ಮಳೆ ಮಳೆ: ವಿದ್ಯುತ್, ಮೊಬೈಲ್ ಸಂಪರ್ಕ ಕಟ್!
– ಮಲೆನಾಡ ಹಲವೆಡೆ ಭಾರೀ ಮಳೆ: ತುಂಬಿದ ನದಿ, ಹಳ್ಳ, ಕೆರೆಗಳು
– ಎರಡೇ ದಿನಕ್ಕೆ ಮಲೆನಾಡಲ್ಲಿ ಭಾರೀ ಮಳೆ
NAMMUR EXPRESS NEWS
ತೀರ್ಥಹಳ್ಳಿ: ಮಲೆನಾಡಿನಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆಗೆ ವಿದ್ಯುತ್ ಸಂಪರ್ಕ ಮತ್ತು ಮೊಬೈಲ್ ನೆಟ್ವರ್ಕ್ ಸಂಪರ್ಕ ಹಲವು ತಾಲೂಕಿನಲ್ಲಿ ಕಡಿತಗೊಂಡಿದೆ.
ಹಲವು ಕಡೆ ವಿದ್ಯುತ್ ಕಂಬ ಮತ್ತು ಮರಗಳು ಧರೆಗೆ ಉರುಳಿವೆ. ತುಂಗಾ, ಭದ್ರ, ಮಾಲತಿ, ಶರಾವತಿ ನದಿ ಸೇರಿದಂತೆ ಅನೇಕ ನದಿಗಳಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದೆ. ಎಲ್ಲಾ ಕಡೆ ಮಳೆಯ ವಾತಾವರಣ ಕಂಡು ಬಂದಿದೆ.
ಮಲೆನಾಡಿನಲ್ಲಿ ಕಳೆದ ಎರಡು ಮೂರು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ಈಗಾಗಲೇ ಅನೇಕ ನದಿಗಳು ಎರಡೇ ದಿನಕ್ಕೆ ತುಂಬಿ ಹರಿಯುತ್ತಾ ಇದೆ. ನೀರಿನ ಮಟ್ಟ ಹೆಚ್ಚಳವಾಗಿದ್ದು ಗಾಜನೂರು ಡ್ಯಾಂ ಭರ್ತಿಯಾಗಿದೆ.
ಮಲೆನಾಡಿನ ಹಲವು ಹಳ್ಳಿಗಳಲ್ಲಿ ವಿದ್ಯುತ್ ಸಂಪರ್ಕ ಹಾಗೂ ಮೊಬೈಲ್ ನೆಟ್ವರ್ಕ್ ಸಮಸ್ಯೆ ಇರುವುದರಿಂದ ಜನರು ಪರದಾಡುವಂತಹ ಪರಿಸ್ಥಿತಿಗಳು ಬಂದಿದೆ. ತೀರ್ಥಹಳ್ಳಿ, ಶೃಂಗೇರಿ, ಕೊಪ್ಪ, ಸಾಗರ, ಹೊಸನಗರ,ಶಿವಮೊಗ್ಗ ಮತ್ತು ಚಿಕ್ಕಮಂಗಳೂರು ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಹೆಚ್ಚಾಗಿ ಮಳೆಯಾಗುತ್ತಿದೆ. ಒಂದೇ ಸಮನೇ ಸುರಿಯುತ್ತಿರುವ ಮಳೆಯಿಂದಾಗಿ ಜನರು ಹೊರಗೆ ಬರಲು ಸಾಧ್ಯವಾಗದ ಪರಿಸ್ಥಿತಿಗಳು ಬಂದಿದೆ.
ಗಾಜನೂರಿನ ತುಂಗಾ ಡ್ಯಾಂ ಭರ್ತಿ
ಹಿನ್ನೀರು ಭಾಗದಲ್ಲಿ ಭಾರಿ ಮಳೆಯಾದ ಹಿನ್ನೆಲೆ ಗಾಜನೂರಿನಲ್ಲಿರುವ ತುಂಗಾ ಜಲಾಶಯ ಭರ್ತಿಯಾಗಿದೆ. ಇವತ್ತು ಸಂಜೆಯೊಳಗೆ ಯಾವುದೆ ಸಂದರ್ಭ ಜಲಾಶಯದ ಗೇಟ್ಗಳನ್ನು ಮೇಲೆತ್ತಿ ನೀರು ಹೊರಗೆ ಬಿಡುವ ಸಾಧ್ಯತೆ ಇದೆ.
ತುಂಗಾ ಜಲಾಶಯದಲ್ಲಿ ಗರಿಷ್ಠ ನೀರಿನ ಸಂಗ್ರಹ ಮಟ್ಟ 588.24 ಅಡಿ. ಇವತ್ತು ನೀರಿನ ಮಟ್ಟ 587.54 ಅಡಿಗೆ ತಲುಪಿದೆ. ಕಳೆದ 24 ಗಂಟೆ ಅವಧಿಯಲ್ಲಿ ನೀರಿನ ಮಟ್ಟ ಸುಮಾರು ಒಂದು ಅಡಿಯಷ್ಟು ಏರಿಕೆಯಾಗಿದೆ. ಸದ್ಯ ಒಳ ಹರಿವು 4830 ಕ್ಯೂಸೆಕ್ ಇದೆ. ತುಂಗಾ ಜಲಾಶಯವು 2.848 ಟಿಎಂಸಿ ನೀರಿನ ಸಂಗ್ರಹ ಸಾಮರ್ಥ್ಯ ಹೊಂದಿದೆ. ಪ್ರಸ್ತುತ 2.019 ಟಿಎಂಸಿ ನೀರಿದೆ.
ತುಂಗಾ ಜಲಾಶಯದ ಹಿನ್ನೀರು ಭಾಗದಲ್ಲಿ ನಿರಂತರ ಮಳೆಯಾಗುತ್ತಿದೆ. ಚಿಕ್ಕಮಗಳೂರು, ತೀರ್ಥಹಳ್ಳಿಯಲ್ಲಿ ಮಳೆ ಬಿರುಸಾಗಿದೆ. ಹಾಗಾಗಿ ಜಲಾಶಯಕ್ಕೆ ನೀರಿನ ಒಳ ಹರಿವು ಹೆಚ್ಚಳವಾಗಲಿದೆ. ಜಲಾಶಯವು ಅಪಾಯದ ಮಟ್ಟ ತಲುಪುವ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಕ್ರಸ್ಟ್ ಗೇಟ್ಗಳನ್ನು ಮೇಲೆತ್ತಿ ಹೆಚ್ಚುವರಿ ನೀರನ್ನು ಹೊಳೆಗೆ ಹರಿಸಲು ನಿರ್ಧರಿಸಲಾಗಿದೆ.
ಮಳೆ ಪ್ರಮಾಣ ಇದೇ ರೀತಿ ಮುಂದುವರೆದರೆ ಇವತ್ತು ಸಂಜೆಯೊಳಗೆ ತುಂಗಾ ಜಲಾಶಯದಿಂದ ನದಿಗೆ ನೀರು ಹರಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ : ಲಕ್ಷಕ್ಕೆ ಬರುತ್ತಾ ಅಡಿಕೆ ದರ?
HOW TO APPLY : NEET-UG COUNSELLING 2023