ಕರಾವಳಿಯಲ್ಲಿ ಮಳೆಗೆ ಬದುಕು ತತ್ತರ!
– ಉಡುಪಿ ಜಿಲ್ಲೆಯಲ್ಲಿ ರಜೆ ಘೋಷಣೆ
– ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ಥಿತಿ ನೋಡಿ ರಜೆ ಘೋಷಣೆ!
– ಎಲ್ಲಾ ತಾಲೂಕು ತಹಸೀಲ್ದಾರ್ಗಳಿಗೆ ಡಿಸಿ ಆದೇಶ
– ಜು.28ರವರೆಗೆ ಕರಾವಳಿ, ಮಲೆನಾಡಲ್ಲಿ ಭಾರೀ ಮಳೆ
– ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಾನಿ ಹೆಚ್ಚು!
NAMMUR EXPRESS NEWS
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಪುತ್ತೂರು, ಬಂಟ್ವಾಳ ಸುಳ್ಯ ತಾಲೂಕುಗಳಲ್ಲಿ ತಹಸೀಲ್ದಾರ್ ಹಂತದಲ್ಲಿ ಮಳೆಯ ಪರಿಸ್ಥಿತಿಯನ್ನು ಅವಲೋಕಿಸಿ ಆಯ್ದ ಶಾಲೆಗಳಿಗೆ ಸ್ಥಳೀಯವಾಗಿ ರಜೆ ಘೋಷಿಸಲು ಆಯಾ ತಾಲೂಕಿನ ತಹಸೀಲ್ದಾರ್ ಗಳಿಗೆ ಜಿಲ್ಲಾಧಿಕಾರಿಯವರು ನಿರ್ದೇಶನ ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಿಸುವ ಅನಿವಾರ್ಯತೆ ಕಂಡು ಬಂದಿರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.
ಜು.28ರವರೆಗೆ ಕರಾವಳಿ, ಮಲೆನಾಡಲ್ಲಿ ಭಾರೀ ಮಳೆ
ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಜುಲೈ 28ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಾನಿ ಹೆಚ್ಚು!
ರಾಜ್ಯಾದ್ಯಂತ ವರುಣಾರ್ಭಟ ಮುಂದುವರಿದಿದ್ದು ಉಕ್ಕಿದ ನದಿಗಳು ಪ್ರವಾಹ ಆತಂಕ ಸೃಷ್ಟಿ ಮಾಡಿವೆ. 16 ಜಿಲ್ಲೆಗಳಲ್ಲಿ ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಮಲೆನಾಡು, ಕರಾವಳಿಯ ದ.ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಬೆಳಗಾವಿ ಭಾಗದಲ್ಲಿ ಸತತವಾಗಿ ಮಳೆ ಸುರಿಯುತ್ತಿದೆ.
ಕರಾವಳಿ, ಮಲೆನಾಡು, ದಕ್ಷಿಣ ಮತ್ತು ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಉಡುಪಿ ಜಿಲ್ಲೆಯ ಎಲ್ಲಾ ಶಾಲೆ, ಪಿಯು ಕಾಲೇಜು, ಉತ್ತರ ಕನ್ನಡ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ದಕ್ಷಿಣ ಕನ್ನಡದ ಕುಮಾರಧಾರ ನದಿ ಪ್ರವಾಹ, ಸುಬ್ರಹ್ಮಣ್ಯ ಮಂಜೇಶ್ವರ ರಾಜ್ಯ ಹೆದ್ದಾರಿ ಸಂಪರ್ಕ ಕಡಿತ, ಬಿಸಿಲೆ -ಕುಕ್ಕೆ ಸುಬ್ರಹ್ಮಣ್ಯ ರಸ್ತೆ ಸಂಚಾರವೂ ಕಡಿತ, ಕುಕ್ಕೆಯಲ್ಲಿ ಮುಳುಗಿದ ಸ್ನಾನಘಟ್ಟ, ಧರ್ಮಸ್ಥಳದಲ್ಲೂ ಅಪಾಯದ ಮಟ್ಟದಲ್ಲಿ ನೇತ್ರಾವತಿ ನದಿ ಹರಿಯುತ್ತಿದೆ. ದ.ಕ. ಜಿಲ್ಲೆಯಲ್ಲಿ 300ಕ್ಕೂ ಅಧಿಕ ವಿದ್ಯುತ್ ಕಂಬಗಳು ಧರೆಗೆ ಉರುಳಿವೆ.
ಇನ್ನು ಪುತ್ತೂರು, ಸುಳ್ಯ, ಬೆಳ್ತಂಗಡಿ, ಕಡಬ ಸೇರಿ ಅನೇಕ ಕಡೆ ಮನೆ, ಸೇತುವೆ ಮುಳುಗಡೆ ಆಗಿದೆ.
ಉಡುಪಿ ಜಿಲ್ಲೆಯಲ್ಲಿ 41 ಮನೆಗಳಿಗೆ ಹಾನಿ
ಉಡುಪಿ ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಗಾಳಿ ಸಹಿತ ಭಾರೀ ಮ ಳೆಯಾಗುತ್ತಿದ್ದು, ಜಿಲ್ಲೆಯ ಪ್ರಮುಖ ನದಿಗಳೆಲ್ಲ ಮೈದುಂಬಿ ಹರಿಯುತ್ತಿದೆ. ಕಡಲಿನಲ್ಲಿ ಅಲೆಗಳ ಅಬ್ಬರವೂ ಜೋರಾಗಿದೆ. ಕೋಡಿ, ಮರವಂತೆಯಲ್ಲಿ ಕಡಲೊರೆತ ಮುಂದುವರಿದಿದೆ. ಮಲ್ಪೆ, ಪಡುಕರೆ, ಪಡುಬಿದ್ರಿ, ಕಾಪು, ಕೋಡಿ ಸೀ ವಾಕ್ನಲ್ಲಿ ರಕ್ತಸ ಅಲೆಗಳ ಅರ್ಭಟ ಮುಂದುವರಿದಿದ್ದು, ಬೃಹತ್ ಅಲೆಗಳು ದಡಕ್ಕೆ ಅಪ್ಪಳಿಸುತ್ತಿದೆ. ಹಲವೆಡೆ ಕೃಷಿ ಭೂಮಿ ಸಹಿತ ತಗ್ಗು ಪ್ರದೇಶಗಳು ಜಲಾವೃತಗೊಂಡಿದೆ. ಭಾರೀ ಗಾಳಿ ಮಳೆಯಿಂದಾಗಿ ಜಿಲ್ಲೆಯಾದ್ಯಂತ ಒಟ್ಟು 41 ಮನೆಗಳಿಗೆ ಹಾನಿಯಾಗಿದೆ. 230 ಕ್ಕೂ ಅಧಿಕ ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದು, 24 ಟ್ರಾನ್ಸ್ಫಾರ್ಮ್ರಗಳಿಗೆ ಹಾನಿಯಾಗಿದೆ. ಬೃಹತ್ ಗಾತ್ರದ ಮರಗಳು ಬುಡ ಸಹಿತ ಧರೆಗುರುಳಿವೆ. ಅಲ್ಲಲ್ಲಿ ರಕ್ಕೆ ವಿದ್ಯುತ್ ವ್ಯತ್ಯಯವಾಗಿದೆ.
ಕುಂದಾಪುರ, ಬೈಂದೂರು, ಹೆಬ್ರಿ, ಕಾರ್ಕಳ, ಶಂಕರನಾರಾಯಣ, ಈ ಕಾಪು ಭಾಗದಲ್ಲಿ ಅಪಾರ ಪ್ರಮಾಣದಲ್ಲಿ ಮೆಸ್ಕಾಂ ಇಲಾಖೆಗೆ ಹಾನಿಯಾಗಿದ್ದು, ಗ್ರಾಮಾಂತರ ಪ್ರದೇಶದಲ್ಲಿ ವಿದ್ಯುತ್ ಸಮಸ್ಯೆ ಜೋರಿದೆ.
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸಿಲುಕಿದ ಜನರನ್ನು ಬೋಟ್ ಮೂಲಕ ಮನೆಗೆ ಕಳಿಸಲಾಯಿತು.
ಕಾರ್ಯ ನಿಮಿತ್ತ ಸುಬ್ರಹ್ಮಣ್ಯ ಭಾಗಕ್ಕೆ ಬಂದಿದ್ದ 8 ಮಂದಿಯನ್ನು ಜಲಾವೃತಗೊಂಡ ರಾಜ್ಯ ಹೆದ್ದಾರಿಯಲ್ಲಿ ಬೋಟ್ ಮೂಲಕ ಎಸ್ಡಿಆರ್ಎಫ್ ತಂಡ ಸುರಕ್ಷಿತವಾಗಿ ದಾಟಿಸಿ ಮನೆಗೆ ಸೇರಿಸಿದ್ದಾರೆ.
ಭಾರೀ ಮಳೆಗೆ ತುಂಬಿ ಹರಿಯುತ್ತಿರುವ ಸುಬ್ರ ಹ್ಮಣ್ಯದ ಕುಮಾರಧಾರ ನದಿಯ ನೆರೆ ನೀರು ಸಮೀ ಪದ ಸುಬ್ರಹ್ಮಣ್ಯ- ಮಂಜೇಶ್ವರ ರಾಜ್ಯ ಹೆದ್ದಾರಿಗೆ ನುಗ್ಗಿದ್ದು ಸಂಚಾರ ಕಡಿತಗೊಂಡಿದೆ.
ಇದನ್ನೂ ಓದಿ : ತೀರ್ಥಹಳ್ಳಿ ಹುಡುಗನ ಅನುಮಾನಾಸ್ಪದ ಸಾವು!
HOW TO APPLY : NEET-UG COUNSELLING 2023