ಬೆಂಗಳೂರಲ್ಲಿ ಉಗ್ರರ ದಾಳಿಗೆ ಮಾಸ್ಟರ್ ಪ್ಲಾನ್!
– ಸಿಸಿಬಿ ಪೊಲೀಸರಿಂದ ಐವರು ಶಂಕಿತ ಉಗ್ರರ ಬಂಧನ
– ರಾಜ್ಯದ ಹಲವೆಡೆ ಉಗ್ರ ಕೃತ್ಯಕ್ಕೆ ತಯಾರಿ..?
NAMMUR EXPRESS NEWS
ಬೆಂಗಳೂರು: ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು
ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕರ್ನಾಟಕದಲ್ಲಿ ಭಾರಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ ಐವರು ಶಂಕಿತರ ಉಗ್ರರನ್ನು ಬಂಧಿಸಿರುವ ಘಟನೆ ನಡೆದಿದೆ. ಬಂಧಿತರು ಸೈಯ್ಯದ್, ಸುಹೇಲ್ ಉಮೇರ್, ಜುನೇದ್, ಮುದಾಸಿನ್, ಜಾಹೀದ್ ಎಂದು ತಿಳಿದುಬಂದಿದೆ.
ಐವರು 2007ರ ಅಕ್ಟೋಬರ್ ನಲ್ಲಿ ಮೂವರ ಕಿಡ್ನಾಪ್ ಹಾಗೂ ಓರ್ವನ ಮರ್ಡರ್ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದರು ಎನ್ನಲಾಗಿದೆ. ಅಲ್ಲದೇ ಜೈಲಿನಲ್ಲಿ ಉಗ್ರರ ಜೊತೆಗೆ ಸಂಪರ್ಕ ಹೊಂದಿದ್ದಾರೆ. ನಂತರ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ವಿಧ್ವಂಸಕ ಕೃತ್ಯಕ್ಕೆ ತಯಾರಿ ನಡೆಸಿದ್ದರು. ಇದಕ್ಕೆ ಬೇಕಾಗುವ ಕಚ್ಚಾ ವಸ್ತುಗಳನ್ನು ಒಗ್ಗೂಡಿಸುತಿದ್ದರು ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಈ ಬಗ್ಗೆ ಕೇಂದ್ರ, ಸಿಸಿಬಿ ಮಾಹಿತಿ ಸಂಗ್ರಹ ಮಾಡಿತ್ತು. ಮಾಹಿತಿ ಅನ್ವಯ ಸಿಸಿಬಿ ಜೊತೆಗೆ ಕಾರ್ಯಾಚರಣೆ ನಡೆಸಿ ಐವರನ್ನು ಬಂಧಿಸಿ ವಿಚಾರಣೆ ನಡೆಸಿದೆ.
ರಾಜ್ಯದಲ್ಲಿ ಈ ಘಟನೆ ಬಳಿಕ ಎಲ್ಲೆಡೆ ಪೊಲೀಸರು ಅಲರ್ಟ್ ಆಗಿದ್ದಾರೆ.
ಇದನ್ನೂ ಓದಿ : ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ತಯಾರಿ!
HOW TO APPLY : NEET-UG COUNSELLING 2023