ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜು.6ಕ್ಕೂ ರಜೆ!
– ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ
– ಕರಾವಳಿಯಲ್ಲಿ ಮಳೆ ಆರ್ಭಟ: ಹಾನಿ ಹೆಚ್ಚಳ
– ಗುರುವಾರವೂ ಎಲ್ಲಾ ಕಡೆ ಹೈ ಅಲರ್ಟ್
– ದಿನೇ ದಿನೇ ಮಳೆಗೆ ಸಾವು ಹೆಚ್ಚಳ: ಎಚ್ಚರ!
NAMMUR EXPRESS NEWS
ಉಡುಪಿ / ಮಂಗಳೂರು: ಉಡುಪಿಯಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು ಜಿಲ್ಲೆಯಾದ್ಯಂತ ಗುರುವಾರವೂ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಜಿಲ್ಲೆಯ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಿ ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಅವರು ಆದೇಶ ಹೊರಡಿಸಿದ್ದಾರೆ. ಅಲ್ಲದೆ ಜನ ಎಚ್ಚರ ಇರುವಂತೆ ಎಚ್ಚರಿಕೆ ನೀಡಲಾಗಿದೆ.
ಉಡುಪಿ ಜಿಲ್ಲೆಯ ಬ್ರಹ್ಮಾವರ, ಉಡುಪಿ, ಕಾಪು, ಕಾರ್ಕಳ, ಕುಂದಾಪುರ, ಬೈಂದೂರು, ಹೆಬ್ರಿ ತಾಲೂಕುಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಅಲ್ಲದೇ ಗುರುವಾರವೂ ಮಳೆ ಮುಂದುವರಿಕೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಗುರುವಾರವೂ ರಜೆಯನ್ನು ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಗುರುವಾರ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆಯನ್ನು ನೀಡಲಾಗಿದೆ.
ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿಯೋರ್ವರು ಸಾವನ್ನಪ್ಪುವ ಮೂಲಕ ಆರಿದ್ರಾ ಮಳೆ ಜಿಲ್ಲೆಯಲ್ಲಿ ಮೊದಲ ಬಲಿ ಪಡೆದಿದೆ. ಸುಳ್ಯ, ಪುತ್ತೂರು, ಬೆಳ್ತಂಗಡಿ, ಕಡಬ, ಬಂಟ್ವಾಳ, ಮಂಗಳೂರು, ಮೂಡಬಿದಿರೆ, ಮೂಲ್ಕಿ ತಾಲೂಕುಗಳಲ್ಲಿ ದಾಖಲೆಯ ಪ್ರಮಾಣದಲ್ಲಿ ಮಳೆಯಾಗಿದೆ. ಕರಾವಳಿಯಲ್ಲಿ ಮಳೆ ಕಾರಣಕ್ಕೆ ಈಗಾಗಲೇ 4 ಮಂದಿ ಮೃತಪಟ್ಟಿದ್ದಾರೆ. ಹಲವೆಡೆ ಗುಡ್ಡ ಕುಸಿತ ಸಂಭವಿಸಿದೆ.
ಇದನ್ನೂ ಓದಿ : ಲಕ್ಷಕ್ಕೆ ಬರುತ್ತಾ ಅಡಿಕೆ ದರ?
HOW TO APPLY : NEET-UG COUNSELLING 2023