ಧರ್ಮಸ್ಥಳದ ಸೌಜನ್ಯ ಸಾವಿನ ಕಥೆ ಈಗ ಸಿನಿಮಾ!
– ‘ಸ್ಟೋರಿ ಆಫ್ ಸೌಜನ್ಯ’ ಟೈಟಲ್ ನೋಂದಣಿ
– ಇತ್ತ ಮರು ತನಿಖೆಗಾಗಿ ಕರಾವಳಿಯಲ್ಲಿ ಹೋರಾಟ?
NAMMUR EXPRESS NEWS
ಬೆಂಗಳೂರು: ರಾಜ್ಯದಲ್ಲಿ ಭಾರೀ ಕುತೂಹಲ ಮೂಡಿಸಿರುವ ಉಜಿರೆ ಎಸ್.ಡಿ.ಎಂ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಸಾವು ಮತ್ತು ಅದರ ಕಥೆ ಆಧರಿಸಿ ಸ್ಯಾಂಡಲ್ವುಡ್ನಲ್ಲಿ ಸಿನಿಮಾ ಮಾಡಲು ನಿರ್ಮಾಪಕರು ಮುಂದಾಗಿದ್ದಾರೆ. ಧರ್ಮಸ್ಥಳದ ಸೌಜನ್ಯ ಅವರನ್ನು ಅಪಹರಿಸಿ ಬಳಿಕ ಅವರ ಮೇಲೆ ಅತ್ಯಾಚಾರವೂ ನಡೆದಿತ್ತು. ಸೌಜನ್ಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಇಟ್ಟುಕೊಂಡು ಸಿನಿಮಾ ಮಾಡಲಾಗುತ್ತಿದೆ ಎನ್ನಲಾಗಿದೆ 2012ರಲ್ಲಿ ಉಜಿರೆ ಎಸ್.ಡಿ.ಎಂ ಕಾಲೇಜು ವಿದ್ಯಾರ್ಥಿನಿ ಧರ್ಮಸ್ಥಳದ ಸೌಜನ್ಯ ಅವರನ್ನು ಅಪಹರಿಸಲಾಯಿತು. ಅದೇ ದಿನ ರಾತ್ರಿ ಅವರ ಮಿಸ್ಸಿಂಗ್ ಕೇಸ್ ಕೂಡ ದಾಖಲಾಯಿತು. 2012ರ ಅಕ್ಟೋಬರ್ 10 ರಂದು ಧರ್ಮಸ್ಥಳದ ಮಣ್ಣಸಂಖದಲ್ಲಿ ಅವರ ಶವ ಪತ್ತೆ ಆಯಿತು.
ಸೌಜನ್ಯ ಅವರ ಮೇಲೆ ಅತ್ಯಾಚಾರವೂ ನಡೆದಿತ್ತು. ಆದರೆ ಈ ಕೇಸ್ಗೆ ಸಂಬಂಧಿಸಿದಂತೆ ಬಂದನಕ್ಕೊಳಗಾಗಿದ್ದ ಸಂತೋಷ್ ರಾವ್ ಅವರು ನಿರಪರಾಧಿ ಎಂದು ಕೋರ್ಟ್ ಇತ್ತೀಚೆಗೆ ಆದೇಶ ಹೊರಡಿಸಿತ್ತು. ಸದ್ಯ ಈ ಪ್ರಕರಣದಲ್ಲಿ ಯಾರಿಗೂ ಶಿಕ್ಷೆಯಾಗಿಲ್ಲ. ಇದೀಗ ಆಕೆ ಸಾವಿಗೆ ನ್ಯಾಯ ಬೇಕೆಂದು ಈಗಾಗಲೇ ಹತ್ತು ಹಲವು ಸಂಘಟನೆಗಳು ಹೋರಾಟ ಶುರು ಮಾಡಿವೆ. ಈ ನಡುವೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ‘ಸ್ಟೋರಿ ಆಫ್ ಸೌಜನ್ಯ’ ಟೈಟಲ್ ನೋಂದಣಿ ಆಗಿದೆ. ಜಿಕೆ ವೆಂಚರ್ಸ್ ಈ ಟೈಟಲ್ ನೋಂದಣಿ ಮಾಡಿಸಿದ್ದು, ವಿ. ಲವ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಇನ್ನು ಈ ಚಿತ್ರ ಸಾಮಾಜಿಕ ಕಳಕಳಿಯನ್ನು ಹೊಂದಿರುವ ಕಥಾಹಂದರವನ್ನು ಒಳಗೊಂಡಿದೆ. ಈ ಚಿತ್ರ ಕನ್ನಡದಲ್ಲಿ ಮಾತ್ರ ಬರಲಿದೆ.
ಕನ್ನಡದಲ್ಲಿ ನೈಜ ಘಟನೆಯಾಧಾರಿತ ಸಿನಿಮಾಗಳು ಸಾಕಷ್ಟಿವೆ. ಅಪಹರಿಸಲಾದ ಹಾಗೂ ಅತ್ಯಾಚಾರಕ್ಕೊಳಗಾದ ಎಷ್ಟೋ ಮಹಿಳೆಯರ ನೊಂದ ಕಥೆಗಳನ್ನು ಸಿನಿಮಾ ಮಾಡಲಾಗಿದೆ. ಇದೀಗ ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿದ ಧರ್ಮಸ್ಥಳದ ಸೌಜನ್ಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಇಟ್ಟುಕೊಂಡು ಸಿನಿಮಾ ಮಾಡಲಾಗುತ್ತಿದೆ.
ಮರು ತನಿಖೆಗಾಗಿ ಕರಾವಳಿಯಲ್ಲಿ ಹೋರಾಟ
ಉಡುಪಿ: ಧರ್ಮಸ್ಥಳದ ಸೌಜನ್ಯಾಳ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ನ್ಯಾಯ ಬದ್ಧ ಮೂಲ ತನಿಖೆಗೆ ಆಗ್ರಹಿಸಿ ಉಡುಪಿಯಲ್ಲಿ ಜುಲೈ23ರಂದು ಬೃಹತ್ ಪ್ರತಿಭಟನೆ ನಡೆಸುವುದಾಗಿ ಅಂಬೇಡ್ಕರ್ ಯುವಸೇನೆಯ ಉಡುಪಿ ಜಿಲ್ಲಾಧ್ಯಕ್ಷ ಹರೀಶ್ ಸಾಲ್ಯಾನ್ ಮತ್ತು ದಯಾನಂದ ಕಪ್ಪೆಟ್ಟು ತಿಳಿಸಿದ್ದಾರೆ. ಜು.23ರ ಬೆಳಿಗ್ಗೆ 10.30ಕ್ಕೆ ಉಡುಪಿಯ ಸರ್ವಿಸ್ ಬಸ್ಸ್ ನಿಲ್ದಾಣ ಸಮೀಪದ ಬೋರ್ಡ್ ಹೈಸ್ಕೂಲ್ ಬಳಿ ನಡೆಯುವ ಈ ಪ್ರತಿಭಟನೆಯಲ್ಲಿ ಮೈಸೂರಿನ ಒಡನಾಡಿ ಸಂಸ್ಥೆಯ ಹೈಕೋರ್ಟ್ ವಕೀಲರಾದ ಶ್ರೀನಿವಾಸ್,ದಲಿತ ಚಿಂತಕ ಹಾಗೂ ಜನಪರ ಹೋರಾಟಗಾರ ಜಯನ್ ಮಲ್ಪೆ,ಬೆಳ್ತಂಗಡಿಯ ಪ್ರಗತಿಪರ ಹೋರಾಟಗಾರ ಶೇಖರ್ ಲಾಯಿಲ,ಚಿಂತಕ ಶ್ರೀರಾಮ ದಿವಾಣ ಹಾಗೂ ಇತರ ಬುದ್ಧಿಜೀವಿಗಳು ಭಾಗವಹಿಸುವರು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ : ಕರಾವಳಿಯಲ್ಲಿ ಕೊರಗಜ್ಜನ ಪವಾಡ.!
HOW TO APPLY : NEET-UG COUNSELLING 2023