ಬಿಜೆಪಿ ನಾಯಕ ಅನಂತ್ ಕುಮಾರ್ ಪತ್ನಿ ಕಾಂಗ್ರೆಸ್ ಬರ್ತಾರಾ?
– ತೇಜಸ್ವಿನಿ ಅನಂತ್ ಕುಮಾರ್ ಅವರಿಗೆ ಶೆಟ್ಟರ್ ಆಹ್ವಾನ
– ಬಿಜೆಪಿ ಜೊತೆ ಸ್ನೇಹಕ್ಕೆ ಜೆಡಿಎಸ್ ಪಕ್ಷದಲ್ಲೇ ಅಪಸ್ವರ!
– ರಾಜ್ಯಸಭೆಗೆ ಅಣ್ಣಾಮಲೈ ಆಯ್ಕೆ ಸಾಧ್ಯತೆ
NAMMUR EXPRESS NEWS : ಬಿಜೆಪಿ ಹಿರಿಯ ನಾಯಕ ಮಾಜಿ ಕೇಂದ್ರ ಸಚಿವ ಅನಂತ್ ಕುಮಾರ್ ಅವರ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಅವರಿಗೆ ಈಗ ಕಾಂಗ್ರೆಸ್ ಪಕ್ಷಕ್ಕೆ ಆಹ್ವಾನ ನೀಡಲಾಗಿದೆ. ಮಾಜಿ ಮುಖ್ಯಮಂತ್ರಿ ಕಾಂಗ್ರೆಸ್ ಎಂ ಎನ್ ಸಿ ಜಗದೀಶ್ ಶೆಟ್ಟರ್ ಆಹ್ವಾನ ನೀಡಿದ್ದು ರಾಜಕೀಯ ಕ್ಷೇತ್ರದಲ್ಲಿ ಕುತೂಹಲವನ್ನು ಮೂಡಿಸಿದೆ.
ಬಿಜೆಪಿ ಜೊತೆ ಸ್ನೇಹಕ್ಕೆ ಜೆಡಿಎಸ್ ಪಕ್ಷದಲ್ಲೇ ಅಪಸ್ವರ!
ರಾಜ್ಯದಲ್ಲಿ ಲೋಕಸಭೆ ಚುನಾವಣೆಯಲ್ಲಿ ಹಿನ್ನಲೆಯಲ್ಲಿ ಬಿಜೆಪಿ ಜೊತೆ ಸ್ನೇಹಕ್ಕೆ ಮುಂದಾಗಿರುವ ಜೆಡಿಎಸ್ ಪಕ್ಷದ ನಡೆಗೆ ಜೆಡಿಎಸ್ ಪಕ್ಷದ ವಲಯದಲ್ಲಿ ಅಪಸ್ವರ ವ್ಯಕ್ತವಾಗಿದೆ. ಶಾಸಕಿಯರಾದ ಶಿವಮೊಗ್ಗ ಗ್ರಾಮಾಂತರದ ಶಾರದಾ ಪೂರ್ಯ ನಾಯಕ್ ಹಾಗೂ ದೇವದುರ್ಗದ ಶಾಸಕಿ ಕರಿಯಮ್ಮ ಇವರು ಅಪಸ್ವರ ವ್ಯಕ್ತಪಡಿಸಿದ್ದು ಈ ಬಗ್ಗೆ ಪರಿಶೀಲಿಸುವಂತೆ ಜೆಡಿಎಸ್ ಪ್ರಮುಖ ಕುಮಾರಸ್ವಾಮಿ ಅವರಲ್ಲಿ ಮನವಿ ಮಾಡಿದ್ದಾರೆ ಎನ್ನಲಾಗಿದೆ.
ಬಿಜೆಪಿ ಜೊತೆ ಸ್ನೇಹ ಮಾಡಿದ್ದಲ್ಲಿ ಪಕ್ಷದ ವರ್ಚಸ್ಸು ಮತ್ತು ಪಕ್ಷದ ಸಂಘಟನೆಗೆ ತೊಂದರೆಯಾಗಲಿದೆ ಎಂದು ಸಲಹೆಯನ್ನು ನೀಡಿದ್ದಾರೆ ಎನ್ನಲಾಗಿದೆ.
ರಾಜ್ಯಸಭೆಗೆ ಅಣ್ಣಾಮಲೈ ಸಾಧ್ಯತೆ
ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಬಿಜೆಪಿಯು 73 ಸ್ಥಾನಗಳನ್ನು ಹೊಂದಿರುವ ರಾಜಸ್ಥಾನದಿಂದ ಸಂಸತ್ನ ಮೇಲ್ಮನೆಗೆ ಆಯ್ಕೆ ಮಾಡುವ ನಿರೀಕ್ಷೆಯಿದೆ. ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿಯಾಗಿದ್ದ ಅಣ್ಣಾಮಲೈ, 2019ರ ಮೇ ತಿಂಗಳಲ್ಲಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು. ನಂತರ ಬಿಜೆಪಿಗೆ ಸೇರ್ಪಡೆ ಯಾಗಿದ್ದ ಅವರನ್ನು ತಮಿಳುನಾಡು ಬಿಜೆಪಿ ಮಾಡಲಾಗಿತ್ತು. ರಾಜ್ಯಾಧ್ಯಕ್ಷರನ್ನಾಗಿ ಮುಂದಿನ ವಾರ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ‘ಬ್ರಿಕ್ಸ್’ ಶೃಂಗಸಭೆಗೆ ತೆರಳಲಿರುವ ನಾಲ್ವರು ಸದಸ್ಯರ ಬಿಜೆಪಿ ನಿಯೋಗಕ್ಕೆ ಅಣ್ಣಾಮಲೈ ಅವರನ್ನು ಆಯ್ಕೆ ಮಾಡಲಾಗಿದೆ.
ಜೆಡಿಎಸ್ ಮೈತ್ರಿ ನಮಗೆ ಗೊತ್ತಿಲ್ಲ: ಸಿಟಿ ರವಿ
ಜೆಡಿಎಸ್ ಜೊತೆ ಮೈತ್ರಿ ಕುರಿತಂತೆ ನಮ್ಮ ಹಂತದಲ್ಲಿ ಯಾವುದೇ ಚರ್ಚೆ ಆಗಿಲ್ಲ, ಮೇಲ್ಮಟ್ಟದಲ್ಲಿ ಚರ್ಚೆ ಆಗಿದ್ದರೆ ಅದರ ಬಗ್ಗೆ ನನಗೆ ಗೊತ್ತಿಲ್ಲ ಎಂದು ರಾಷ್ಟ್ರೀಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ನೇಷನ್ ಫಸ್ಟ್, ಪಾರ್ಟಿ ನೆಕ್ಸ್, ಪರ್ಸನ್ ಲಾಸ್ಟ್ ಅನ್ನೋ ತತ್ವದ ಮೇಲೆ ನಂಬಿಕೆ ಇಟ್ಟವರು. ಈ ತತ್ವದಂತೆ ಯಾರು ಬೇಕಾದರೂ ನಮ್ಮ ಜೊತೆ ಸೇರಬಹುದು ಎಂದಿದ್ದಾರೆ. ರಾಷ್ಟ್ರದ ಹಿತಾಸಕ್ತಿ, ಮೋದಿ ನೇತೃತ್ವದ ರಾಷ್ಟ್ರಹಿತ ಹಾಗೂ ಜನಪರ ಕೆಲಸ ಮೆಚ್ಚಿ ಯಾರು ಬೇಕಾದರೂ ಬರಬಹುದು ಎಂದಿದ್ದಾರೆ. ರಾಜಕಾರಣ ನಿಂತ ನೀರಲ್ಲ, ಅದು ಹರಿಯುವ ನದಿ ಇದ್ದಂತೆ. ರಾಜಕಾರಣದಲ್ಲಿ ಶಾಶ್ವತ ಶತ್ರುಗಳೂ ಇಲ್ಲ, ಮಿತ್ರರೂ ಇಲ್ಲ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ
ಇದನ್ನೂ ಓದಿ : ತುಂಬಿದ ನದಿಯಲ್ಲಿ ಮರ ಹಿಡಿದು ಜೀವ ಉಳಿಸಿಕೊಂಡ ಅಜ್ಜಿ!
HOW TO APPLY : NEET-UG COUNSELLING 2023