ಅಂತೂ ಮುಂಗಾರು ಮಳೆ ಶುರುವಾಯಿತು!
– ರಾಜ್ಯದ ವಿವಿಧೆಡೆ ಮಳೆ: ಮಳೆಗೆ ಇಬ್ಬರು ಬಲಿ!
– ಮುಂಗಾರು ಬಹುತೇಕ ಫಿಕ್ಸ್: ಜನರಲ್ಲಿ ಹೊಸ ಭರವಸೆ
NAMMUR EXPRESS NEWS
ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಸೇರಿ ಬಾಗಲಕೋಟೆ, ಹಾವೇರಿ, ವಿಜಯನಗರ, ಗದಗ, ರಾಮನಗರ, ಕಲ್ಯಾಣ ಕರ್ನಾಟಕದ ಕಲಬುರಗಿ, ಯಾದಗಿರಿ, ಬೀದರ್, ಕೊಪ್ಪಳ, ರಾಯಚೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಶನಿವಾರ ಮಳೆಯಾಗಿದೆ. ಬಾಗಲಕೋಟೆ ಜಿಲ್ಲೆಯಲ್ಲಿ ಸಿಡಿಲಿಗೆ ರೈತರೊಬ್ಬರು ಮೃತಪಟ್ಟಿದ್ದು, ಮತ್ತೊಬ್ಬರಿಗೆ ಗಾಯವಾಗಿದೆ. ಇನ್ನು ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿ ಮಳೆ ಕಾರಣ ವಿದ್ಯುತ್ ತಂತಿ ತಗುಲಿ ಮಹಿಳೆ ಮೃತಪಟ್ಟಿದ್ದಾಳೆ.
ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಆಲಗುಂಡಿ ಬಿ.ಕೆ. ಗ್ರಾಮದಲ್ಲಿ ಶನಿವಾರ ಸಿಡಿಲು ಬಡಿದು ರೈತ ಬಸಪ್ಪ ಮಾದರ (36) ಎಂಬುವರು ಮೃತಪಟ್ಟಿದ್ದಾರೆ. ವಿಠಲ ಮಾದರ ಎಂಬುವರಿಗೆ ಗಾಯವಾಗಿದೆ. ಬೆಳಗಾವಿ, ಹಾವೇರಿ, ಗದಗ, ವಿಜಯನಗರ ಜಿಲ್ಲೆಯ ವಿವಿಧೆಡೆ ಮಳೆಯಾಗಿದೆ.
ಬೆಂಗಳೂರು ನಗರ, ಗ್ರಾಮಾಂತರ, ಕೋಲಾರ, ರಾಮನಗರ, ತುಮಕೂರು ಜಿಲ್ಲೆಯಲ್ಲೂ ಮಳೆ ಆಗಮನವಾಗಿದೆ.
ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ, ಯಾದಗಿರಿ, ಬೀದರ್, ಕೊಪ್ಪಳ, ರಾಯಚೂರು ಜಿಲ್ಲೆಗಳ ಹಲವು ತಾಲ್ಲೂಕುಗಳಲ್ಲಿ ಶನಿವಾರ ಉತ್ತಮ ಮಳೆಯಾಗಿದ್ದು, ವಾತಾವರಣ ತುಸು ತಂಪಾಗಿದೆ. ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸಿಡಿಲು ಬಡಿದು 19 ಕುರಿಗಳು ಮೃತಪಟ್ಟಿವೆ. ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನಲ್ಲಿ ಉತ್ತಮವಾಗಿ ಮಳೆಯಾಗಿದೆ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಶನಿವಾರ ಉತ್ತಮ ಮಳೆಯಾಗಿದೆ. ಉಡುಪಿ ಜಿಲ್ಲೆ ಚಿತ್ತೂರಲ್ಲಿ ಅತ್ಯಧಿಕ 11.2 ಸೆಂ.ಮೀ., ಇದುರುಕುಂಚಾಡಿ ಮತ್ತು ಹಕ್ಲಾಡಿಯಲ್ಲಿ 10 ಸೆಂ.ಮೀ., ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿಯಲ್ಲಿ 6.5 ಸೆಂ.ಮೀ. ಮೂಡುಬಿದಿರೆಯಲ್ಲಿ 5.9 ಸೆಂ.ಮೀ. ಮಳೆ ದಾಖಲಾಗಿದೆ. ಉಡುಪಿ ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ಬಜೆ ಜಲಾಶಯಕ್ಕೆ ಒಳ ಹರಿವು ಶುರುವಾಗಿದೆ.
ಮಹಿಳೆ ಬಲಿ!: ವಿದ್ಯುತ್ ತಂತಿ ಸ್ಪರ್ಶಿಸಿ ಮಹಿಳೆ ಸಾವನ್ನಪ್ಪಿರುವ ಘಟನೆ ತಾಲೂಕಿನ ತಿಮಾಪುರ ಗ್ರಾಮದಲ್ಲಿ ನಡೆದಿದೆ.ಮೃತ ಮಹಿಳೆಯನ್ನು ಗಂಗಮ್ಮ (62) ಎಂದು ಗುರುತಿಸಲಾಗಿದೆ. ಮನೆ ಎದುರಿನ ವಿದ್ಯುತ್ ಕಂಬದ ಬಳಿ ಮೈನ್ಸ್ ತಂತಿ ಹರಿದು ಬಿದ್ದಿತ್ತು ಆಕಸ್ಮಿಕವಾಗಿ ತಂತಿ ಸ್ಪರ್ಶಿಸಿ ಗಂಗಮ್ಮ ಮರಣ ಹೊಂದಿದ್ದಾರೆ.
ಇದನ್ನೂ ಓದಿ : ಗೃಹಜ್ಯೋತಿ ಅರ್ಜಿ ನೋಂದಣಿಗೆ ಹೊಸ ಲಿಂಕ್!
HOW TO APPLY : NEET-UG COUNSELLING 2023