ಕರಾವಳಿಯಲ್ಲಿ ಹೆಚ್ಚಾಯ್ತು ಅನಾಹುತ, ದುರಂತ!
– ಕಾರ್ಕಳ ವಿದ್ಯುತ್ ಸ್ಪರ್ಶಿಸಿ ಕಾರ್ಮಿಕ ಸಾವು
– ಕಚೇರಿಯಲ್ಲೇ ನೇಣಿಗೆ ಶರಣಾದ ಮಹಿಳೆ
– ಮಂಗಳೂರಲ್ಲಿ ಅಪಘಾತ: ಮೂವರು ಪಾರು
– ಸುರತ್ಕಲ್: ಮೀನು ಹಿಡಿಯಲು ಹೋದವ ನೀರುಪಾಲು
NAMMUR EXPRESS NEWS
ಕಾರ್ಕಳ: ಕೂಲಿ ಕಾರ್ಮಿಕ ಯುವಕನೋರ್ವ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟ ದಾರುಣ ಘಟನೆ ತಾಲೂಕಿನ ನಿಟ್ಟೆ ಗ್ರಾಮದಲ್ಲಿ ಶುಕ್ರವಾರ ಸಂಜೆ ನಡೆದಿದೆ. ಬಿಹಾರ ಮೂಲದ ಸೌರವ್ ಕುಮಾರ್ (20) ಮೃತ ಯುವಕ. ಕೆಲ ವರ್ಷಗಳ ಹಿಂದೆ ದಿನಗೂಲಿ ಕಾರ್ಮಿಕನಾಗಿ ನಿಟ್ಟೆಗೆ ಬಂದಿದ್ದ ಇವರು ನಿಟ್ಟೆ ಕಾಲೇಜಿನ ಎದುರಿನ ಬಾಡಿಗೆ ಕೊಠಡಿಯಲ್ಲಿ ವಾಸವಾಗಿದ್ದರು.
ತಾನು ಕೆಲಸ ನಿರ್ವಹಿಸುತ್ತಿದ್ದ ಕಚೇರಿಯಲ್ಲೇ ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಕಾರ್ಕಳದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ನಗರದ ಮಾರ್ಕೆಟ್ ಬಳಿಯ ನಿವಾಸಿ ಪ್ರಮೀಳಾ ದೇವಾಡಿಗ (32) ಎಂದು ಗುರುತಿಸಲಾಗಿದೆ.
ಕಾರ್ಕಳ ಪೇಟೆಯ ಮಾರ್ಕೆಟ್ ರಸ್ತೆಯಲ್ಲಿರುವ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು. ಇತರ ಸಿಬಂದಿ ಬೆಳಗ್ಗೆ ಕರ್ತವ್ಯಕ್ಕೆ ಹಾಜರಾದ ಸಂದರ್ಭ ಪ್ರಮೀಳಾ ನೇಣು ಬಿಗಿದಿರುವುದು ಕಂಡು ಬಂದಿದೆ. ಅವರು ನೇಣು ಬಿಗಿಯಲು ಮನೆಯಿಂದಲೇ ಸೀರೆ ತಂದಿರಬೇಕು ಎಂದು ಶಂಕಿಸಲಾಗಿದೆ.ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿದರು. ಮೃತರು ಪತಿ ಹಾಗೂ ಪುತ್ರನನ್ನು ಅಗಲಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.
ಮಂಗಳೂರಿನ ಕದ್ರಿ ಸರ್ಕಿಟ್ ಹೌಸ್ ಬಿಜೈ ರಸ್ತೆ ಮಧ್ಯೆ ಬಟ್ಟಗುಡ್ಡೆ ಬಳಿ ಕಾರು ಅಪಘಾತ ಸಂಭವಿಸಿ ಮೂವರು ಅಲ್ಪಸ್ವಲ್ಪಗಾಯಗಳೊಂದಿಗೆ ಪಾರಾಗಿರುವ ಘಟನೆ ನಡೆದಿದೆ. ಈ ಅಪಘಾತ ಶುಕ್ರವಾರ ಮಧ್ಯರಾತ್ರಿ ಸುಮಾರು 12.30 ರ ಸುಮಾರಿಗೆ ಸಂಭವಿಸಿದ್ದು, ಸರ್ಕಿಟ್ ಹೌಸ್ ಕಡೆಯಿಂದ ಬಿಜೈ ಕಡೆಗೆ ವೇಗವಾಗಿ ಸಾಗುತ್ತಿದ್ದ ಮಾರುತಿ ಬಲೇನೋ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ವಿದ್ಯುತ್ ಕಂಬಕ್ಕೆ ಹೊಡೆದು ಪಕ್ಕದ ರಸ್ತೆ ಬಿದ್ದು ಹತ್ತಿರದಲ್ಲಿದ್ದ ಗಿಡ ಗಂಟಿಗಳ ಮಧ್ಯೆ ಸಿಲುಕಿಕೊಂಡಿದೆ. ಕಾರಿನಲ್ಲಿದ್ದ ಮೂವರಿಗೆ ಅಲ್ಪ ಸ್ವಲ್ಪ ಗಾಯಾಗಳಾಗಿದೆ.
ಮೀನು ಹಿಡಿಯಲು ಹೋದವ ನೀರಲ್ಲಿ ಮುಳುಗಿ ವ್ಯಕ್ತಿ ಮೃತ್ಯು
ಮೀನು ಹಿಡಿಯಲು ಬಂದು ನೀರಲ್ಲಿ ಮುಳುಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಪೋರ್ಕೊಡಿ ನಿವಾಸಿ ಪೂವಪ್ಪ(40) ಎಂದು ಗುರುತಿಸಲಾಗಿದೆ. ಅಣ್ಣ ತಮ್ಮಂದಿರು ಮೀನು ಹಿಡಿಯಲು ಎಂದು ಸುರತ್ಕಲ್ 62ನೇ ತೋಕೂರು ಬಳಿಯ ಜಾರಂದಾಯ ದೈವಸ್ಥಾನದ ಗುತ್ತಿನ ಮನೆಯ ಸಮೀಪದ ಕೆರೆಗೆ ಇಳಿದಿದ್ದು, ಕೆಸರಿನಲ್ಲಿ ಹೂತುಹೋದ ಕಾರಣ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ : ಗೃಹ ಲಕ್ಷ್ಮೀ ಯೋಜನೆಗೆ ಜು.16ಕ್ಕೆ ಚಾಲನೆ!
HOW TO APPLY : NEET-UG COUNSELLING 2023