ಹೆಬ್ರಿಯ ಎಸ್.ಆರ್ ಕಾಲೇಜಲ್ಲಿ ಯೋಗ ದಿನ!
– ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ
– ವಿದ್ಯಾರ್ಥಿಗಳು, ಸಿಬ್ಬಂದಿ ಯೋಗ ಮಾಡಿ ಆಚರಣೆ
NAMMUR EXPRESS NEWS
ಹೆಬ್ರಿ: ಎಸ್.ಆರ್. ಸಮೂಹ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ದೈಹಿಕ ಶಿಕ್ಷಕರಾದ ಮಧುಶೇಖರ್ ಅವರ ನೇತೃತ್ವದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಎಸ್.ಆರ್. ಸಮೂಹ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿಯಾದ ಹೆರಾಲ್ಡ್ ಲೂಯಿಸ್, ಎಸ್.ಆರ್. ಪಬ್ಲಿಕ್ ಸ್ಕೂಲ್ನ ಪ್ರಾಂಶುಪಾಲರಾದ ಭಗವತಿ, ಎಸ್.ಆರ್.ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಗೋಪಾಲ ಆಚಾರ್ಯ, ಶಿಕ್ಷಕರಾದ ಅಕ್ಷತಾ, ಅಕ್ಷಿತಾ, ಸಂಗೀತಾ, ಶಾರದಾ, ಸುಕೇಶ್, ಜಗನ್ನಾಥ್ ಮತ್ತಿತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.