ಮಲೆನಾಡ ಸಮಸ್ಯೆಗೆ ಸಿಗುತ್ತಾ ಮುಕ್ತಿ?
– ಶರಾವತಿ ಸಂತ್ರಸ್ತರ ಸಮಸ್ಯೆಗೆ ಪರಿಹಾರ ಚರ್ಚೆ
– ಅರಣ್ಯ, ಕಂದಾಯ ಸಚಿವರ ನೇತೃತ್ವದಲ್ಲಿ ಸಭೆ
– ಶಿವಮೊಗ್ಗ ಜಿಲ್ಲೆಯ ಎಲ್ಲಾ ಶಾಸಕರು ಹಾಜರ್
NAMMUR EXPRESS NEWS
ಬೆಂಗಳೂರು: ವಿಧಾನಸೌಧದಲ್ಲಿ ಶಿವಮೊಗ್ಗ ಜಿಲ್ಲೆಯ ಶರಾವತಿ ಕಣಿವೆ ಜಲ ವಿದ್ಯುತ್ ಯೋಜನೆಯ ಸಂತ್ರಸ್ತರು ಹಾಗೂ ಅರಣ್ಯ ಹಕ್ಕು ಭೂ ಮಂಜೂರಾತಿ, 94 ಸಿ, 94 ಸಿಸಿ ಸೇರಿ ಮಲೆನಾಡು ಭಾಗದ ಸಮಸ್ಯೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಆಯಾ ಇಲಾಖೆಗಳ ಸಂಪುಟ ಸಹೋದ್ಯೋಗಿಗಳು ಹಾಗೂ ರಾಜ್ಯದ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ವಿಶೇಷ ಸಭೆ ನಡೆಯಿತು.
ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ, ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ, ಯುವಜನ, ಕ್ರೀಡಾ ಹಾಗೂ ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆಯ ಸಚಿವರಾದ ಬಿ.ನಾಗೇಂದ್ರ, ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎಂ ಎ ಪೊನ್ನಣ್ಣ ಹಾಗೂ ಶಿವಮೊಗ್ಗ ಜಿಲ್ಲೆಯ ಶಾಸಕರು ಹಾಗೂ ಶಿರಸಿ ಶಾಸಕ ಭೀಮಣ್ಣ ನಾಯ್ಕ ಭಾಗವಹಿಸಿದರು.
ಇದನ್ನೂ ಓದಿ : ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ತಯಾರಿ!
HOW TO APPLY : NEET-UG COUNSELLING 2023