ಜು.20ರವರೆಗೆ ಮಳೆ ಹೈ ಅಲರ್ಟ್!
– ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ
– ಮಲೆನಾಡಲ್ಲಿ ಮುಂಗಾರು ಚುರುಕು
NAMMUR EXPRESS NEWS
ಉಡುಪಿ/ ಮಂಗಳೂರು: ಕರ್ನಾಟಕ ಕರಾವಳಿ ಜಿಲ್ಲೆಗಳಿಗೆ ವರುಣನ ಕೃಪೆ ಮುಂದುವರೆದಿದೆ. ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು ಮುಂದಿನ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು ಯೆಲ್ಲೋ ಅಲರ್ಟ್ ಘೋಷಿಸಿದೆ. ಇನ್ನು ಮಲೆನಾಡಲ್ಲಿ ಮಳೆ ಕಳೆದ ಎರಡು ದಿನಗಳಿಂದ ಶುರುವಾಗಿದೆ.
ಜುಲೈ 20ರವರೆಗೆ ಈ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಮಲೆನಾಡು ಜಿಲ್ಲೆಗಳಲ್ಲಿ ಕೂಡ ಉತ್ತಮ ಮಳೆಯಾಗುತ್ತಿದ್ದು, ಕೃಷಿ ಚಟುವಟಿಕೆಗಳು ಗರಿಗೆದರಿವೆ. ಹಲವು ಕಡೆಗಳಲ್ಲಿ ರೈತರು ಭತ್ತ ನಾಟಿ ಮಾಡಲು ಆರಂಭಿಸಿದ್ದಾರೆ. ಭಾನುವಾರ ಕೂಡ ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ. ಶೃಂಗೇರಿ, ಹೊರನಾಡು, ಕೊಪ್ಪ, ಮೂಡಿಗೆರೆ, ಮಾವಿನಕಾಡು, ಕಾರವಾರ, ಗೋಕರ್ಣ, ಧರ್ಮಸ್ಥಳ, ಉಡುಪಿ, ಮಲ್ಪೆ, ಪಣಂಬೂರು, ಕಾಪು, ಶಿರಸಿ, ಸಾಗರ, ಶಿವಮೊಗ್ಗ, ಕಾರ್ಗಲ್ ಸೇರಿದಂತೆ ಹಲವು ಕಡೆಗಳಲ್ಲಿ ಉತ್ತಮ ಮಳೆಯಾಗಿದೆ.
ನಾಲ್ಕು ದಿನಗಳ ಕಾಲ ಗುಡುಗು ಮಿಂಚಿನೊಂದಿಗೆ ಬಿರುಗಾಳಿ ಸಹಿತ ಮಳೆಯಾಗಲಿದ್ದು, ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ಮಳೆ ಮುನ್ಸೂಚನೆ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ತಿಳಿಸಿದೆ.
ಬೆಂಗಳೂರು ಹವಾಮಾನ ಬೆಂಗಳೂರಿನಲ್ಲಿ ಸೋಮವಾರ ಬೆಳಗ್ಗೆ ಹಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣವಿದ್ದು ಸಂಜೆ ವೇಳೆಗೆ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಮಳೆ ಬಂದರೂ ಎಲ್ಲಿಯೂ ಅನಾಹುತ ಸಂಭವಿಸಿದ ಬಗ್ಗೆ ಮಾಹಿತಿ ಇಲ್ಲ.
ಇದನ್ನೂ ಓದಿ : ಆಗುಂಬೆ ಘಾಟಿ ಮೇಲೆ ನಿಂತಿದ್ದವನಿಗೆ ಗುದ್ದಿದ ಟ್ರಾಕ್ಟರ್
HOW TO APPLY : NEET-UG COUNSELLING 2023