ಮಹಾ ಮಳೆಗೆ ನಾಲ್ವರು ಬಲಿ!
– ಮೀನು ಹಿಡಿಯಲು ತೆರಳಿದ್ದ ಯುವಕರಿಬ್ಬರ ಸಾವು.!
– ನೋಡ ನೋಡುತ್ತಾ ಜಲಪಾತದಲ್ಲಿ ಕೊಚ್ಚಿ ಹೋದ
– ಹಾಸನದಲ್ಲಿ ಓರ್ವ ಸಾವು: ನದಿಗೆ ಬಿದ್ದ ಎರಡು ಕಾರು!
– ಶೃಂಗೇರಿ- ಮಂಗಳೂರು ಸಂಪರ್ಕಿಸುವ ಹೈವೇ ಕುಸಿತ
NAMMUR EXPRESS NEWS
ಬೆಂಗಳೂರು: ಮಹಾ ಮಳೆಗೆ ನಾಲ್ವರು ಬಲಿಯಾಗಿದೆ. ಇನ್ನು ಹಲವರು ಮೃತಪಟ್ಟ ಘಟನೆ ನಡೆದಿದೆ. ಕೆರೆಯಲ್ಲಿ ಮೀನು ಹಿಡಿಯಲು ತೆರಳಿದ್ದ ಯುವಕರಿಬ್ಬರ ಸಾವು ತುಮಕೂರಲ್ಲಿ ನಡೆದಿದೆ. ಕರಾವಳಿಯಲ್ಲಿ ನೋಡ ನೋಡುತ್ತಾ ಜಲಪಾತದಲ್ಲಿ ಕೊಚ್ಚಿ ಹೋದ ಘಟನೆ ನಡೆದಿದೆ. ಇನ್ನು ಹಾಸನದಲ್ಲಿ ಓರ್ವ ಬಸ್ ಮರಕ್ಕೆ ಡಿಕ್ಕಿ ಹೊಡೆದು ಸಾವನ್ನು ಕಂಡಿದ್ದಾನೆ. ಚಿಕ್ಕಮಗಳೂರಲ್ಲಿ ಅಪಘಾತದಲ್ಲಿ ಎರಡು ಕಾರು ಹಾನಿಗೀಡಾಗಿವೆ.
ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಕಡಬದ ಗ್ರಾಮದ ಕೆರೆಯಲ್ಲಿ ಮೀನು ಹಿಡಿಯಲು ಹೋದ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಸಾವನ್ನಪ್ಪಿದ ದುರ್ದೈವಿ ಯುವಕರನ್ನು ಹರೀಶ್(31) ಯೋಗೀಶ್ (36) ಎಂದು ಗುರುತಿಸಲಾಗಿದೆ. ಇವರು ಗುಬ್ಬಿ ತಾಲ್ಲೂಕಿನ ಆಡುಗೊಂಡನಹಳ್ಳಿ ಗ್ರಾಮದ ನಿವಾಸಿಗಳಾಗಿದ್ದಾರೆ.
ಗ್ರಾಮದ ಸುತ್ತಮುತ್ತ ಉತ್ತಮ ಮಳೆಯಾಗುತ್ತಿದ್ದ ಹಿನ್ನೆಲೆಯಲ್ಲಿ ಗ್ರಾಮದ ಕೆರೆಗೂ ಕೂಡ ನೀರು ಹರಿದು ಬರುತ್ತಿದೆ. ಕೆರೆಗೆ ನೀರು ಬಂದ ಪರಿಣಾಮ ತಮ್ಮ ಸ್ನೇಹಿತರೊಂದಿಗೆ ಈ ಯುವಕರು ಕೆರೆಯಲ್ಲಿ ಮೀನು ಹಿಡಿಯಲು ತೆರಳಿದ್ದರು. ಇಬ್ಬರು ಯುವಕರು ಮೀನು ಹಿಡಿಯುತ್ತಿದ್ದವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದಿದ್ದಾರೆ. ಸುತ್ತಮುತ್ತಲಿದ್ದ ಯುವಕರು ಇವರನ್ನು ಪಾರು ಮಾಡಲು ಯತ್ನಿಸಿದರೂ ಸಾಧ್ಯವಾಗಿಲ್ಲ. ನಾಪತ್ತೆಯಾದ ಇಬ್ಬರು ಯುವಕರಿಗಾಗಿ ಕೆರೆಯಲ್ಲಿ ಶೋಧ ಕಾರ್ಯ ನಡೆದಿದೆ.
ಶೃಂಗೇರಿಯಿಂದ ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 169ರ ಕಾಮಗಾರಿ ನಡೆಯುತ್ತಿದ್ದು ಈಗಾಗಲೇ ಒಂದಷ್ಟು ಕೆಲಸ ಪೂರ್ಣಗೊಂಡಿದೆ. ಶೃಂಗೇರಿ ಪಟ್ಟಣದಿಂದ ಒಂದು ಕಿಲೋಮೀಟರ್ ದೂರದಲ್ಲಿರುವ ಆನೆಗುಂದ ಅಗ್ರಹಾರದ ಸಮೀಪದ ರಸ್ತೆಯಲ್ಲಿ ಕೆಲವು ದಿನಗಳಿಂದ ಸುರಿದ ಭಾರೀ ಮಳೆಯಿಂದಾಗಿ ಬಿರುಕು ಕಾಣಿಸಿಕೊಂಡಿದೆ.
ಭಾನುವಾರ ರಾತ್ರಿ ಈ ಬಿರುಕು ಸಂಭವಿಸಿರುವ ಸಾಧ್ಯತೆ ಇದ್ದು, ಸೋಮವಾರ ಬೆಳಗ್ಗೆ ಅಧಿಕಾರಿಗಳ ಗಮನಕ್ಕೆ ತರಲಾಗಿದೆ.ಈ ಹಿಂದೆ ಶೃಂಗೇರಿ – ಆಗುಂಬೆ ರಸ್ತೆಯಲ್ಲಿ ಇದೇ ತರಹ ಬಿರುಕು ಕಾಣಿಸಿಕೊಂಡು ನಂತರ ರಸ್ತೆ ಕುಸಿದು ಅನಾಹುತ ಸಂಭವಿಸಿತ್ತು.
ಜಲಪಾತಕ್ಕೆ ಬಿದ್ದು ಯುವಕ ಸಾವು!
ಯುವಕನೊಬ್ಬ ಜಲಪಾತದ ನೀರಿಗೆ ಕಾಲುಜಾರಿ ಬಿದ್ದು ನೀರುಪಾಲಾದ ಘಟನೆ ಬೈಂದೂರು ತಾಲೂಕು ಕೊಲ್ಲೂರು ಬಳಿಯಿರುವ ಅರಶಿನಗುಂಡಿ ಜಲಪಾತದಲ್ಲಿ ನಡೆದಿದೆ. ಭದ್ರಾವತಿ ಮೂಲದ ಶರತ್ ಕುಮಾರ್ (23) ಮೃತಪಟ್ಟ ಯುವಕ. ಈ ಯುವಕ ಬೀಳುತ್ತಿರುವ ದೃಶ್ಯ ಮತ್ತೋರ್ವ ಯುವಕನ ಮೊಬೈಲ್ ನಲ್ಲಿ ಸೆರೆಯಾಗಿದೆ. ಕೊಲ್ಲೂರಿಗೆ ಕಾರಿನಲ್ಲಿ ಬಂದಿದ್ದ ಯುವಕ, ಜಲಪಾತ ವೀಕ್ಷಣೆಗೆಂದು ತೆರಳಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಬಂಡೆಕಲ್ಲೊಂದರ ಮೇಲೆ ಯುವಕ ನಿಂತಿದ್ದಾಗ ಅಕಸ್ಮಾತ್ತಾಗಿ ಕಾಲುಜಾರಿ ಬಿದ್ದಿದ್ದಾನೆ. ಯುವಕನ ಮೃತದೇಹದ ಪತ್ತೆಗೆ ಅಗ್ನಿಶಾಮಕ ದಳ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಹೇಮಾವತಿ ನದಿಗೆ ಬಿದ್ದ ಕಾರುಗಳು!
ಮಲೆನಾಡಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು ಪರಿಣಾಮ ಆಘಾತಗಳ ಸಂಖ್ಯೆಯೂ ಹೆಚ್ಚಾಗತೊಡಗಿದ್ದು ಮೂಡಿಗೆರೆ ತಾಲೂಕಿನ ಬಣಕಲ್ ಬಳಿ ಒಂದೇ ಸ್ಥಳದಲ್ಲಿ ಎರಡು ವಾಹನಗಳು ಅಪಘಾತಗೊಂಡ ಘಟನೆ ನಡೆದಿದೆ.
ಬಣಕಲ್ ಸಮೀಪ ಹೇಮಾವತಿ ನದಿಗೆ ಮಾರುತಿ ಎಸ್ಟೀಮ್ ಕಾರು ಹಾಗೂ ಇನೋವಾ ಕಾರು ಪಲ್ಟಿಯಾಗಿ ಎರಡೂ ಕಾರಿನಲ್ಲಿದ್ದ ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿಕ್ಕಮಗಳೂರು ತಾಲೂಕಿನಾದ್ಯಂತ ಭಾರಿ ಮಳೆಯಾಗುತ್ತಿದ್ದು ಈ ವೇಳೆ ಪುತ್ತೂರಿನಿಂದ ಚಿಕ್ಕಮಗಳೂರಿಗೆ ಹೋಗುತ್ತಿದ್ದ ಇನೋವಾ ಕಾರು ಬಣಕಲ್ ಹೆದ್ದಾರಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಅವಘಡ ಸಂಭವಿಸಿದೆ ಎನ್ನಲಾಗಿದೆ.
ಇದನ್ನೂ ಓದಿ : ತೀರ್ಥಹಳ್ಳಿ ಹುಡುಗನ ಅನುಮಾನಾಸ್ಪದ ಸಾವು!
HOW TO APPLY : NEET-UG COUNSELLING 2023