ಸಿದ್ದರಾಮಯ್ಯ ಬಜೆಟ್… ಯಾವ ಕ್ಷೇತ್ರಕ್ಕೆ ಏನು?
– ಪಟಾಪಟ್ ಡೀಟೇಲ್ಸ್ ಇಲ್ಲಿದೆ… ಯಾವ ಯೋಜನೆ?
– ಕೃಷಿ, ಶಿಕ್ಷಣ, ಉದ್ಯೋಗ, ಆಹಾರಕ್ಕೆ ಹೆಚ್ಚು ಒತ್ತು
NAMMUR EXPRESS NEWS
ಕೃಷಿ ಮತ್ತು ಪೂರಕ ಚಟುವಟಿಕೆಗಳಿಗೆ ಬೆಂಬಲ:
•ಕೃಷಿ ಭಾಗ್ಯ ಯೋಜನೆ 100 ಕೋಟಿ ರೂ. ವೆಚ್ಚದಲ್ಲಿ ಮರುಜಾರಿ.
•ರೇಷ್ಮೆ ನೂಲು ಬಿಚ್ಚಾಣಿಕೆದಾರರಿಗೆ ಐದು ಲಕ್ಷ ರೂ. ವರೆಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ.
•ಜಾನುವಾರುಗಳ ಆಕಸ್ಮಿಕ ಸಾವಿನ ಸಂಕಷ್ಟ ನಿವಾರಣೆಗೆ ಅನುಗ್ರಹ ಯೋಜನೆ ಮರುಜಾರಿ
ಮೀನುಗಾರಿಕೆಗೆ ಉತ್ತೇಜನ:
•ಮೀನುಗಾರ ಮಹಿಳೆಯರಿಗೆ ಬ್ಯಾಂಕುಗಳಲ್ಲಿ ಬಡ್ಡಿರಹಿತವಾಗಿ ನೀಡುವ ಸಾಲದ ಮಿತಿ 50,000 ರೂ. ಗಳಿಂದ 3 ಲಕ್ಷ ರೂ. ಗಳಿಗೆ ಹೆಚ್ಚಳ.
•ಮೀನುಗಾರರ ದೋಣಿಗಳಿಗೆ ರಿಯಾಯಿತಿ ದರದ ಡೀಸೆಲ್ ಮಿತಿ
2 ಲಕ್ಷ ಕಿಲೋ ಲೀಟರ್ಗಳವರೆಗೆ ಹೆಚ್ಚಿಸಲು 250 ಕೋಟಿ ರೂ. ನೆರವು.
•ಮೀನುಗಾರಿಕಾ ದೋಣಿಗಳ ಸೀಮೆ ಎಣ್ಣೆ ಇಂಜಿನ್ಗಳನ್ನು…
ಅನ್ನದಾತನಿಗೆ ಸಾಲ ಸೌಲಭ್ಯ
•ಶೂನ್ಯ ಬಡ್ಡಿ ದರದಲ್ಲಿ ನೀಡುವ ಅಲ್ಪಾವಧಿ ಸಾಲದ ಮಿತಿ 5 ಲಕ್ಷ ರೂ. ಗಳಿಗೆ ಹೆಚ್ಚಳ.
•ಶೇ. 3ರ ಬಡ್ಡಿ ದರದಲ್ಲಿ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲದ ಮಿತಿ 10 ಲಕ್ಷ ರೂ. ಗಳಿಂದ 15 ಲಕ್ಷ ರೂ. ಗಳಿಗೆ ಹೆಚ್ಚಳ.
ನೀರಾವರಿಗೆ ಉತ್ತೇಜನ:
•ಪ್ರಗತಿಯಲ್ಲಿರುವ 940 ಕೋಟಿ ರೂ. ಬಾಕಿ ಮೊತ್ತದ 10 ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಆದ್ಯತೆ.
•770 ಕೋಟಿ ರೂ. ವೆಚ್ಚದಲ್ಲಿ 899 ಕೆರೆ ತುಂಬಿಸುವ 19 ಯೋಜನೆಗಳನ್ನು ಪೂರ್ಣಗೊಳಿಸಲು ಕ್ರಮ.
•ಎತ್ತಿನಹೊಳೆ ಯೋಜನೆ ಬಾಕಿ ಕಾಮಗಾರಿ ಪೂರ್ಣಗೊಳಿಸಲು, ಮೇಕೆದಾಟು ಯೋಜನೆಗೆ ಅರಣ್ಯ ಭೂಮಿ ಸ್ವಾಧೀನ,…
ಶಿಕ್ಷಣಕ್ಕೆ ಆದ್ಯತೆ:
•ಸಮಾಜದ ಸ್ವಾಸ್ಥ್ಯ ಕಾಪಾಡುವ ಆಶಯದಿಂದ ಪಠ್ಯಪುಸ್ತಕ ಮರುಪರಿಷ್ಕರಣೆಗೆ ಕ್ರಮ. ಸ್ಥಳೀಯವಾದ ಸಾಮಾಜಿಕ, ಸಾಂಸ್ಕೃತಿಕ ಮತ್ತು ಆರ್ಥಿಕ ವಾಸ್ತವಿಕತೆಯನ್ನು ಆಧರಿಸಿ ಹೊಸ ಶಿಕ್ಷಣ ನೀತಿ ರೂಪಿಸಲು ಕ್ರಮ.
•1 ರಿಂದ 10ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ವಾರದಲ್ಲಿ ಎರಡು ದಿನ ನೀಡುವ ಪೂರಕ ಪೌಷ್ಟಿಕ ಆಹಾರ; 60 ಲಕ್ಷ…
ಸಹಕಾರ ಮತ್ತು ರೇಷ್ಮೆ:
•30 ಲಕ್ಷಕ್ಕೂ ಹೆಚ್ಚು ರೈತರಿಗೆ 25,000 ಕೋಟಿ ರೂ. ಸಾಲ ವಿತರಣೆ ಗುರಿ
•ಎಪಿಎಂಸಿ ಕಾಯ್ದೆ ತಿದ್ದುಪಡಿ ಹಿಂಪಡೆಯಲು ಕ್ರಮ
•ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳ ರೈತರಿಗೆ ಸರಕು ಸಾಗಾಣಿಕೆಗೆ ಪಿಕ್ಅಪ್ ವ್ಯಾನ್ ಖರೀದಿಗೆ ಶೇ.4 ರ ಬಡ್ಡಿ ದರದಲ್ಲಿ 7 ಲಕ್ಷ ರೂ. ವರೆಗಿನ ಸಾಲ ಸೌಲಭ್ಯ.
“ಗೃಹಲಕ್ಷ್ಮಿ ಯೋಜನೆ”
•ಪ್ರತಿ ಕುಟುಂಬದ ಯಜಮಾನಿಗೆ ಮಾಸಿಕ 2,000 ರೂಪಾಯಿ ನೆರವಿನ ನೇರ ವರ್ಗಾವಣೆ
•ಈ ಯೋಜನೆಗೆ ವಾರ್ಷಿಕ ಅಂದಾಜು 30,000 ಕೋಟಿ ರೂ. ವೆಚ್ಚವಾಗುವ ನಿರೀಕ್ಷೆಯಿದ್ದು, ಇದು ದೇಶದಲ್ಲಿಯೇ ಅತಿ ದೊಡ್ಡ ಆರ್ಥಿಕ ಭದ್ರತಾ ಯೋಜನೆಯಾಗಿದೆ.
•ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಸಹಕಾರಿ
•ಬೆಲೆಯೇರಿಕೆಯಿಂದ ತತ್ತರಿಸಿರುವ…
ಗೃಹ ಜ್ಯೋತಿ”
•ಪ್ರತಿ ಮನೆಗೆ ಪ್ರತಿ ತಿಂಗಳಿಗೆ ಅವರ ಸರಾಸರಿ ಬಳಕೆಯ ಜೊತೆಗೆ ಶೇ. 10 ರಷ್ಟು ಹೆಚ್ಚುವರಿ ಯುನಿಟ್ ವಿದ್ಯುತ್ ಉಚಿತ. ಗರಿಷ್ಠ 200 ಯುನಿಟ್ ವರೆಗೆ
•ವಾರ್ಷಿಕ ಅಂದಾಜು 13,910 ಕೋಟಿ ರೂ. ವೆಚ್ಚದಲ್ಲಿ ಜಾರಿ
•2 ಕೋಟಿಗಿಂತ ಅಧಿಕ ಗೃಹ ಬಳಕೆದಾರರಿಗೆ ಈ ಯೋಜನೆಯಿಂದ ಅನುಕೂಲ
“ಯುವ ನಿಧಿ”
•2023ರಲ್ಲಿ ಪದವಿ ಪಡೆದು 6 ತಿಂಗಳ ವರೆಗೂ ಉದ್ಯೋಗ ಲಭಿಸದ ಯುವ ಜನರಿಗೆ 2 ವರ್ಷಗಳ ವರೆಗೆ ಅಥವಾ ಉದ್ಯೋಗ ಸಿಗುವ ವರೆಗೆ ನಿರುದ್ಯೋಗ ಭತ್ಯೆ
•ಪದವೀಧರರಿಗೆ ಪ್ರತೀ ತಿಂಗಳು 3,000 ರೂಪಾಯಿ
•ಡಿಪ್ಲೊಮಾ ಪದವೀಧರರಿಗೆ ಪ್ರತೀ ತಿಂಗಳು 1,500 ರೂಪಾಯಿ
•ನಾಡಿನ ಯುವ ಜನತೆಗೆ ಆರ್ಥಿಕ ನೆರವು ನೀಡಿ ಆತ್ಮವಿಶ್ವಾಸ ತುಂಬುವ ಕಾರ್ಯಕ್ರಮ
“ಅನ್ನ ಭಾಗ್ಯ”
•ಹಸಿವು ಮುಕ್ತ ಕರ್ನಾಟಕಕ್ಕೆ ಸರ್ಕಾರದ ಪಣ
•ಎಲ್ಲಾ ಅರ್ಹ ಫಲಾನುಭವಿಗಳಿಗೆ 5 ಕೆ.ಜಿ ಹೆಚ್ಚುವರಿಯಾಗಿ ಅಕ್ಕಿ ವಿತರಣೆ
•ಆಹಾರಧಾನ್ಯ ಲಭ್ಯವಾಗುವ ವರೆಗೆ ಪ್ರತಿ ಫಲಾನುಭವಿಗೆ 170 ರೂ. ನಂತೆ ಡಿಬಿಟಿ ಮೂಲಕ ನಗದು ವರ್ಗಾವಣೆ
•ಅಂದಾಜು 4.42 ಕೋಟಿ ಫಲಾನುಭವಿಗಳಿಗೆ ಅನುಕೂಲ
•ಈ ಯೋಜನೆಗೆ 10,275 ಕೋಟಿ ರೂ. ಅನುದಾನ…
“ಆರೋಗ್ಯವೇ ಭಾಗ್ಯ”
• ಕ್ಷಯ ರೋಗ ಪತ್ತೆಗೆ ಕೈಚಾಲಿತ-ಕ್ಷ-ಕಿರಣ (Hand Held X-Ray) ಉಪಕರಣ ಒದಗಿಸಲು 3 ಕೋಟಿ ರೂ. ಅನುದಾನ.
• ಮಧುಮೇಹ ಮತ್ತು ರಕ್ತದೊತ್ತಡ ತಪಾಸಣೆ, ಮನೆಬಾಗಿಲಿಗೆ ಔಷಧ ವಿತರಣೆ-ಪ್ರಾಯೋಗಿಕವಾಗಿ 8 ಜಿಲ್ಲೆಗಳಲ್ಲಿ ಜಾರಿ.
• ಆಶಾಕಿರಣ ಕಾರ್ಯಕ್ರಮದಡಿ ರಾಜ್ಯದ 4 ಜಿಲ್ಲೆಗಳಲ್ಲಿ ನೇತ್ರ ಚಿಕಿತ್ಸೆ-21 ಕೋಟಿ ರೂ. ಅನುದಾನ.…
•ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನಲ್ಲಿ ಒಂದು ಹೊಸ ವೈದ್ಯಕೀಯ ಕಾಲೇಜು ಸ್ಥಾಪನೆ.
•ಕಲಬುರಗಿಯ ಗುಲ್ಬರ್ಗಾ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ (GIMS) 70 ಕೋಟಿ ರೂ. ವೆಚ್ಚದಲ್ಲಿ 200 ಹಾಸಿಗೆಯ ಹೊಸ ತಾಯಿ ಮತ್ತು ಮಕ್ಕಳ ಆಸ್ಪತ್ರೆ ನಿರ್ಮಾಣ.
•ಮೈಸೂರು, ಕಲಬುರಗಿ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಸೂಪರ್ ಸ್ಪೆಷಲಿಟಿ ಆಸ್ಪತ್ರೆ
ಅನ್ನದಾತನಿಗೆ ಸಾಲ ಸೌಲಭ್ಯ
•ಶೂನ್ಯ ಬಡ್ಡಿ ದರದಲ್ಲಿ ನೀಡುವ ಅಲ್ಪಾವಧಿ ಸಾಲದ ಮಿತಿ 5 ಲಕ್ಷ ರೂ. ಗಳಿಗೆ ಹೆಚ್ಚಳ.
•ಶೇ. 3ರ ಬಡ್ಡಿ ದರದಲ್ಲಿ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲದ ಮಿತಿ 10 ಲಕ್ಷ ರೂ. ಗಳಿಂದ 15 ಲಕ್ಷ ರೂ. ಗಳಿಗೆ ಹೆಚ್ಚಳ.
ಮಹಿಳಾ ಸಬಲೀಕರಣ”
•ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ ಮೂಲಕ ಮಹಿಳಾ ಉದ್ಯಮಿಗಳಿಗೆ ಶೇ.4 ರ ಬಡ್ಡಿ ದರದಲ್ಲಿ ನೀಡಲಾಗುವ ಸಾಲದ ಮಿತಿ ಐದು ಕೋಟಿ ರೂ.ಗಳಿಗೆ ಹೆಚ್ಚಳ.
•ಏಳು ಜಿಲ್ಲೆಗಳಲ್ಲಿ 2 ಕೋಟಿ ರೂ. ವೆಚ್ಚದಲ್ಲಿ 10 ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆಗಳ ಪ್ರಾರಂಭ.
•4,000 ವಿಶೇಷಚೇತನರಿಗೆ 30 ಕೋಟಿ ರೂ. ವೆಚ್ಚದಲ್ಲಿ ಯಂತ್ರಚಾಲಿತ ಬೈಕ್
“ದುರ್ಬಲ ವರ್ಗಗಳ ಕಲ್ಯಾಣ
•ಪರಿಶಿಷ್ಟ ಪಂಗಡದ ಅಲೆಮಾರಿ ಹಾಗೂ ಅರೆ ಅಲೆಮಾರಿ ಸಮುದಾಯಗಳ ಸಮಗ್ರ ಅಭಿವೃದ್ಧಿಗೆ 50 ಕೋಟಿ ರೂ. ಅನುದಾನ ಹಾಗೂ ರಾಜ್ಯದ 8 ಜಿಲ್ಲೆಗಳಲ್ಲಿ ವಾಸಿಸುತ್ತಿರುವ 11 ಬುಡಕಟ್ಟು ಸಮುದಾಯಗಳ ಜನರಿಗೆ ನೀಡುವ ಪೌಷ್ಟಿಕ ಆಹಾರ ಯೋಜನೆಯನ್ನು 12 ತಿಂಗಳಿಗೆ ಹೆಚ್ಚಿಸಲು 48 ಕೋಟಿ ರೂ. ಅನುದಾನ.
” ನಗರಾಭಿವೃದ್ಧಿ”
•ಬಿಬಿಎಂಪಿ ವ್ಯಾಪ್ತಿಯಲ್ಲಿನ 20 ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳನ್ನು ಮೇಲ್ದರ್ಜೆಗೇರಿಸಲು 1,411 ಕೋಟಿ ರೂ. ಮೊತ್ತದ ಯೋಜನೆಗಳಿಗೆ ಅನುಮೋದನೆ; 2023 ರೊಳಗೆ ಯೋಜನೆ ಪೂರ್ಣಗೊಳಿಸಲು ಕ್ರಮ.
•ಬೆಂಗಳೂರು ಮತ್ತು ಇತರ ನಗರಗಳಲ್ಲಿ ಇಂದಿರಾ ಕ್ಯಾಂಟೀನ್ ಗಳ ಪುನರಾರಂಭಕ್ಕೆ 100 ಕೋಟಿ ರೂ. ಅನುದಾನ.
•ನಮ್ಮ ಮೆಟ್ರೋ ಯೋಜನೆಯಡಿ ಮುಂದಿನ ಮೂರು ವರ್ಷಗಳಲ್ಲಿ ಈಗಿರುವ 70 ಕಿ.ಮೀ.ನ ಸಂಪರ್ಕಜಾಲವನ್ನು 176 ಕಿ.ಮೀ.ಗೆ ವಿಸ್ತರಿಸಲು ಕ್ರಮ. ವಿಮಾನ ನಿಲ್ದಾಣ ಮಾರ್ಗ 2026 ರಲ್ಲಿ ಪೂರ್ಣ.
“ಸುಗಮ ಸಂಚಾರಕ್ಕೆ ಪ್ರಾಶಸ್ತ್ಯ “
•ರಾಯಚೂರು ಬಳಿಯ ಕಲ್ಮಲಾ ಜಂಕ್ಷನ್ ನಿಂದ ಸಿಂಧನೂರು ಬಳಿಯ ಬಳ್ಳಾರಿ – ಲಿಂಗಸುಗೂರು ರಸ್ತೆ ವೃತ್ತದವರೆಗೆ 1,696 ಕೋಟಿ ರೂ.ಗಳ ಮೊತ್ತದಲ್ಲಿ ಒಟ್ಟು 78 ಕಿ.ಮೀ. ಉದ್ದದ ರಸ್ತೆ ಅಭಿವೃದ್ಧಿ.
•ದೇವನಹಳ್ಳಿ – ವಿಜಯಪುರ – ಹೆಚ್.ಕ್ರಾಸ್ – ವೇಮಗಲ್ – ಮಾಲೂರು – ತಮಿಳುನಾಡು ಗಡಿಯವರೆಗೆ 1,826 ಕೋಟಿ ವೆಚ್ಚದಲ್ಲಿ ರಸ್ತೆ
“ಸಣ್ಣ ಕೈಗಾರಿಕೆಗಳಿಗೆ ಉತ್ತೇಜನ”
•ರಾಜ್ಯದ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ (KSSIDC) ವತಿಯಿಂದ ಹೊಸದಾಗಿ ಏಳು ಕೈಗಾರಿಕಾ ವಸಾಹತುಗಳ ಸ್ಥಾಪನೆ.
•೧೦ ಹೆಚ್.ಪಿ. ವರೆಗಿನ ವಿದ್ಯುತ್ ಸಂಪರ್ಕ ಹೊಂದಿರುವ ಮಗ್ಗ ಮತ್ತು ಮಗ್ಗಪೂರ್ವ ಘಟಕಗಳಿಗೆ 250 ಯುನಿಟ್ ವರೆಗೆ ಉಚಿತ ವಿದ್ಯುತ್ ಸೌಲಭ್ಯ
“ಸ್ಟಾರ್ಟ್ಅಪ್ ಗಳಿಗೆ ಉತ್ತೇಜನ”
•ವಿಶ್ವದರ್ಜೆಯ ಪರಿಪೋಷಣ ಕೇಂದ್ರ “INNOVERSE” ಸ್ಥಾಪನೆಗೆ 10 ಕೋಟಿ ರೂ. ಅನುದಾನ.
•ಸ್ಟಾರ್ಟಪ್ ನೀತಿಯಡಿಯಲ್ಲಿ ಅನುದಾನ ನೀಡಿರುವ ಸ್ಟಾರ್ಟ್ಅಪ್ಗಳ ಪರಿಹಾರಗಳ ಅಳವಡಿಕೆಯನ್ನು ವೇಗಗೊಳಿಸಲು ʻPropelʼ ಯೋಜನೆ ಅನುಷ್ಠಾನ.
•Global Innovation Alliance- Market Access Programme (GIA-MAP)…
“ಕನ್ನಡ ಮತ್ತು ಸಂಸ್ಕೃತಿ”
•ಖ್ಯಾತ ಸಾಹಿತಿ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಪ್ರತಿಷ್ಠಾನದ ಚಟುವಟಿಕೆಗೆ ನೆರವು ಹಾಗೂ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಡಾ. ಎಂ. ಎಂ. ಕಲಬುರಗಿ ಅವರ ಹೆಸರಿನಲ್ಲಿ ಟ್ರಸ್ಟ್ ಸ್ಥಾಪನೆಗೆ ಕ್ರಮ.
•ರಾಮನಗರದ ಜಾನಪದ ಲೋಕಕ್ಕೆ 2 ಕೋಟಿ ರೂ. ಅನುದಾನ.
“ಪ್ರವಾಸೋದ್ಯಮಕ್ಕೆ ಉತ್ತೇಜನ”
•ಕಿತ್ತೂರು ಕರ್ನಾಟಕ ಭಾಗದಲ್ಲಿನ ಸವದತ್ತಿ ಯಲ್ಲಮ್ಮನ ಗುಡ್ಡ, ದೇವರಗುಡ್ಡ, ಕಪ್ಪತ್ತಗುಡ್ಡ, ಬಾದಾಮಿ ಬನಶಂಕರಿ, ಲಕ್ಕುಂಡಿ, ಮಾಗಡಿ ಪಕ್ಷಿಧಾಮ ಹಾಗೂ ಕಲ್ಯಾಣ ಕರ್ನಾಟಕ ಭಾಗದ ಹಂಪಿ, ಮೈಲಾರ, ಗಾಣಗಾಪುರ, ಸನ್ನತಿ ಮತ್ತು ಮಳಖೇಡ, ಬೀದರ್, ರಾಯಚೂರು ಹಾಗೂ ಕಲಬುರಗಿ ಕೋಟೆಗಳ ಸಮಗ್ರ ಅಭಿವೃದ್ಧಿಗೆ ಕ್ರಮ.…
“ಪರಿಸರ ಸಂರಕ್ಷಣೆ”
•ಮಾನವ – ಕಾಡಾನೆ ಸಂಘರ್ಷವನ್ನು ನಿಯಂತ್ರಿಸಲು ರಾಮನಗರ ಮತ್ತು ಬನ್ನೇರುಘಟ್ಟ ಪ್ರದೇಶಗಳಲ್ಲಿ ಎರಡು ಹೊಸ ಆನೆ ಕಾರ್ಯಪಡೆ ರಚನೆ.
•ಬೀದರ್ನಲ್ಲಿ ಹೆಚ್ಚಾಗಿ ಕಂಡುಬರುವ ಕೃಷ್ಣಮೃಗಗಳ ಸಂರಕ್ಷಣೆಗೆ ಕೃಷ್ಣಮೃಗ ಸಂರಕ್ಷಣಾ ಮೀಸಲು ಪ್ರದೇಶವನ್ನಾಗಿ ಘೋಷಣೆ; ಈ ಪ್ರದೇಶದ ರಕ್ಷಣೆ ಮತ್ತು ನಿರ್ವಹಣೆಗೆ 2 ಕೋಟಿ ರೂ.
“ಧಾರ್ಮಿಕ ಕೇಂದ್ರಗಳ ಸಂರಕ್ಷಣೆ”
•ಮೈಸೂರಿನ ಶ್ರೀ ಚಾಮುಂಡೇಶ್ವರಿ ದೇವಾಲಯ ಹಾಗೂ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿಗಾಗಿ ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಕ್ರಮ.
•ನಮ್ಮ ರಾಜ್ಯದಲ್ಲಿಯೂ ದೇವಾಲಯಗಳ ನಿರ್ಮಾಣಕ್ಕಾಗಿ ನುರಿತ ಶಿಲ್ಪಿಗಳನ್ನು ತಯಾರಿಸಲು ಕೋಲಾರ ಜಿಲ್ಲೆಯಲ್ಲಿ ಶಿಲ್ಪಕಲಾ ತರಬೇತಿ ಕೇಂದ್ರ…
“ಕನ್ನಡ ಚಿತ್ರೋದ್ಯಮಕ್ಕೆ ಉತ್ತೇಜನ”
•ಮೈಸೂರು ಜಿಲ್ಲೆಯಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಚಿತ್ರನಗರಿ ನಿರ್ಮಾಣ.
•ಕನ್ನಡದ ಗುಣಾತ್ಮಕ ಚಿತ್ರಗಳಿಗೆ ಸಹಾಯಧನ ನೀಡುವ ಯೋಜನೆಗೆ ಮರು ಚಾಲನೆ.
•ಬೆಂಗಳೂರಿನಲ್ಲಿರುವ ಡಾ. ರಾಜ್ಕುಮಾರ್ ಸ್ಮಾರಕದ ಬಳಿ ಕನ್ನಡ ಚಿತ್ರರಂಗ ಬೆಳೆದು ಬಂದ ಇತಿಹಾಸವನ್ನು ದಾಖಲಿಸುವ ವಸ್ತು ಸಂಗ್ರಹಾಲಯ ನಿರ್ಮಾಣ.…
“ಸುರಕ್ಷತೆಗೆ ಆದ್ಯತೆ”
•ಬೆಂಗಳೂರು ನಗರದಲ್ಲಿ ಹೊಸದಾಗಿ 05 ಸಂಚಾರ ಪೊಲೀಸ್ ಠಾಣೆಗಳನ್ನು ಮತ್ತು 06 ಮಹಿಳಾ ಪೊಲೀಸ್ ಠಾಣೆಗಳನ್ನು ಸ್ಥಾಪಿಸಲು ಕ್ರಮ. ಎರಡು ಹಂತಗಳಲ್ಲಿ ಒಟ್ಟು 2,454 ಹುದ್ದೆಗಳ ಸೃಜನೆ.
•ಪೊಲೀಸ್ ಮೊಬಿಲಿಟಿ ಯೋಜನೆಯಡಿ ಇಲಾಖೆಯಲ್ಲಿನ ಹಳೆಯ ವಾಹನಗಳನ್ನು ಬದಲಾಯಿಸಲು 2023-24ನೇ ಸಾಲಿನಲ್ಲಿ 100 ಕೋಟಿ ರೂ. ಅನುದಾನ.…
“ಅಲ್ಪಸಂಖ್ಯಾತರ ಕಲ್ಯಾಣ”
•ನೆನೆಗುದಿಗೆ ಬಿದ್ದಿರುವ 126 ಶಾದಿ ಮಹಲ್ ಮತ್ತು ಸಮುದಾಯ ಭವನಗಳ ನಿರ್ಮಾಣ ಕಾರ್ಯಗಳನ್ನು 54 ಕೋಟಿ ರೂ. ವೆಚ್ಚದಲ್ಲಿ ಪೂರ್ಣಗೊಳಿಸಲು ಕ್ರಮ.
•ಮುಖ್ಯಮಂತ್ರಿಗಳ ವಿಶೇಷ ಅಭಿವೃದ್ಧಿ ಯೋಜನೆ ಹಾಗೂ ಅಲಸಂಖ್ಯಾತರ ಕಾಲೋನಿ ಅಭಿವೃದ್ಧಿ ಕಾರ್ಯಕ್ರಮಗಳಡಿ ಅಲ್ಪಸಂಖ್ಯಾತರ ಸಮುದಾಯಗಳಿಗೆ ವಿವಿಧ ಅಭಿವೃದ್ಧಿ…
“ಶೋಷಿತ ಸಮುದಾಯಗಳ ಶಿಕ್ಷಣಕ್ಕೆ ಒತ್ತು”
•ರಾಜ್ಯದ 62 ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ೩೦ ಕೋಟಿ ರೂ. ವೆಚ್ಚದಲ್ಲಿ 6 ರಿಂದ 12ನೇ ತರಗತಿಯವರೆಗೆ Integrated ಶಾಲೆಗಳನ್ನಾಗಿ ಉನ್ನತೀಕರಣ; 13,000 ವಿದ್ಯಾರ್ಥಿಗಳಿಗೆ ಅನುಕೂಲ.
•50 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ವಿದ್ಯಾರ್ಥಿಗಳ ದಾಖಲಾತಿಯನ್ನು 23 ಕೋಟಿ ರೂ.…
“ಗ್ರಾಮ ಸ್ವರಾಜ್ಯ”
•ಜಲ್ ಜೀವನ್ ಮಿಷನ್ ಯೋಜನೆಯಡಿ ಸುಸ್ಥಿರ ಜಲಮೂಲ ಆಧರಿಸಿ 118 ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಅನುಷ್ಠಾನದ ಮೂಲಕ 25 ಲಕ್ಷ ಮನೆಗಳಿಗೆ ನಳಸಂಪರ್ಕ ಒದಗಿಸುವ ಗುರಿ.
•4,000 ಗ್ರಾಮ ಪಂಚಾಯಿತಿಗಳಲ್ಲಿ ʻಕೂಸಿನ ಮನೆʼ ಎಂಬ ಹೆಸರಿನಲ್ಲಿ ಶಿಶುಪಾಲನಾ ಕೇಂದ್ರಗಳ ಪ್ರಾರಂಭ.
•ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 400…
“ಬ್ರಾಂಡ್ ಬೆಂಗಳೂರು”
•ಬೆಂಗಳೂರು ನಗರವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಏರಿಸಲು ʻಬ್ರಾಂಡ್ ಬೆಂಗಳೂರುʼ ಪರಿಕಲ್ಪನೆ ಜಾರಿ, ನಗರದ ಸಂಚಾರ ವ್ಯವಸ್ಥೆ, ಪರಿಸರ, ಘನತ್ಯಾಜ್ಯ ನಿರ್ವಹಣೆ, ಸಾರ್ವಜನಿಕ ಸ್ಥಳಗಳ ಸದ್ಬಳಕೆ, ಸಾರ್ವಜನಿಕರ ಆರೋಗ್ಯ, ಪ್ರಾಣಿಗಳ ಆರೋಗ್ಯ, ಜನಸ್ನೇಹಿ ಇ-ಆಡಳಿತ, ನೀರಿನ ಭದ್ರತೆ ಹಾಗೂ ಪ್ರವಾಹ ನಿರ್ವಹಣೆಯ…
“ಶಕ್ತಿ ಯೋಜನೆ”
•ಸರ್ಕಾರಿ ಬಸ್ ಗಳಲ್ಲಿ ರಾಜ್ಯದ ಮಹಿಳೆಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರಿಗೆ ಉಚಿತ ಪ್ರಯಾಣ
•ವಾರ್ಷಿಕ ಅಂದಾಜು 4,000 ಕೋಟಿ ರೂ. ವೆಚ್ಚದ ನಿರೀಕ್ಷೆ
•ಮಹಿಳೆಯರಿಗೆ ಶಿಕ್ಷಣ, ಉದ್ಯೋಗ, ಪ್ರವಾಸ ಮುಂತಾದ ಚಟುವಟಿಕೆ ಕೈಗೊಳ್ಳಲು ಅವಕಾಶ
•ಮಹಿಳೆಯರಿಗೆ ಪ್ರಯಾಣ ವೆಚ್ಚದ ಉಳಿತಾಯ ಹಾಗೂ ಸುರಕ್ಷಿತ ಪ್ರಯಾಣದ ವಾತಾವರಣ…
ಇದನ್ನೂ ಓದಿ : ರೈತರಿಗೆ ಶೂನ್ಯ ಬಡ್ಡಿದರದಲ್ಲಿ 5 ಲಕ್ಷವರೆಗೆ ಸಾಲ!
HOW TO APPLY : NEET-UG COUNSELLING 2023