ಪರಶುರಾಮ ಥೀಂ ಪಾರ್ಕ್ ಭೇಟಿ: ತಾತ್ಕಾಲಿಕ ನಿಷೇಧ!
– ಮೂರ್ತಿ ಬಲಪಡಿಸುವಿಕೆ, ಸಿಡಿಲು ನಿರೋಧಕ ಅಳವಡಿಕೆ ಕಾಮಗಾರಿ
– ಸೆಪ್ಟೆಂಬರ್ ಅಂತ್ಯದವರೆಗೆ ಪ್ರವಾಸಿಗರಿಗೆ ನಿಷೇಧ
– ದೇವಸ್ಥಾನದ ನೌಕರರಿಗೆ ಆರೋಗ್ಯ ವಿಮೆ ಸೌಲಭ್ಯ
NAMMUR EXPRESS NEWS
ಕಾರ್ಕಳ: ಕಾರ್ಕಳ ತಾಲೂಕು ಯರ್ಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪರಶುರಾಮ ಥೀಂ ಪಾರ್ಕ್ನಲ್ಲಿ ಪರಶುರಾಮ ಮೂರ್ತಿಯನ್ನು ಬಲಪಡಿಸುವ, ಮೂರ್ತಿಗೆ ಸಿಡಿಲು ನಿರೋಧಕವನ್ನು ಅಳವಡಿಸುವ, ಮೂರ್ತಿಗೆ ತುಕ್ಕು ನಿರೋಧಕ ಲೇಪನದ ಹಾಗೂ ಇನ್ನಿತರ ಮುಕ್ತಾಯದ ಕಾಮಗಾರಿಯನ್ನು ಪೂರ್ಣಗೊಳಿಸಲು ಅನುಕೂಲವಾಗುವಂತೆ ಜೂನ್ 26 ರಿಂದ ಸೆಪ್ಟಂಬರ್ ಅಂತ್ಯದವರೆಗೆ ಪರಶುರಾಮ ರ್ಥೀಂ ಪಾರ್ಕ್ಗೆ ಸಾರ್ವಜನಿಕರು ಹಾಗೂ ಪ್ರವಾಸಿಗರ ಭೇಟಿಯನ್ನು ನಿಷೇಧಿಸಲಾಗಿದೆ ಎಂದು ಕಾರ್ಕಳ ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೇವಸ್ಥಾನದ ನೌಕರರಿಗೆ ಆರೋಗ್ಯ ವಿಮೆ ಸೌಲಭ್ಯ
ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ವತಿಯಿಂದ ಜಿಲ್ಲೆಯ ಪ್ರವರ್ಗ-ಸಿ ದೇವಸ್ಥಾನದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರರು ಆರೋಗ್ಯ ವಿಮೆ ಸೌಲಭ್ಯ ಪಡೆಯಲು, ನೌಕರರ ಹೆಸರು, ಹುದ್ದೆಗೆ ಸೇರಿದ ದಿನಾಂಕ, ಹುಟ್ಟಿದ ದಿನಾಂಕ, ಬ್ಯಾಂಕಿನ ಹೆಸರು, ಬ್ಯಾಂಕ್ ಖಾತೆಯ ಸಂಖ್ಯೆ, ಐ.ಎಫ್.ಎಸ್.ಸಿ ಕೋಡ್ ವಿವರವನ್ನು ಜೂನ್ 26 ರ ಒಳಗಾಗಿ ಸಹಾಯಕ ಆಯುಕ್ತರ ಕಚೇರಿ, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ, ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2575660 ಇಲ್ಲಿಗೆ ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ : ಗೃಹಜ್ಯೋತಿ ಅರ್ಜಿ ನೋಂದಣಿಗೆ ಹೊಸ ಲಿಂಕ್!
HOW TO APPLY : NEET-UG COUNSELLING 2023