ಶಿಕ್ಷಣ ಕ್ಷೇತ್ರಕ್ಕೆ ಹೊಸ ಬೆಳಕು ನೀಡುತ್ತೇನೆ: ಮಧು ಬಂಗಾರಪ್ಪ
– ಶಿವಮೊಗ್ಗ ಜಿಲ್ಲೆಯ ಅನೇಕ ಕಡೆ ಅಭಿವೃದ್ಧಿ ಪರಿಶೀಲನೆ
– ಶಿವಮೊಗ್ಗ ಲೋಕಸಭಾ ಅಭ್ಯರ್ಥಿ ಬಗ್ಗೆ ಪಕ್ಷ ತೀರ್ಮಾನ ಮಾಡುತ್ತೆ
NAMMUR EXPRESS NEWS
ತೀರ್ಥಹಳ್ಳಿ: ನನಗೆ ಸಿಕ್ಕಿರುವ ಶಿಕ್ಷಣ ಇಲಾಖೆ ದೊಡ್ಡದು, ಸಾಕಷ್ಟು ಸಮಸ್ಯೆಗಳು ಕೂಡ ಇವೆ. ರಾಜ್ಯದಲ್ಲಿ ಸುಮಾರು 45 ಸಾವಿರಕ್ಕೂ ಅಧಿಕ ಶಾಲೆಗಳಿವೆ. ಮೂಲಭೂತ ಸೌಕರ್ಯಗಳ ಕೊರತೆಯಿದೆ. ಎಲ್ಲವನ್ನು ಬಗೆಹರಿಸುತ್ತವೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ
ತೀರ್ಥಹಳ್ಳಿಯಲ್ಲಿ ಮಾತನಾಡಿದ ಅವರು, ಇಲಾಖೆಗೆ ಸಂಬಂಧಿಸಿದ ಅನುದಾನಕ್ಕೆ ಬಜೆಟ್ ಅಲ್ಲಿ ಸೇರಿಸಲು ಪ್ರಯತ್ನ ಮಾಡುತ್ತಿದ್ದೇನೆ. ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಕೂಡ ನಡೆಯುತ್ತಿದ್ದು, ಪ್ರಕರಣ ಕೋರ್ಟ್ ಅಲ್ಲಿದೆ. ಎಲ್ಲಾ ಸಮಸ್ಯೆಗಳ ಇತ್ಯರ್ಥಕ್ಕೆ ಒಂದು ಕಮಿಟಿ ಮಾಡಿ, ಕ್ರಮ ಕೈಗೊಳ್ಳುತ್ತೇವೆ ಎಂದರು.
ಶಿವಮೊಗ್ಗ ಜಿಲ್ಲೆಯ ಸಮಸ್ಯೆಗಳಿಗೆ ದನಿಯಾಗಲಿದ್ದೇನೆ. ಸೊರಬ, ಆನವಟ್ಟಿ ಹಾಗೂ ತಾಳಗುಪ್ಪದಲ್ಲಿ ಸಚಿವರ ಸ್ಥಳೀಯ ಕಚೇರಿ ಶುರು ಮಾಡಿದ್ದೇನೆ. ಇದರಿಂದ ಜನರ ಅಹವಾಲು ಸ್ವೀಕರಿಸಲು ಅನುಕೂಲ ಆಗುತ್ತೇ. ಈಗ ಎಲ್ಲಾ ತಾಲೂಕಿನ ಅಧಿಕಾರಿಗಳ ಜೊತೆ ಒಂದು ಹಂತದ ಸಭೆ ಮಾಡುತ್ತಿದ್ದೇನೆ. ಜಿಲ್ಲೆಯಲ್ಲಿ ಸಾಕಷ್ಟು ಸಮಸ್ಯೆ ಗಳಿವೆ.ಕುಡಿಯುವ ನೀರು ಪೂರೈಕೆ ಆಗಬೇಕು. ಮಳೆಯ ಕೊರತೆಯಿಂದ ಡ್ಯಾಂ ನಲ್ಲಿ ನೀರಿಲ್ಲ. ನನ್ನ ಕ್ಷೇತ್ರದಲ್ಲಿ ಟ್ಯಾಂಕರ್ ಮೂಲಕ ನೀರು ಕೊಡ್ತಾ ಇದ್ದೇವೆ. ಈ ಸಮಸ್ಯೆಯ ಜೊತೆಗೆ ಶಾಶ್ವತ ಪರಿಹಾರಕ್ಕೂ ಯೋಚನೆ ಮಾಡ್ತಾ ಇದ್ದೇನೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ಲೋಕಸಭಾ ಚುನಾವಣೆ ವಿಷಯದ ಬಗ್ಗೆ ಮಾತನಾಡಿ ಗೀತಾ ಶಿವರಾಜ್ ಕುಮಾರ್ ಪಕ್ಷಕ್ಕೆ ಸೇರಿದ್ದಾರೆ. ಚುನಾವಣೆ ಸ್ಪರ್ಧೆ ಬಗ್ಗೆ ಪಕ್ಷದ ನಾಯಕರು ತೀರ್ಮಾನ ಮಾಡ್ತಾರೆ. ಅದನ್ನೆಲ್ಲಾ ನಾನು ಮಾತಾಡಲ್ಲ. ತಪ್ಪಾಗುತ್ತೇ ಎಂದರು.
ಇದನ್ನೂ ಓದಿ : ನಾಯಿ ವೇದಿಕೆ ಮೇಲೆ ಪ್ರಶಸ್ತಿ ಪಡೆಯಿತು!!
HOW TO APPLY : NEET-UG COUNSELLING 2023