ಬಿಜೆಪಿಯಲ್ಲಿ ನಾಯಕರ ನಡುವೆಯೇ ಗುದ್ದಾಟ!
– ವಲಸಿಗರು, ಮೂಲ ಬಿಜೆಪಿ ಹೇಳಿಕೆಯಿಂದ ಅಲ್ಲೋಲ ಕಲ್ಲೋಲ
– ಇತ್ತ ಬೊಮ್ಮಾಯಿ, ಹೈಕಮಾಂಡ್, ಕಟೀಲ್ ವಿರುದ್ಧವೂ ರೇಣುಕಾಚಾರ್ಯ ಗುಡುಗು
– ಯಾವ ನಾಯಕರು ಏನು ಹೇಳಿದರು..?
NAMMUR EXPRESS NEWS
ಬೆಂಗಳೂರು: ಬಿಜೆಪಿಯಲ್ಲಿ ಚುನಾವಣೆ ಮುಗಿದ ಬಳಿಕ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ.
ಒಂದು ಕಡೆ ಸೋಲಿನ ಹೊಣೆ ಹೊತ್ತು ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ರಾಜೀನಾಮೆ ಕೊಡಬೇಕು ಎಂಬ ಒತ್ತಾಯ ಹೆಚ್ಚಿದೆ. ಇನ್ನೊಂದು ಕಡೆ ಬಿಜೆಪಿ ಪ್ರಮುಖ ನಾಯಕರೇ ಪಕ್ಷದ ಹುದ್ದೆ ಅನುಭವಿಸಿದವರ ಮೇಲೆ ಮುಗಿ ಬಿದ್ದಿದ್ದಾರೆ.
ವಲಸಿಗರ ವಿರುದ್ಧ ಮಾಜಿ ಸಚಿವ ಈಶ್ವರಪ್ಪ ಬಾಂಬ್ ಸಿಡಿಸಿದ್ದೇ ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲಕ್ಕೆ ಕಾರಣವಾಗಿದೆ.
ಯಡಿಯೂರಪ್ಪ ಅವರನ್ನು ಮೂಲೆ ಗುಂಪು ಮಾಡಿ, ಶೆಟ್ಟರ್, ಈಶ್ವರಪ್ಪ ಸೇರಿ ಪಕ್ಷ ಬೆಳೆಸಿದವರಿಗೆ ಅನ್ಯಾಯ ಆಗಿದೆ. ಕಾಂಗ್ರೆಸ್ ಇಂದ ಬಿಜೆಪಿಗೆ ಬಂದವರೇ ಬಿಜೆಪಿಯ ನಾಯಕರಿಗೆ ಇಷ್ಟ ಎಂದು ರೇಣುಕಾಚಾರ್ಯ ಹೇಳಿಕೆ ಈಗ ಮತ್ತಷ್ಟು ಚರ್ಚೆಗೆ ಕಾರಣ ಆಗಿದೆ.
ಮಾಜಿ ಸಚಿವ ರೇಣುಕಾಚಾರ್ಯಗೆ ನೋಟಿಸ್!:
ಹೊನ್ನಾಳಿ ಮಾಜಿ ಶಾಸಕ, ಯಡಿಯೂರಪ್ಪ ಆಪ್ತ ರೇಣುಕಾಚಾರ್ಯಗೆ ಪಕ್ಷ ವಿರೋಧಿ ಹೇಳಿಕೆಗಳ ಕುರಿತು ಬಿಜೆಪಿ ನೋಟೀಸ್ ನೀಡಿದೆ. ತಮಗೆ ಪಕ್ಷ ಸಾಕಷ್ಟು ಬಾರಿ ತಿಳಿ ಹೇಳಿದರೂ ಕೂಡ ತಾವು ಪದೇ ಪದೇ ರಾಜ್ಯ ಮತ್ತು ರಾಷ್ಟ್ರೀಯ ನಾಯಕರುಗಳ ವಿರುದ್ಧ ಮಾಧ್ಯಮಗಳ ಮುಂದೆ ಪಕ್ಷಕ್ಕೆ ಮುಜುಗರವಾಗುವ ರೀತಿಯಲ್ಲಿ ಹೇಳಿಕೆಗಳನ್ನು ನೀಡುತ್ತಿರುವುದನ್ನು ರಾಜ್ಯ ಶಿಸ್ತು ಸಮಿತಿ ಗಂಭೀರವಾಗಿ ಪರಿಗಣಿಸಿ, ತಮ್ಮ ಮೇಲೆ ಯಾಕೆ ಶಿಸ್ತು ಕ್ರಮ ಜರುಗಿಸಬಾರದೆಂದು ಕಾರಣ ಕೇಳಿ ಈ ನೋಟೀಸನ್ನು ನೀಡಲಾಗಿದೆ.ಈ ನೋಟೀಸ್ ತಲುಪಿದ ಒಂದು ವಾರದೊಳಗಾಗಿ ತಾವು ಉತ್ತರವನ್ನು ಲಿಖಿತ ರೂಪದಲ್ಲಿ ನೀಡಬೇಕೆಂದು ಸೂಚಿಸಲಾಗಿದೆ.
ಗೊಂದಲಗಳಿದ್ದರೆ ಪಕ್ಷದ ಸಭೆಯಲ್ಲಿ ಚರ್ಚಿಸಿ: ಆರಗ ಜ್ಞಾನೇಂದ್ರ
ಬಿಜೆಪಿ ಪಕ್ಷ ತತ್ವ ಸಿದ್ದಾಂತದ ಶಿಸ್ತಿನ ಪಕ್ಷ. ನಮ್ಮ ಪಕ್ಷದ ಆಂತರಿಕ ಗೊಂದಲವನ್ನು ನಾಲ್ಕು ಗೋಡೆಯ ಮಧ್ಯ ಪಕ್ಷದ ಸಭೆಯಲ್ಲಿ ಕುಳಿತು ಚರ್ಚಿಸಿ ಪರಿಹಾರ ಕಂಡುಕೊಳ್ಳುವುದು ಅಗತ್ಯವೆಂದು ಮಾಜಿ ಸಚಿವ ಶಾಸಕ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ರಿಪ್ಪನ್ಪೇಟೆಯಲ್ಲಿ ಮಾತನಾಡಿ, ಕರ್ನಾಟಕ ರಾಜ್ಯ ವಿಧಾನಸಭೆಯ ಸಾರ್ವತ್ರಿಕ ಚುನಾವಣೆಯಲ್ಲಿ ಸೋಲು ಕಂಡಿರ ಬಹುದು ಇದು ಬಿಜೆಪಿ ಪಕ್ಷಕ್ಕೆ ಸೋಲು ಎಂಬುದು ಹೊಸದೇನು ಅಲ್ಲ. ಸದಾ ಜನಸಾಮಾನ್ಯರ ಸಮಸ್ಯೆಗಳ ಪರ ಹೋರಾಟ ನಡೆಸುತ್ತಾ ಅಧಿಕಾರದ ಆಸೆಗಾಗಿ ಎಂದು ನಾವು ಅಂಟಿಕೊಳ್ಳದೇ ಪಕ್ಷದ ತತ್ವಸಿದ್ಧಾಂತದೊಂದಿಗೆ ಸಂಘಟನೆಯಲ್ಲಿ ಬೆಳೆದುಬಂದವರು ಎಂಬುದನ್ನು ನಮ್ಮ ಪಕ್ಷದ ನಾಯಕರು ಕಾರ್ಯಕರ್ತರು ಮರೆಯಬಾರದು ಎಂದು ಹೇಳುವ ಮೂಲಕ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರದಲ್ಲಿಯೋ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಭವಿಷ್ಯ ನುಡಿದರು.
ಇದನ್ನೂ ಓದಿ : ನಾಯಿ ವೇದಿಕೆ ಮೇಲೆ ಪ್ರಶಸ್ತಿ ಪಡೆಯಿತು!!
HOW TO APPLY : NEET-UG COUNSELLING 2023