ಸ್ತ್ರೀಶಕ್ತಿ ಸಂಘಗಳ ಸಾಲಮನ್ನಾ?!
– ಮುಂದಿನ ವರ್ಷ ಸಾಲ ಮನ್ನಾ: ಸಿಎಂ ಭರವಸೆ?
NAMMUR EXPRESS NEWS
ಬೆಂಗಳೂರು: ಕಾಂಗ್ರೆಸ್ ಪಕ್ಷದ 5 ಗ್ಯಾರಂಟಿ ಜಾರಿಗೆ ಹಣ ಹೊಂದಿಸುವುದು ಕಷ್ಟಕರ ಆಗಿರುವುದರಿಂದ ಮುಂದಿನ ವರ್ಷ ಸ್ತ್ರೀ ಶಕ್ತಿ ಸಂಘಗಳ ಸಾಲ ಮನ್ನಾ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದ ರಾಮಯ್ಯ ಭರವಸೆ ನೀಡಿದ್ದಾರೆ. ಈ ಮೂಲಕ ಮಹಿಳಾ ಶಕ್ತಿಗೆ ಮತ್ತೆ ಶಕ್ತಿ ತುಂಬಲಿದ್ದಾರೆ.
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸ್ತ್ರೀ ಶಕ್ತಿ ಸಂಘಗಳ ಸಾಲ ಮನ್ನಾ ಮಾಡುವುದಾಗಿ ಕೋಲಾರದಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಸಿದ್ದರಾಮಯ್ಯ, ಭರವಸೆ ನೀಡಿದ್ದು, ಅದರಂತೆ ಸಾಲ ಮನ್ನಾ ಮಾಡಬೇಕು ಎಂದು ಒತ್ತಾಯಿಸಿ ಕೋಲಾರ-ಚಿಕ್ಕಬಳ್ಳಾಪುರ ಭಾಗದ ಹಲವು ಮಹಿಳೆಯರು ಮುಖ್ಯಮಂತ್ರಿ ನಿವಾಸದ ಸಮೀಪ ಬುಧವಾರ ಪ್ರತಿಭಟನೆ ನಡೆಸಿ ಆಗ್ರಹಿಸಿದರು. ಈ ಸಂದರ್ಭದಲ್ಲಿ ರೈತರ ನಿಯೋಗದೊಂದಿಗೆ ಮಾತನಾಡಿದ ಮುಖ್ಯ ಮಂತ್ರಿಗಳು ಈ ಭರವಸೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ನಡುವೆ, ಸಿಎಂ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಉಪಾಧ್ಯಕ್ಷ ಎಚ್.ಕೆ.ನಾರಾಯಣಗೌಡ, ‘ಕೊಟ್ಟ ಮಾತಿನಂತೆ ನಡೆದು ಕೊಳ್ಳುತ್ತೇನೆ. ಆದರೆ ಗ್ಯಾರಂಟಿಗಳಿಗೆ ಹಣ ಹೊಂದಿಸಬೇಕಿರುವುದರಿಂದ ಮುಂದಿನ ವರ್ಷ ಸ್ತ್ರೀ ಶಕ್ತಿ ಸಂಘಗಳ ಸಾಲ ಮನ್ನಾ ಮಾಡುವುದಾಗಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ” ಎಂದು ಸ್ಪಷ್ಟಪಡಿಸಿದರು.
ಇದನ್ನೂ ಓದಿ : ನಾಯಿ ವೇದಿಕೆ ಮೇಲೆ ಪ್ರಶಸ್ತಿ ಪಡೆಯಿತು!!
HOW TO APPLY : NEET-UG COUNSELLING 2023