ಯಡಿಯೂರಪ್ಪ ಇನ್ನು ಮುಂದೆ ಡಾಕ್ಟರ್!
– ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿವಿಯಿಂದ ಗೌರವ ಡಾಕ್ಟರೇಟ್
– ಜು.21 ರಂದು ಘಟಿಕೋತ್ಸವ ಸಂಭ್ರಮ
– ರಾಜ್ಯ ಕಂಡ ಅಪರೂಪದ ಜನ ನಾಯಕನಿಗೆ ಗೌರವ
NAMMUR EXPRESS NEWS
ಶಿವಮೊಗ್ಗ: ರಾಜ್ಯ ಕಂಡ ಸರಳ ನಾಯಕ, ಜನಪರ ವ್ಯಕ್ತಿತ್ವದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಇನ್ನು ಮುಂದೆ ಡಾ.ಬಿ.ಎಸ್.ಯಡಿಯೂರಪ್ಪ ಅಗಲಿದ್ದಾರೆ. ಹೌದು. ಜು.21ರಂದು ನಡೆಯುವ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿವಿ ಘಟಿಕೋತ್ಸವದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಡಾಕ್ಟರೇಟ್ ಪದವಿ ನೀಡಿ ಗೌರವಿಸಲಿದೆ. ಈ ಕುರಿತು ವಿವಿಯ ಕುಲಪತಿಗಳು ಸುದ್ದಿಗೋಷ್ಠಿಯಲ್ಲಿ ಘೋಷಿಸಿದ್ದಾರೆ.
ಜು.21 ರಂದು ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ 8ನೇ ಘಟಿಕೋತ್ಸವ ಸಂಭ್ರಮ
ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 8ನೇ ಘಟಿಕೋತ್ಸವ ಸಮಾರಂಭವನ್ನು ಜು.21 ರ ಸಂಜೆ 4 ಗಂಟೆಗೆ ವಿಶ್ವವಿದ್ಯಾಲಯ ಮುಖ್ಯ ಆವರಣ, ಇರುವಕ್ಕಿ ಶಿವಮೊಗ್ಗ ಇಲ್ಲಿ ಆಯೋಜಿಸಲಾಗಿದೆ ಎಂದು ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ.ಆರ್.ಸಿ.ಜಗದೀಶ ತಿಳಿಸಿದ್ದಾರೆ. ರಾಜ್ಯದ ಗೌರವಾನ್ವಿತ ರಾಜ್ಯಪಾಲರು ಹಾಗೂ ವಿಶ್ವವಿದ್ಯಾಲಯದ ಕುಲಾದಿಪತಿಗಳಾದ ಥಾವರಂದ್ ಗೆಲ್ಲೋಟ್ ಇವರ ಅಧ್ಯಕ್ಷತೆಯಲ್ಲಿ ಘಟಿಕೋತ್ಸವ ಸುಗ್ಗಿ ಸಂಭ್ರಮ ಜರುಗಲಿದ್ದು, ಪದವೀಧರರಿಗೆ ಪದವಿ ಪ್ರಧಾನ ಮಾಡುವರು. ಕೃಷಿ ಸಚಿವರು ಹಾಗೂ ವಿವಿ ಸಹ- ಕುಲಾದಿಪತಿಗಳಾದ ಎನ್.ಚಲುವರಾಯಸ್ವಾಮಿ ಗೌರವ ಉಪಸ್ಥಿತಿ ಇರಲಿದೆ. ಪದ್ಮವಿಭೂಷಣ ಪ್ರಶಸ್ತಿ ವಿಜೇತರು ಹಾಗೂ ರಾಜ್ಯಸಭಾ ಸದಸ್ಯರಾದ ಡಾ.ವೀರೇಂದ್ರ ಹೆಗ್ಗಡೆ ಅವರು 8ನೇ ಘಟಿಕೋತ್ಸವ ಭಾಷಣ ಮಾಡುವರು ಎಂದು ಇಂದು ನವುಲೆಯ ಕೃಷಿ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು.
37 ಚಿನ್ನದ ಪದಕ ಪ್ರದಾನ
8ನೇ ಘಟಿಕೋತ್ಸವದಲ್ಲಿ 409 ವಿದ್ಯಾರ್ಥಿಗಳು ಕೃಷಿ, ತೋಟಗಾರಿಕೆ, ಅರಣ್ಯ ವಿಭಾಗಗಳಲ್ಲಿ ಪದವಿ, 101 ವಿದ್ಯಾರ್ಥಿಗಳು ಸ್ನಾತಕೋತ್ತರ ಪದವಿ ಹಾಗೂ 23 ವಿದ್ಯಾರ್ಥಿಗಳು ಪಿ.ಹೆಚ್ಡಿ, ಪದವಿ ಪಡೆಯುತ್ತಿದ್ದಾರೆ. ಇವರಲ್ಲಿ 08 ಪದವಿ ವಿದ್ಯಾರ್ಥಿಗಳು ಚಿನ್ನದ ಪದಕಕ್ಕೆ ಭಾಜನರಾಗಿದ್ದು ಇವರಿಗೆ ಒಟ್ಟು 15 ಚಿನ್ನದ ಪದಕಗಳನ್ನು ನೀಡಲಾಗುವುದು. 14 ಎಂ.ಎಸ್ಸಿ ವಿದ್ಯಾರ್ಥಿಗಳು, 07 ಪಿಹೆಚ್ಡಿ ವಿದ್ಯಾರ್ಥಿಗಳು ಚಿನ್ನದ ಪದಕಕ್ಕೆ ಭಾಜನರಾಗಿದ್ದು ಒಟ್ಟು 37 ಚಿನ್ನದ ಪದಗಳನ್ನು ನೀಡಲಾಗುವುದು.
ಇದನ್ನೂ ಓದಿ : ಛೇ.. ಎಂಥಾ ನೀಚ ಕೃತ್ಯ…ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ ಮಾಡಿ ಗ್ಯಾಂಗ್ ರೇಪ್!
HOW TO APPLY : NEET-UG COUNSELLING 2023