ಹಾಲಿನ ದರ ಪ್ರತಿ ಲೀಟರ್ ಗೆ 3 ರೂ ಹೆಚ್ಚಾಯ್ತು!
– ಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಧಾರ
– ಶೀಘ್ರದಲ್ಲಿ ಹೋಟೆಲ್ ಆಹಾರ ಕೂಡ ದುಬಾರಿ?
ಬೆಂಗಳೂರು: ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ ರೂ.3 ಹೆಚ್ಚಳ ಮಾಡಲಾಗಿದೆ. ಈ ಸಂಬಂಧ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿನ ಎಲ್ಲ ಹಾಲು ಒಕ್ಕೂಟಗಳು ಹಾಗೂ ಕೆಎಂಎಫ್ ಅಧ್ಯಕ್ಷರ ಸಭೆ ನಡೆಸಿದರು. ಈ ಸಭೆಯಲ್ಲಿ ಹಾಲು ಒಕ್ಕೂಟಗಳು ನೀಡಿರುವಂತ ನಂದಿನಿ ದರ 5 ರೂ ಹೆಚ್ಚಳ ಪ್ರಸ್ತಾವನೆಯ ಬಗ್ಗೆ ಮಹತ್ವದ ಚರ್ಚೆಯನ್ನು ನಡೆಸಿದರು. ಅಲ್ಲದೇ ನಂದಿನಿ ಹಾಲಿನ ಪುಡಿಯ ದರವನ್ನು ಹೆಚ್ಚಳದ ಬಗ್ಗೆಯೂ ಚರ್ಚೆ ನಡೆಸಲಾಯಿತು.
ಅಂತಿಮವಾಗಿ ಸಿಎಂ ನೇತೃತ್ವದ ಸಭೆಯಲ್ಲಿ ನಂದಿನಿ ಹಾಲಿನ ಪ್ರತಿ ಲೀಟರ್ ದರವನ್ನು ರೂ.3 ಹೆಚ್ಚಳ ಮಾಡುವಂತ ನಿರ್ಧಾರವನ್ನು ಕೈಗೊಂಡಿದ್ದಾರೆ.
ಈ ಸಭೆಯಲ್ಲಿ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ, ಸಹಕಾರ ಸಚಿವ ಕೆ.ಎನ್. ರಾಜಣ್ಣ, ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಪಶುಸಂಗೋಪನಾ ಇಲಾಖೆ ಕಾರ್ಯದರ್ಶಿ ಸಲ್ಮಾ ಫಾಹಿಂ, ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಜಗದೀಶ್, ನಿರ್ದೇಶಕ ಹೆಚ್.ಡಿ.ರೇವಣ್ಣ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಮಾಲೂರು ಶಾಸಕ ನಂಜೇಗೌಡರು ಮತ್ತಿತರರು ಭಾಗವಹಿಸಿದ್ದರು.
ಇದನ್ನೂ ಓದಿ : ಕರಾವಳಿಯಲ್ಲಿ ಕೊರಗಜ್ಜನ ಪವಾಡ.!
HOW TO APPLY : NEET-UG COUNSELLING 2023