ಇನ್ನು ನಿಮ್ಮೂರಲ್ಲಿ ನೆಟ್ವರ್ಕ್ ಸಮಸ್ಯೆ ಇರಲ್ಲ!?
– ಶಿವಮೊಗ್ಗ ಜಿಲ್ಲೆಯ 87 ಕಡೆ ಹೊಸ ಮೊಬೈಲ್ ಟವರ್
– ಕಾಡಿನ ಊರು ತೀರ್ಥಹಳ್ಳಿಗೂ 27 ಟವರ್ ಭಾಗ್ಯ!
NAMMUR EXPRESS NEWS
ಮಲೆನಾಡಿನ ಮೊಬೈಲ್ ನೆಟ್ವರ್ಕ್ ಸಮಸ್ಯೆಗೆ ಶೀಘ್ರದಲ್ಲಿ ಪರಿಹಾರ ಸಿಗಲಿದೆ.
ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ 2275 ಕೋಟಿ ವೆಚ್ಚದಲ್ಲಿ ಒಟ್ಟು 87 ಮೊಬೈಲ್ ಟವರ್ ನಿರ್ಮಾಣಕ್ಕೆ ಅನುದಾನ ಮಂಜೂರಾಗಿದೆ ಎಂದು ಶಿವಮೊಗ್ಗ ಸಂಸದ ರಾಘವೇಂದ್ರ ಹೇಳಿದ್ದಾರೆ.
ಇನ್ನು ತೀರ್ಥಹಳ್ಳಿ ತಾಲೂಕಿನಲ್ಲಿ ಮೊಬೈಲ್ ಸಿಗ್ನಲ್ ಸಮಸ್ಯೆ ಇರುವ ಕಡೆಗಳಲ್ಲಿ 27 ಮೊಬೈಲ್ ಟವರ್ ನಿರ್ಮಿಸಲಿದ್ದು, ಈ ವರ್ಷದ ಡಿಸೆಂಬರ್ ಕೊನೆಯೊಳಗೆ ಪೂರ್ಣಗೊಳ್ಳಲಿದೆ.
ತೀರ್ಥಹಳ್ಳಿ ಪಟ್ಟಣ ಸಮೀಪದಲ್ಲಿ ತುಂಗಾನದಿಗೆ ಅಡ್ಡವಾಗಿ ನಿರ್ಮಾಣಗೊಳ್ಳುತ್ತಿರುವ ಕೆ56 ಕೋಟಿ ವೆಚ್ಚದ ಸೇತುವೆ ಕಾಮಗಾರಿಯನ್ನು ವೀಕ್ಷಿಸಿದ ನಂತರ ಮಾತನಾಡಿದ ಅವರು, ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮಲೆನಾಡು ಕರಾವಳಿ ಭಾಗದಲ್ಲಿ ಇರುವ ದೂರವಾಣಿ ಸಂಪರ್ಕದ ಸಮಸ್ಯೆಯನ್ನು ಹೋಗಲಾಡಿಸುವ ಸಲುವಾಗಿ ದೂರಸಂಪರ್ಕ ಇಲಾಖೆ ವತಿಯಿಂದ ಕ್ರಮ ಕೈಗೊಳ್ಳಲಾಗಿದೆ. ಈ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ದೂರಸಂಪರ್ಕ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಧನ್ಯವಾದ ಸಲ್ಲಿಸುವುದಾಗಿಯೂ ತಿಳಿಸಿದ್ದಾರೆ.
ಭರವಸೆ ಆಗದಿರಲಿ!: ಶಿವಮೊಗ್ಗ ಜಿಲ್ಲೆಯ ಸಾವಿರಾರು ಹಳ್ಳಿಗಳು ಇಂದಿಗೂ ಮೊಬೈಲ್ ಸಂಪರ್ಕ ಹೊಂದಿಲ್ಲ. ತುರ್ತು ಪರಿಸ್ಥಿತಿಯಲ್ಲಿ ಯಾರಿಗೂ ಕರೆ ಮಾಡದ ಪರಿಸ್ಥಿತಿ ಇದೆ. ಹೀಗಾಗಿ ಸರ್ಕಾರ ಹಾಗೂ ಜನ ಪ್ರತಿನಿಧಿಗಳು ತಕ್ಷಣ ಕ್ರಮಕೈಗೊಳ್ಳಬೇಕು ಎಂಬುದು ನಮ್ಮೂರ್ ಎಕ್ಸ್ ಪ್ರೆಸ್ ಅಗ್ರಹ.
ಇದನ್ನೂ ಓದಿ : ಗೃಹಜ್ಯೋತಿ ಅರ್ಜಿ ನೋಂದಣಿಗೆ ಹೊಸ ಲಿಂಕ್!
HOW TO APPLY : NEET-UG COUNSELLING 2023