ಆರಗ ಜ್ಞಾನೇಂದ್ರಗೆ ಮತ್ತೆ ಮಹತ್ವದ ಹುದ್ದೆ!?
– ಪಕ್ಷದ ವಿರೋಧ ಪಕ್ಷದ ನಾಯಕ, ಪಕ್ಷದ ಅಧ್ಯಕ್ಷ ಹುದ್ದೆ ಸಾಧ್ಯತೆ
– ಸರಳತೆ, ಹಿರಿತನ ಮತ್ತೆ ಕೈ ಹಿಡಿಯುವ ಸೂಚನೆ
– ಎಲ್ಲರನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ ಜಾಣ್ಮೆ
NAMMUR EXPRESS NEWS
ಶಿವಮೊಗ್ಗ: ಬಿಜೆಪಿ ಹಿರಿಯ ನಾಯಕ, ಮಾಜಿ ಗೃಹಸಚಿವರಾದ ಆರಗ ಜ್ಞಾನೇಂದ್ರರವರಿಗೆ ವಿರೋಧ ಪಕ್ಷದ ನಾಯಕರಾಗುವ ಸಾಧ್ಯತೆ ಇದೆ.
ಇನ್ನು ಪಕ್ಷದ ಅಧ್ಯಕ್ಷ ಸ್ಥಾನ ಕೂಡ ಚರ್ಚೆಯಲ್ಲಿದೆ. ಹೀಗಾಗಿ ಈಗ ಆರಗ ಹೆಸರು ಮತ್ತೆ ಮುಂಚೂಣಿಗೆ ಬಂದಿದೆ.
ಮಾಜಿ ಸಿಎಂ ಯಡಿಯೂರಪ್ಪ ಅವರು ಕೂಡ ಆರಗ ಜ್ಞಾನೇಂದ್ರ ಹೆಸರನ್ನೇ ನೇಮಕ ಮಾಡುವಂತೆ ವರಿಷ್ಠರಿಗೆ ಒತ್ತಾಯಿಸಿದ್ದಾರೆ ಎಂದು ತಿಳಿದುಬಂದಿದೆ. ಈಗಾಗಲೇ ಅಂತಿಮ ಸರ್ಕಸ್ ನಡೆಯುತ್ತಿದೆ.
ಆರಗ ಜ್ಞಾನೇಂದ್ರ ಅವರು ಗೃಹ ಮಂತ್ರಿಗಳಾಗಿ ಉತ್ತಮ ಹೆಸರು ಮಾಡಿದ್ದಾರೆ. ಯಡಿಯೂರಪ್ಪ, ಈಶ್ವರಪ್ಪ ಜತೆ ಜತೆಗೆ ರಾಜ್ಯದಲ್ಲಿ ಬಿಜೆಪಿ ಪಕ್ಷ ಕಟ್ಟುವಲ್ಲಿ ಶ್ರಮಿಸಿದ್ದಾರೆ.
ಇದನ್ನೂ ಓದಿ : ಲಕ್ಷಕ್ಕೆ ಬರುತ್ತಾ ಅಡಿಕೆ ದರ?
HOW TO APPLY : NEET-UG COUNSELLING 2023