ಕರಾವಳಿಯಲ್ಲಿ ಮಳೆ ಅಬ್ಬರಕ್ಕೆ ಇಬ್ಬರು ಬಲಿ!
– ದಕ್ಷಿಣ ಕನ್ನಡ ಶಾಲಾ ಕಾಲೇಜುಗಳಿಗೆ ರಜೆ
– ಉಡುಪಿ ಜಿಲ್ಲೆಯಲ್ಲಿ ಆಡಳಿತದ ಅಲರ್ಟ್
– 2 ದಿನ ಭಾರೀ ಮಳೆ ಸಾಧ್ಯತೆ!
NAMMUR EXPRESS NEWS
ಮಂಗಳೂರು: ಕರಾವಳಿಯಲ್ಲಿ ಮಳೆಯ ಆರ್ಭಟ ಶುರುವಾಗಿದೆ. ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಶಿರ್ವದ ಬಳಿ ಆವರಣಗೋಡೆ ಇಲ್ಲದ ಬಾವಿಯ ಮಣ್ಣು ಕುಸಿದು ಬಾವಿಗೆ ಬಿದ್ದು ಗುಲಾಬಿ (43) ಮೃತಪಟ್ಟಿದ್ದಾರೆ. ಕುಂಬಳೆ ಸಮೀಪದ ಅಂಗಡಿ ಮೊಗರಿನಲ್ಲಿ ಗಾಳಿ ಮಳೆಯಿಂದಾಗಿ ಮರ ಉರುಳಿ ಆಯಿಷತ್ ಮಿನ್ಹಾ (11) ಸಾವನ್ನಪ್ಪಿದ್ದಾಳೆ.
ಎರಡು ದಿನಗಳಿಂದಲೂ ನಿರಂತರವಾಗಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲೂಕುಗಳ ಶಾಲೆ, ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಮಂಗಳೂರು, ಮೂಲ್ಕಿ, ಉಳ್ಳಾಲ, ಮೂಡಬಿದಿರೆ ಹಾಗೂ ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.
ನಾಲ್ಕು ದಿನ ಭಾರಿ ಮಳೆ?
ಮುಂದಿನ ನಾಲ್ಕು ದಿನಗಳ ಕಾಲ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಭಾರೀ ಮಳೆ ಸುರಿಯಲಿದೆ. ಈ ಹಿನ್ನೆಲೆಯಲ್ಲಿಂದು ಕರಾವಳಿ ಭಾಗದ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ತಗ್ಗು ಪ್ರದೇಶದಲ್ಲಿ ವಾಸಿಸುತ್ತಿರುವ ಜನರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಸೂಚನೆಯನ್ನು ನೀಡಿದೆ. ಇನ್ನೊಂದೆಡೆಯಲ್ಲಿ ಮಳೆಹಾನಿ ಉಂಟಾಗುವ ಅನಾಹುತಗಳನ್ನು ತಡೆಯುವ ನಿಟ್ಟಿನಲ್ಲಿ ಜಿಲ್ಲಾಡಳಿತ ಸಜ್ಜಾಗಿದೆ.
ಕರಾವಳಿ ಗಡಿಯಲ್ಲಿ ಬಾಲಕಿ ಬಲಿ!
ಭಾರೀ ಗಾಳಿ ಹಾಗೂ ಭಾರೀ ಮಳೆಗೆ ಮರವೊಂದು ಉರುಳಿ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಸೋಮವಾರ ಸಂಜೆ ಪುತ್ತಿಗೆ ಪರಿಸರದಲ್ಲಿ ನಡೆದಿದೆ.
ಆಯಿಷತ್ ಮಿನ್ ಹಾ ಎಂದು ಗುರುತಿಸಲಾದ ಸಂತ್ರಸ್ತೆಯನ್ನು ಅಂಗಡಿ ಮೊಗರು ಸರ್ಕಾರಿ ಮಾಧ್ಯಮಿಕ ಶಾಲೆಯಲ್ಲಿ ಆರನೇ ತರಗತಿಯ 11 ವರ್ಷದ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ.
ಮುಳುಗಿದ ಮಂಗಳೂರು!
ಭಾರೀ ಮಳೆಯಿಂದಾಗಿ ಮಂಗಳೂರು ರಸ್ತೆಗಳಲ್ಲಿ ವಾಹನಗಳ ದಟ್ಟಣೆಯಿಂದ ಪ್ರಯಾಣಿಕರು, ಆಂಬ್ಯುಲೆನ್ಸ್ಗಳು ತೊಂದರೆ ಅನುಭವಿಸುತ್ತಿವೆ. ರಸ್ತೆಗಳಲ್ಲಿ ನೀರು ತುಂಬಿ ಅನೇಕ ಕಡೆ ವಾಹನ ಸಂಚಾರ ಅಸ್ತವ್ಯಸ್ತವಾಗಿದೆ.
ಕರಾವಳಿಯಲ್ಲಿ ಭಾರಿ ಹಾನಿ
ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರ ಗೋಡು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆರ್ದ್ರಾ ನಕ್ಷತ್ರದ ಕೊನೆಯ ಪಾದದಲ್ಲಿ ಒಂದೆರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಸೋಮವಾರ ಬಿರುಸುಗೊಂಡಿತ್ತು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಹಲವು ಕಡೆಗಳಲ್ಲಿ ಹಾನಿ ಉಂಟಾಗಿದೆ.
ಉಡುಪಿ ಜಿಲ್ಲೆಯಲ್ಲಿ ಭಾರಿ ಅಲರ್ಟ್!
ಉಡುಪಿ ಜಿಲ್ಲೆಯಲ್ಲಿಯೂ ಹಲವು ಕಡೆ ಮನೆಗಳ ಮೇಲೆ ಮರ ಉರುಳಿದ, ಆವರಣ ಗೋಡೆ ಕುಸಿದ, ನೆರೆಯಿಂದ ಸಂಕಷ್ಟ ಉಂಟಾದ ಘಟನೆಗಳು ನಡೆದಿವೆ.
ಭಾರೀ ಮಳೆ ಎಚ್ಚರಿಕೆ
ಕರಾವಳಿಯಲ್ಲಿ ಜು. 8ರ ವರೆಗೆ ಭಾರೀ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಆರೆಂಜ್ ಅಲರ್ಟ್ ಘೋಷಿಸಿದೆ. ಈಗಾಗಲೇ ಉಭಯ ಜಿಲ್ಲೆಗಳಲ್ಲಿ ಕಾಳಜಿ ಕೇಂದ್ರ ಗಳನ್ನು ಸನ್ನದ್ಧಗೊಳಿಸಲಾಗಿದೆ. ಮುನ್ನೆಚ್ಚರಿಕೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡದಲ್ಲಿ ಎಸ್ಡಿಆರ್ಎಫ್ನ 65, ಎನ್ಡಿಆರ್ಎಫ್ನ 25 ಮಂದಿಯ ತಂಡ ಸನ್ನದ್ಧವಾಗಿದೆ. 26 ಬೋಟ್ ಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿದೆ.
ಇದನ್ನೂ ಓದಿ : ನಾಯಿ ವೇದಿಕೆ ಮೇಲೆ ಪ್ರಶಸ್ತಿ ಪಡೆಯಿತು!!
HOW TO APPLY : NEET-UG COUNSELLING 2023