ಎನ್ಪಿಎಸ್ ರದ್ದು:ಸರಕಾರಿ ನೌಕರರಿಗೆ ಸಿಹಿ ಸುದ್ದಿ!
– ಹಳೆ ಪಿಂಚಣಿ ವ್ಯವಸ್ಥೆ ಜಾರಿಗೆ: ಸಿದ್ದರಾಮಯ್ಯ ಹೇಳಿಕೆ
– 19 ಸಾವಿರ ಕೋಟಿ ಹಣ ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಕ್ಕೆ ಬಳಕೆ
NAMMUR EXPRESS NEWS
ದೇಶದಾದ್ಯಂತ 2006ರ ಎಪ್ರಿಲ್ 1ರಿಂದಲೇ ಎನ್ಪಿಎಸ್ ಜಾರಿಯಾಗಿದೆ. ರಾಜ್ಯದಲ್ಲಿನ 2.98 ಲಕ್ಷ ನೌಕರರು ಎನ್ಪಿಎಸ್ ವ್ಯಾಪ್ತಿಗೆ ಒಳಪಡುತ್ತಿದ್ದು, ಪಿಂಚಣಿ ಮೊತ್ತವನ್ನು ಎನ್ಎಸ್ಡಿಎಲ್ನಲ್ಲಿ ಠೇವಣಿ ಇರಿಸಲಾಗುತ್ತಿದೆ. ಆದ್ರೆ ಇದೀಗ ಎನ್ಪಿಎಸ್ ರದ್ದು ಮಾಡುವುದಾಗಿ ಸರಕಾರಿ ನೌಕರರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ.
ಕರ್ನಾಟಕದಲ್ಲಿ ಎನ್ಪಿಎಸ್ ರದ್ದು ಮಾಡಿ, ಹಳೆ ಪಿಂಚಣಿ ವ್ಯವಸ್ಥೆ ಜಾರಿಗೆ ಸಂಬಂಧಿಸಿದಂತೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ಸರಕಾರಿ ಎನ್ಪಿಎಸ್ ನೌಕರರ ಸಂಘ ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ರಾಜ್ಯದಲ್ಲಿ ಎನ್ಪಿಎಸ್ ರದ್ದು ಮಾಡಿ ಹಳೆ ಪಿಂಚಣಿ ವ್ಯವಸ್ಥೆಯನ್ನು ಜಾರಿಗೊಳಿಸುವ ಬಗ್ಗೆ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುತ್ತದೆ. ಆದರೆ ಸರಕಾರಿ ನೌಕರರು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದು ಸಿದ್ದರಾಮಯ್ಯ ಸೂಚನೆಯನ್ನು ನೀಡಿದ್ದಾರೆ.
ದೇಶದಾದ್ಯಂತ 2006ರ ಎಪ್ರಿಲ್ 1ರಿಂದಲೇ ಎನ್ಪಿಎಸ್ ಜಾರಿಯಾಗಿದೆ. ರಾಜ್ಯದಲ್ಲಿನ 2.98 ಲಕ್ಷ ನೌಕರರು ಎನ್ಪಿಎಸ್ ವ್ಯಾಪ್ತಿಗೆ ಒಳಪಡುತ್ತಿದ್ದು, ಪಿಂಚಣಿ ಮೊತ್ತವನ್ನು ಎನ್ಎಸ್ಡಿಎಲ್ನಲ್ಲಿ ಠೇವಣಿ ಇರಿಸಲಾಗುತ್ತಿದೆ. ಹೀಗೆ ಠೇವಣಿ ಇರಿಸಿರುವ ಮೊತ್ತವು ನಿವೃತ್ತಿಯ ವೇಳೆಯಲ್ಲಿ ಸಿಗುತ್ತಿದೆ. ಕಳೆದ ವರ್ಷ ಹಳೆ ಪಿಂಚಣಿ ವ್ಯವಸ್ಥೆಯನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಎನ್ಪಿಎಸ್ ನೌಕರರು ವೋಟ್ ಫಾರ್ ಎನ್ಪಿಎಸ್ನಲ್ಲಿ ಭಾಗಿಯಾದವರ ಮೇಲೆ ಕೈಗೊಂಡಿರುವ ಶಿಸ್ತಿನ ಕ್ರಮವನ್ನು ಕೈಬಿಡುವ ಕುರಿತು ಸರಕಾರ ತೀರ್ಮಾನ ಕೈಗೊಳ್ಳಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ವಿ.ಎಸ್.ಉಗ್ರಪ್ಪ ತಿಳಿಸಿದ್ದಾರೆ
ಸರ್ಕಾರಿ ನೌಕರರ ಸಂಘ ಹೇಳಿದ್ದೇನು?
ಎನ್ಪಿಎಸ್ ನೌಕರರ ಸಂಘದ ರಾಜ್ಯಾಧ್ಯಕ್ಷ ಶಾಂತಾರಾಮ್ ಅವರು ಮಾತನಾಡಿ, ರಾಜಾಸ್ತಾನ, ಛತ್ತೀಸ್ ಗಡದಲ್ಲಿ ಎನ್.ಪಿ.ಎಸ್ ರದ್ದಾಗಿದ್ದು, ಕರ್ನಾಟಕದಲ್ಲಿಯೂ ಅದನ್ನು ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಬೇಕು. ಎನ್.ಪಿ.ಎಸ್ ರದ್ದು ಮಾಡುವುದರಿಂದ ಯೋಜನೆಯಡಿ ಲಭ್ಯವಿರುವ ಒಟ್ಟು 19 ಸಾವಿರ ಕೋಟಿ ಹಣವನ್ನು ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ದೊರೆಯಲಿದೆ. ನೌಕರರ ಪಾಲಿನ 9 ಸಾವಿರ ಕೋಟಿ ಜಿಪಿಎಫ್ ಗೆ ಪರಿವರ್ತನೆ ಮಾಡಿಕೊಳ್ಳುಬಹುದು ಹಾಗೂ ಸರ್ಕಾರದ 10 ಸಾವಿರ ಕೋಟಿ ರೂ.ಗಳು ಸರ್ಕಾರದ ಪಾಲನ್ನು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಬಳಕೆ ಮಾಡಿಕೊಳ್ಳಬಹುದು ಎಂದು ಸಲಹೆ ನೀಡಿದ್ದಾರೆ.