ಗೃಹ ಲಕ್ಷ್ಮೀ ಯೋಜನೆಗೆ ಜು.16ಕ್ಕೆ ಚಾಲನೆ!
– ಮನೆ ಯಜಮಾನಿಗೆ 2000 ರೂ.ನೀಡುವ ಯೋಜನೆ
– ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಚಾಲನೆ?
NAMMUR EXPRESS NEWS
ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹ ಲಕ್ಷ್ಮೀ ಯೋಜನೆಗೆ ಜು.16ರಂದು ಚಾಲನೆ ಸಿಗಲಿದೆ. ಪ್ರತಿ ತಿಂಗಳು 2000 ನೀಡುವ ಯೋಜನೆಗೆ ಜಾರಿಗೆ ಜುಲೈ 16ರಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಚಾಲನೆ ನೀಡುವ ಸಾಧ್ಯತೆ ಇದೆ. ಈಗಾಗಾಲೇ ಶಕ್ತಿ ಯೋಜನೆ ಹಾಗೂ ಅನ್ನ ಭಾಗ್ಯ ಯೋಜನೆಗೆ ಜಾರಿಗೊಳಿಸಿದ್ದು, ಇದೀಗ ರಾಜ್ಯದ ಮಹಿಳೆಯರು ಎದುರು ನೋಡುತ್ತಿರುವ ಗೃಹ ಲಕ್ಷ್ಮೀ ಯೋಜನೆ ಜಾರಿಗೆ ಕಾಂಗ್ರೆಸ್ ಸರ್ಕಾರ ತಯಾರಿ ನಡೆಸಿದ್ದು, ಕಾಂಗ್ರೆಸ್ ಪಕ್ಷದ ನಾಯಕಿ ಸೋನಿಯಾ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರಿಂದ ಚಾಲನೆ ಕೊಡಿಸಲು ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ. ಇನ್ನೂ ವಿಧಾನಸಭಾ ಚುನಾವಣೆಯ ಬಳಿಕ ಲೋಕಸಭಾ ಚುನಾವಣೆಗೆ ತಯಾರಿ ನಡೆಸುತ್ತಿರುವ ಕಾಂಗ್ರೆಸ್ ಇದೇ ಜುಲೈ 16 ರಿಂದ 18ರವರೆಗೆ ಬೆಂಗಳೂರಿನಲ್ಲಿ ಪ್ರತಿಪಕ್ಷ ನಾಯಕರ ಸಭೆ ನಡೆಯುತ್ತಿದ್ದು, ಇದೇ ಸಂದರ್ಭದಲ್ಲಿ ಗೃಹಲಕ್ಷ್ಮಿ ಯೋಜನೆ ಜಾರಿಗೆ ತರಲು ರಾಜ್ಯ ಸರ್ಕಾರ ನಿರ್ಧರಿಸಲಾಗಿದೆ ಎನ್ನಲಾಗಿದೆ.
ಕರ್ನಾಟಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾತನಾಡಿ, ಗೃಹ ಲಕ್ಷ್ಮಿ ಯೋಜನೆ ಜಾರಿ ವಿಚಾರದಲ್ಲಿ ಯಾವ ಗೊಂದಲ ಕೂಡಾ ಇಲ್ಲ. ದಿನಾಂಕ ದ ಬಗ್ಗೆ ಮಾತ್ರ ಗೊಂದಲ ಇದೆ, ಆಧಾರ್ ಲಿಂಕ್ ಇರುವ ಅಕೌಂಟ್ ಗೆ ಮಾತ್ರ ಹಣ ಹಾಕಬೇಕಾ ಅಥವಾ ಆಧಾರ್ ಲಿಂಕ್ ಇಲ್ಲದೇ ಇರುವ ಅಕೌಂಟ್ ಗೂ ಹಾಕಬೇಕಾ ಅನ್ನೋದಷ್ಟೇ ಗೊಂದಲ. ಅದು ಬಿಟ್ಟರೆ ಹಣ ರೆಡಿ ಇದೆ, ಫಲಾನುಭವಿಗಳ ಲಿಸ್ಟ್ ಕೂಡಾ ರೆಡಿ ಇದೆ ಎಂದು ಹೇಳಿದ್ದಾರೆ.
ಆಗಸ್ಟ್ ತಿಂಗಳಿನಿಂದ ಅರ್ಹ ಮಹಿಳೆಯರ ಬ್ಯಾಂಕ್ ಖಾತೆಗೆ ಎರಡು ಸಾವಿರ ರೂಪಾಯಿ ಜಮಾ ಮಾಡಲಾಗುವುದು. ಕಾಂಗ್ರೆಸ್ ಕೊಟ್ಟಿರುವ ಭರವಸೆಯನ್ನು ಈಡೇರಿಸಲಿದೆ. ಸ್ಥಿರ ಸರ್ಕಾರ ಮತ್ತು ಸಮೃದ್ಧ ಕರ್ನಾಟಕ ನಮ್ಮ ಗುರಿಯಾಗಿದೆ ಎಂದು ಹೆಬ್ಬಾಳ್ಕರ್ ಹೇಳಿದ್ದರು. ಕಾಂಗ್ರೆಸ್ ಸರ್ಕಾರ ತಯಾರಿ ನಡೆಸಿದಂತೆ ಇದೇ ಜುಲೈ 18ರಂದು ಅರ್ಜಿ ಸ್ವೀಕರಿಸಲು ಪ್ರಕ್ರಿಯೆ ಆರಂಭಿಸಿದರೆ, ರಾಜ್ಯಾದ್ಯಂತ ಇರುವ ಮಹಿಳೆಯರು ಅರ್ಜಿ ಸಲ್ಲಿಕೆ ಮಾಡಬಹುದು. ಸಲ್ಲಿಸಿದ ಅರ್ಜಿಗಳನ್ನ ಪರಿಶೀಲನೆ ಮಾಡಿ ಒಂದು ತಿಂಗಳ ಒಳಗೆ ಎಲ್ಲರ ಖಾತೆಗೆ ಹಣ ಹಾಕಲು ಸರ್ಕಾರ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಿದೆ ಎನ್ನಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಕುಟುಂಬದ ಯಜಮಾನಿಗೆ ಮಾಸಿಕ 2,000 ರೂ. ನೀಡುವ ‘ಗೃಹ ಲಕ್ಷ್ಮಿ’ ಯೋಜನೆಯಡಿ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭಿಸಲು ಸಿದ್ಧತೆ ಪೂರ್ಣಗೊಂಡಿದೆ. ಗೃಹ ಲಕ್ಷ್ಮಿ ಗೆ ಪ್ರತ್ಯೇಕ ಆ್ಯಪ್ ಸಿದ್ಧಪಡಿಸಲಾಗಿದೆ. ಅಲ್ಲದೇ ಬಾಪೂಜಿ ಸೇವಾ ಕೇಂದ್ರ, ನಾಡಕಚೇರಿ ಹಾಗೂ ತಾಲೂಕು ಕಚೇರಿಗಳಲ್ಲೂ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುತ್ತಿದೆ.
ಗೃಹ ಲಕ್ಷ್ಮಿ ಯೋಜನೆಯ ಮಾರ್ಗಸೂಚಿಗಳು ಬಿಡುಗಡೆಯಾದ ಬೆನ್ನಲ್ಲೇ ಆ ಯೋಜನೆಗೆ ಸಲ್ಲಿಸಬೇಕಾಗಿರುವ ಅರ್ಜಿಯ ನಮೂನೆಯನ್ನು ಬಿಡುಗಡೆ ಮಾಡಲಾಗಿದೆ. ರಾಜ್ಯ ಕುಟುಂಬ ಕಲ್ಯಾಣ ಇಲಾಖೆಯು ಈ ಅರ್ಜಿ ನಮೂನೆಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಮನೆಯ ಯಜಮಾನಿ ಯಾರೆಂದು ಘೋಷಿಸುವ, ಆಧಾರ್ ಕಾರ್ಡ್, ಆಧಾರ್ ಕಾರ್ಡ್ ಜೊತೆಗೆ ಲಿಂಕ್ ಇರುವ ಫೋನ್ ನಂಬರ್, ರೇಷನ್ ಕಾರ್ಡ್, ವೋಟರ್ ಐಡಿ ಕಾರ್ಡ್ ನಂಬರ್ ಸೇರಿದಂತೆ ಹಲವಾರು ಮಾಹಿತಿಗಳನ್ನು ನೀಡುವಂತೆ ಸೂಚಿಸಲಾಗಿದೆ.
ಇದನ್ನೂ ಓದಿ : ಅಡಿಕೆ ದರ ಎಷ್ಟಿದೆ..? ಪ್ರಮುಖ ಮಾರುಕಟ್ಟೆಯಲ್ಲಿ ಏನಿದೆ ದರ?
HOW TO APPLY : NEET-UG COUNSELLING 2023