ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆಗೆ ಬಿಜೆಪಿ ಮೈತ್ರಿ?!
– ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ ಸದ್ದು
– ಜೆಡಿಎಸ್ ಮೊರೆ ಹೋಯ್ತಾ ಬಿಜೆಪಿ?
NAMMUR EXPRESS NEWS
ಚಿಕ್ಕಮಗಳೂರು: ರಾಜ್ಯದಲ್ಲಿ ಮೂರು ಪಕ್ಷಗಳು ಸಂಸತ್ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿವೆ. ಅದರಲ್ಲೂ ವಿಧಾನಸಭಾ ಚುನಾವಣೆಯಲ್ಲಿ ಸೋತು ಮುಖ ಭಂಗ ಅನುಭವಿಸಿರುವ ಬಿಜೆಪಿ ಈಗ ಜೆಡಿಎಸ್ ಜತೆಗೆ ಲೋಕಸಭಾ ಚುನಾವಣೆ ಎದುರಿಸಲು ಸಜ್ಜುಗೊಂಡಿದೆ ಎನ್ನಲಾಗಿದೆ. ಈ ನಡುವೆ ನಾಯಕರ ಹೇಳಿಕೆ ಈಗ ರಾಜಕೀಯವಾಗಿ ಚರ್ಚೆ ಮೂಡಿಸಿದೆ.
ಶೋಭಾ ಹೇಳಿದ್ದೇನು?:
ಜೆಡಿಎಸ್ ಮೈತ್ರಿ ವಿಚಾರವಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾಧ್ಯಮಗಳ ಜೊತೆಗೆ ಮಾತನಾಡಿದ್ದಾರೆ.
ರಾಜಕೀಯ ಭಿನ್ನಮತಗಳನ್ನ ದೂರವಿಟ್ಟು ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆಂಬಲ ಕೊಡಬೇಕು. ಅನೇಕ ಪಕ್ಷಗಳು ಬೆಂಬಲಿಸುತ್ತಿದ್ದು, ಜೆಡಿಎಸ್ನಿಂದಲೂ ನಾವು ಅಪೇಕ್ಷೆ ಮಾಡುತ್ತೇವೆ ಎಂದು ಹೇಳಿದರು.
ಪ್ರಧಾನಿ ಮೋದಿ ಅವರ ಆಡಳಿತ ಎಲ್ಲಾರೂ ಮೆಚ್ಚುವಂತದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿ ಪ್ರಧಾನಿಯಾಗಬೇಕು. ಮಿತ್ರರಾಷ್ಟ್ರಗಳು ಇಂದು ಭಾರತಕ್ಕೆ ಎದ್ದುನಿಂತ್ತು ಗೌರವ ನೀಡುತ್ತಿದ್ದಾರೆ. ಎಂದರೇ ಅದಕ್ಕೆ ಪ್ರಮುಖ ಕಾರಣ ಪ್ರಧಾನಿ ಮೋದಿ ಅವರೇ. ಹೀಗಾಗಿ ರಾಜಕೀಯ ಭಿನ್ನಮತಗಳನ್ನ ದೂರ ಬಿಟ್ಟು ಬೆಂಬಲ ಕೊಡಬೇಕು. ಇಂತಹ ಅಪೇಕ್ಷೆ ಅನೇಕ ರಾಜಕೀಯ ಪಾರ್ಟಿಯಲ್ಲೂ ಇದೆ. ಈ ಅಪೇಕ್ಷೆಯನ್ನ ಜೆಡಿಎಸ್ನಿಂದಲೂ ನಿರೀಕ್ಷೆ ಮಾಡುತ್ತೇವೆ ಎಂದು ಮೈತ್ರಿ ಕುರಿತು ಸ್ವಷ್ಟ ಪಡಿಸಿದರು.
ಇದನ್ನೂ ಓದಿ : ಗೃಹ ಲಕ್ಷ್ಮೀ ಯೋಜನೆಗೆ ಜು.16ಕ್ಕೆ ಚಾಲನೆ!
HOW TO APPLY : NEET-UG COUNSELLING 2023