ಶಾಲೆ ಮಕ್ಕಳ ಪುಸ್ತಕದ ಹೊರೆ ಶೀಘ್ರ ಇಳಿಯುತ್ತೆ!
– ಹೆಚ್ಚುವರಿ ಅತಿಥಿ ಶಿಕ್ಷಕರ ನೇಮಕಾತಿಗೂ ಕ್ರಮ
– ಶರಾವತಿ ನದಿ ಮುಳುಗಡೆ ಸಂತ್ರಸ್ತರ ಭೂಮಿ ಹಕ್ಕು ಸಮಸ್ಯೆ ಪರಿಹಾರಕ್ಕೆ ಕ್ರಮ: ಮಧು ಬಂಗಾರಪ್ಪ
NAMMUR EXPRESS NEWS
ಸಾಗರ: ಶಾಲಾ ಮಕ್ಕಳಿಗೆ ಪುಸ್ತಕಗಳ ಹೊರೆ ಇಳಿಸುವ ವಿಚಾರದ ಕುರಿತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯಿಸಿದ್ದು, ವಿದ್ಯಾರ್ಥಿಗಳಿಗೆ ಹೊರೆಯಾಗದಂತೆ ಶಿಕ್ಷಣ ತಜ್ಞರ ಜೊತೆ ಚರ್ಚಿಸಿ ಪುಸ್ತಕಗಳ ಹೊರೆ ಇಳಿಸಲಾಗುವುದು ಎಂದು ಆಶ್ವಾಸನೆ ನೀಡಿದರು. ಸಾಗರದಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯನವರ ಸೂಚನೆ ಮೇರೆಗೆ ಪಠ್ಯಪುಸ್ತಕಗಳ ಪರಿಷ್ಕರಣೆ ಮಾಡಲಾಗುವುದು. ಸಪ್ಲಿಮೆಂಟರಿ ಪುಸ್ತಕಗಳನ್ನು ಈಗಾಗಲೇ ವಿದ್ಯಾರ್ಥಿಗಳಿಗೆ ತಲುಪಿಸಲಾಗಿದೆ ಎಂದರು.
ಈಗಾಗಲೇ ಶಿಕ್ಷಕರ ಕೌನ್ಸಲಿಂಗ್ ಪ್ರಕ್ರಿಯೆ ಮುಕ್ತಾಯ ಹಂತದಲ್ಲಿದ್ದು ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲಾಗಿದೆ. ಹೆಚ್ಚುವರಿ ಅತಿಥಿ ಶಿಕ್ಷಕರ ನೇಮಕಾತಿಗೂ ಕ್ರಮ ಕೈಗೊಳ್ಳಲಾಗುವುದು. ರಾಜ್ಯದ ಅನೇಕ ಕಡೆಗಳಲ್ಲಿ ಶಾಲಾ ಕಟ್ಟಡಗಳ ದುರಸ್ತಿಗೂ ಕ್ರಮ ವಹಿಸಲಾಗಿದೆ ಎಂದರು.
ಒಂದರಿಂದ ಎಂಟನೇ ತರಗತಿವರೆಗೆ ಇದ್ದ ಮೊಟ್ಟೆ ವಿತರಣೆಯನ್ನು 10ನೇ ತರಗತಿಯ ವಿದ್ಯಾರ್ಥಿಗಳಿಗೂ ವಿಸ್ತರಿಸಲಾಗಿದೆ. ಪ್ರಸ್ತುತ ವಾರಕ್ಕೆ ಎರಡು ಮೊಟ್ಟೆಗಳು ವಿತರಣೆಯಂತೆ 84 ಮೊಟ್ಟೆಗಳನ್ನು ವಿತರಿಸಲಾಗುತ್ತಿದೆ. ಅನ್ನಭಾಗ್ಯ ಯೋಜನೆ ಅಡಿ ಹೆಚ್ಚುವರಿ ಐದು ಕೆಜಿ ಅಕ್ಕಿಗೆ ಹಣ ವಿತರಣೆ ವಿಷಯದಲ್ಲಿ ಸಮಸ್ಯೆ ವಿಚಾರದಲ್ಲಿ ಹಲವು ಫಲಾನುಭವಿಗಳ ಬ್ಯಾಂಕ್ ಖಾತೆ ಮತ್ತು ಆಧಾರ್ ಕಾರ್ಡ್ ಗಳಲ್ಲಿನ ಹೆಸರಿನ ವ್ಯತ್ಯಾಸ ಬಗ್ಗೆ ಕ್ರಮ ವಹಿಸಿ ಹಣ ತಲುಪಿಸಲಾಗುವುದು ಎಂದರು.
ಕೇಂದ್ರ ಸರ್ಕಾರದವರು ಅಕ್ಕಿಯನ್ನು ನೀಡಿದ್ದರೆ ಈ ರೀತಿಯ ಸಮಸ್ಯೆಯ ಪ್ರಶ್ನೆ ಇರುತಿರಲಿಲ್ಲ. ಕೇಂದ್ರದವರು ಅಕ್ಕಿ ನೀಡದಿದ್ದ ಹಿನ್ನೆಲೆಯಲ್ಲಿ ಹಣ ಕೊಡುವ ಸಮಸ್ಯೆ ಉದ್ಭವಿಸಿದೆ. ಇದು ತಾತ್ಕಾಲಿಕವಾಗಿದ್ದು ಶೀಘ್ರವೇ ಪರಿಹಾರ ಆಗಲಿದೆ. ಶರಾವತಿ ನದಿ ಮುಳುಗಡೆ ಸಂತ್ರಸ್ತರ ಭೂಮಿ ಹಕ್ಕು ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ಇದನ್ನೂ ಓದಿ : ಗೃಹ ಲಕ್ಷ್ಮೀ ಯೋಜನೆಗೆ ಜು.16ಕ್ಕೆ ಚಾಲನೆ!
HOW TO APPLY : NEET-UG COUNSELLING 2023