ಉಡುಪಿ:ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತ ಉಂಟಾಗುವ ಸಂಭವವಿದ್ದು, ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 4 ದಿನಗಳಲ್ಲಿ ಸಮುದ್ರದ ಅಲೆಗಳಲ್ಲಿ ಏರಿಳಿತ ಉಂಟಾಗುವ ಮತ್ತು ಮಳೆಯಾಗುವ ಸಾಧ್ಯತೆಯಿರುತ್ತದೆ. ಈ ಹಿನ್ನೆಲೆಯಲ್ಲಿ
ಈ ಹಿನ್ನಲೆಯಲ್ಲಿ ಜಿಲ್ಲಾಡಳಿತ (ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ)ದಿಂದ ಮುಂಜಾಗ್ರತಾ ಕ್ರಮವನ್ನು ಕೈಗೊಳ್ಳುವಂತೆ ಸಾರ್ವಜನಿಕರಿಗೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ ಮೀನುಗಾರರು ಮೀನುಗಾರಿಕೆಗಾಗಿ ಸಮುದ್ರಕ್ಕೆ ತೆರಳುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.
ಸಾರ್ವಜನಿಕರು/ ಪ್ರವಾಸಿಗರು ಸಮುದ್ರ ನದಿ ತೀರ ಪ್ರದೇಶಗಳಲ್ಲಿ ಇಳಿಯದಂತೆ ಕಟ್ಟೆಚ್ಚರ ವಹಿಸುವಂತೆ ಕೋರಲಾಗಿದೆ
ಈ ಸಂದರ್ಭದಲ್ಲಿ ಮಕ್ಕಳು/ಸಾರ್ವಜನಿಕರು ಸಮುದ್ರ ತೀರ, ಅಪಾಯಕಾರಿ ವಿದ್ಯುತ್ಕಂಬ /ಕಟ್ಟಡ /ಮರಗಳ ಹತ್ತಿರ/ಕಳಗೆ ನಿಲ್ಲಬಾರದು ಮತ್ತು ನೆರೆ ಪೀಡಿತ ತಗ್ಗು ಪ್ರದೇಶದಲ್ಲಿ ವಾಸಿಸುವ ಸಾರ್ವಜನಿಕರು ಸುರಕ್ಷಿತ ಸ್ಥಳಗಳನ್ನು ತಲುವುವುದು.
* ಜಿಲ್ಲಾ/ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತನ್ನು ನಿಭಾಯಿಸಲು ತಯಾರಿ ಮಾಡಿಕೊಳ್ಳುವುದು. ಎಂದು ಜಿಲ್ಲಾಧಿಕಾರಿ ಪ್ರಕಟಣೆ ತಿಳಿಸಿದೆ