೆಗೆ ಆದೇಶ ಮಾಡಿದ್ದಾರೆ.
ಹಳಿಗಳ ಮೇಲೆ ದೋಷ ಕಾರಣ?: ‘ಒಡಿಶಾದ ಈ ಮಹಾ ರೈಲು ದುರಂತಕ್ಕೆ ರೈಲು ಹಳಿಗಳಲ್ಲಿನ ದೋಷವೇ ಕಾರಣವಿರಬಹುದು’ ಎಂದು ಪ್ರಾಥಮಿಕವಾಗಿ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.
ಹಳಿಗಳು ದೋಷಯುಕ್ತವಾಗಿದ್ದವೆಂದು ಶಂಕಿಸಲಾಗಿದೆ. ಆದರೆ, ತನಿಖೆಯ ನಂತರ ದುರಂತಕ್ಕೆ ನಿಖರ ಕಾರಣವೇನೆಂದು ತಿಳಿಯಲಿದೆ’ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.
ರೈಲ್ವೆ ಸುರಕ್ಷತಾ ಆಯುಕ್ತರು ತನಿಖೆ ಕೈಗೊಳ್ಳಲಿದ್ದಾರೆ. ತಪ್ಪಿತಸ್ಥರವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು
ಬೈಯಪ್ಪನಹಳ್ಳಿಯಿಂದ ಹೊರಟಿದ್ದ ಹೌರಾ ಎಕ್ಸ್ಪ್ರೆಸ್!
ಬೆಂಗಳೂರು: ಒಡಿಶಾದ ಬಹನಾಗಾ ರೈಲು ನಿಲ್ದಾಣ ಬಳಿ ರೈಲುಗಳು ಅಪಘಾತ ಸಂಭವಿಸಿದ್ದು, ಬೆಂಗಳೂರಿನ ಬೈಯಪ್ಪನಹಳ್ಳಿಯ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ನಿಂದ ಹೌರಾಕ್ಕೆ ಹೊರಟಿದ್ದ ರೈಲಿನಲ್ಲಿದ್ದ ಹಲವು ಪ್ರಯಾಣಿಕರು ಮೃತಪಟ್ಟಿದ್ದಾರೆ. ರಾಜ್ಯದವರೂ ಇರುವ ಶಂಕೆಯಿದೆ. ಬೈಯಪ್ಪನಹಳ್ಳಿಯಿಂದ ಹೊರಟಿದ್ದ ರೈಲು, ಕೆ.ಆರ್. ಪುರ ಹಾಗೂಬಂಗಾರಪೇಟೆ ನಿಲ್ದಾಣ ಮಾರ್ಗವಾಗಿ ಆಂಧ್ರಪ್ರದೇಶ ಪ್ರವೇಶಿಸಿಹೌರಾದತ್ತ ಹೊರಟಿತ್ತು. ಇದೇ ಹೌರಾ ಎಕ್ಸ್ಪ್ರೆಸ್ ರೈಲಿನಲ್ಲಿ
ಕರ್ನಾಟಕದ ಪ್ರಯಾಣಿಕರಿದ್ದರು. ಜೊತೆಗೆ, ಬೆಂಗಳೂರಿನಲ್ಲಿ ನೆಲೆಸಿದ್ದ ಉತ್ತರ ಪ್ರದೇಶ ಕಾರ್ಮಿಕರೂ ಪ್ರಯಾಣಿಸುತ್ತಿದ್ದರೆಂಬ ಮಾಹಿತಿ ಇದೆ. ಆದರೆ, ಯಾರೊಬ್ಬರ ಹೆಸರು ಹಾಗೂ ವಿಳಾಸ ಸದ್ಯಕ್ಕೆ ಗೊತ್ತಾಗಿಲ್ಲ.
ಪ್ರಯಾಣಿಕರ ಬಗ್ಗೆ ಮಾಹಿತಿ ಇದ್ದವರು ಅಥವಾ ಕುಟುಂಬದ ಸದಸ್ಯರು ಸಹಾಯವಾಣಿಗೆ ಕರೆ ಮಾಡಬಹುದು ಎಂದು ರೈಲ್ವೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಸಹಾಯವಾಣಿ ಸಂಖ್ಯೆ: 080-22942666, 080-22871291 (23 ನಿಯಂತ್ರಣ ಕೊಠಡಿ) ಹಾಗೂ ಒಡಿಶಾದ 08249591559, 67822262286