2 ದಿನ ಮಲೆನಾಡಲ್ಲಿ ಮಳೆ ಅಲರ್ಟ್!
– ಗುಡುಗು, ಮಿಂಚು, ಬಿರುಗಾಳಿ ಜೊತೆ ಮಳೆ ಎಚ್ಚರಿಕೆ
– ಕರಾವಳಿಯಲ್ಲೂ ಭಾರೀ ಮಳೆ ಸಾಧ್ಯತೆ
NAMMUR EXPRESS NEWS
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯು ಸೇರಿದಂತೆ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಶುಕ್ರವಾರ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗದಲ್ಲಿ ಶುಕ್ರವಾರ ಮತ್ತು ಶನಿವಾರ ಯಲ್ಲೋ ಅಲರ್ಟ್ ಘೋಷಣೆಯಾಗಿದೆ. ಇನ್ನೂ ಬಾರಿ ಮಳೆಯ ಜೊತೆಗೆ ಗುಡುಗು ಮಿಂಚು ಬಿರುಗಾಳಿಯ ಆರ್ಭಟ ಇರಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ಶಿವಮೊಗ್ಗವಷ್ಟೆ ಅಲ್ಲದೆ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಕಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬಿರುಗಾಳಿಯ ವೇಗವು ಗಂಟೆಗೆ 40-45 ಕಿ.ಮೀ ಇರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಕಳೆದೊಂದು ವಾರದಿಂದ ಮಳೆಯ ಅಬ್ಬರ ಕೊಂಚ ಕಡಿಮೆಯಾಗಿದೆ. ಕರಾವಳಿಯಲ್ಲೂ ಮಳೆ ಕೊಂಚ ಕಡಿಮೆ ಆಗಿದೆ. ಆದ್ರೂ ನದಿ, ಹಳ್ಳಗಳು ತುಂಬಿ ಹರಿಯುತ್ತವೆ.
ಇದನ್ನೂ ಓದಿ : ಅಡಿಕೆ ದರ ಎಷ್ಟಿದೆ..? ಪ್ರಮುಖ ಮಾರುಕಟ್ಟೆಯಲ್ಲಿ ಏನಿದೆ ದರ?
HOW TO APPLY : NEET-UG COUNSELLING 2023