ಜು.14 ರಂದು ಉಡುಪಿಗೆ ಕೇಂದ್ರ ಸಚಿವೆ ನಿರ್ಮಲಾ ಸೀತರಾಮನ್
– ಕೇಂದ್ರ ಸರಕಾರದ 9 ವರ್ಷಗಳ ಸಾಧನೆ ಕಾರ್ಯಕ್ರಮ
– ಉಡುಪಿ ಜಿಲ್ಲೆಯಲ್ಲಿ ಪಕ್ಷದ ಗೆಲುವಿಗೆ ಪ್ಲಾನ್
NAMMUR EXPRESS NEWS
ಉಡುಪಿ: ಉಡುಪಿಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಜು.14ರಂದು ಬೆಳಿಗ್ಗೆ 11 ಗಂಟೆಗೆ ಮಣಿಪಾಲಕ್ಕೆ ಆಗಮಿಸಲಿದ್ದಾರೆ.
ಹೋಟೆಲ್ ಕಂಟ್ರಿ ಇನ್ ಸಭಾಂಗಣದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ 9 ವರ್ಷಗಳ ಸಾಧನೆ ಮತ್ತು ಪ್ರಬುದ್ಧರ ಗೋಷ್ಠಿಯನ್ನುದ್ದೇಶಿಸಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಾತನಾಡಲಿದ್ದಾರೆ.
ಈಗಾಗಲೇ ಪಕ್ಷದ ಸೂಚನೆಯಂತೆ ಮಹಾ ಸಂಪರ್ಕ ಅಭಿಯಾನದಡಿ ಮಂಡಲ ವ್ಯಾಪ್ತಿಯ ಹಿರಿಯ ಬಿಜೆಪಿಗರ ಸಮಾವೇಶ, ವ್ಯಾಪಾರಿಗಳ ಸಮಾವೇಶ, ಮಂಡಲ ಕಾರ್ಯಕಾರಿಣಿ ಸಭೆಯನ್ನು ಆಯೋಜಿಸುವ ಜೊತೆಗೆ ಪ್ರಧಾನಿ ಮೋದಿ ಆಡಳಿತದ 9 ವರ್ಷಗಳ ಸಾಧನೆಗಳನ್ನು ಪ್ರಚುರಪಡಿಸಲು ಮನೆ ಮನೆ ಭೇಟಿ, ಮಂಡಲ ವ್ಯಾಪ್ತಿಯಲ್ಲಿ 100 ಮಂದಿ ವೃತ್ತಿಪರರು ಮತ್ತು ಸಾಮಾಜಿಕ ಪ್ರಮುಖರ ತಂಡ ರಚನೆ, ಬೂತ್ ವಾರು 100 ಮಂದಿ ಸಕ್ರಿಯ ಕಾರ್ಯಕರ್ತರ ತಂಡ ರಚನೆ, ಮಂಡಲ ಪದಾಧಿಕಾರಿಗಳ ಸೌಹಾರ್ದ ಕೂಟ ಆಯೋಜನೆ ಹಾಗೂ ಸೋಷಿಯಲ್ ಮೀಡಿಯಾ ತಂಡವನ್ನು ಸಕ್ರಿಯಗೊಳಿಸುವುದು ಇತ್ಯಾದಿ ಪ್ರಮುಖ ಕಾರ್ಯ ಯೋಜನೆಗಳನ್ನು ಜುಲೈ ತಿಂಗಳಲ್ಲಿ ವ್ಯವಸ್ಥಿತವಾಗಿ ಹಮ್ಮಿಕೊಳ್ಳಲಾಗುತ್ತಿದ್ದೂ ಪ್ರಮುಖ ನಾಯಕರ ಕಾರ್ಯಕ್ರಮ ಕೂಡ ರಾಜ್ಯದಲ್ಲಿ ಹಮ್ಮಿಕೊಳ್ಳಲಾಗುತ್ತಿದೆ.
ಮುಂಬರಲಿರುವ ತಾ.ಪಂ., ಜಿ.ಪಂ. ಹಾಗೂ ಲೋಕಸಭಾ ಚುನಾವಣೆಯಲ್ಲಿ ಮತ್ತೆ ಉಡುಪಿ ಜಿಲ್ಲೆ ನಿರಂತರ ಗೆಲುವಿನ ಜಿಲ್ಲೆ ಎಂಬ ಗೌರವ ಪಡೆಯಲು ಎಲ್ಲಾ ಬಿಜೆಪಿ ನಾಯಕರು, ಪ್ರಮುಖರು, ಕಾರ್ಯಕರ್ತರು ಶ್ರಮಿಸುತ್ತಿದ್ದಾರೆ.
ಇದನ್ನೂ ಓದಿ : ಅಡಿಕೆ ದರ ಎಷ್ಟಿದೆ..? ಪ್ರಮುಖ ಮಾರುಕಟ್ಟೆಯಲ್ಲಿ ಏನಿದೆ ದರ?
HOW TO APPLY : NEET-UG COUNSELLING 2023