3 ದಿನ ಭಾರೀ ಮಳೆ ಅಲರ್ಟ್!
– ಕರಾವಳಿ, ಮಲೆನಾಡು ಸೇರಿ ರಾಜ್ಯದಲ್ಲಿ ಭಾರೀ ಮಳೆ
– ಶಾಲೆ, ಪಿಯು ಕಾಲೇಜಿಗೆ ರಜೆ: ಹಲವು ಮಂದಿ ಸಾವು
– ನದಿಗಳ ನೀರು ಹೆಚ್ಚಳ: ರಾಜಧಾನಿಯಲ್ಲಿ ಮಳೆ
NAMMUR EXPRESS NEWS
ಬೆಂಗಳೂರು: ರಾಜ್ಯದ ಕರಾವಳಿ ಮತ್ತು ಮಲೆನಾಡಲ್ಲಿ ಭಾರೀ ಮಳೆ ಆಗುತ್ತಿದ್ದು ಅಪಾಯದತ್ತ ಕರುನಾಡು ತಲುಪಿದೆ.
ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಅಬ್ಬರ ಹೆಚ್ಚಾಗಿದೆ. ರಾಜ್ಯದಲ್ಲಿ ಮಳೆ ಕಾರಣ ಈವರೆಗೆ ಸುಮಾರು 15ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಹಾವೇರಿಯಲ್ಲಿ ಸಿದ್ದರಾಮಯ್ಯ ನೆರೆ ವೀಕ್ಷಣೆ ಮಾಡಿದ್ದಾರೆ.
ಮಲೆನಾಡಲ್ಲಿ ಭಾರೀ ಮಳೆ ಅವಾಂತರ!
ಚಿಕ್ಕಮಗಳೂರು ಜಿಲ್ಲೆಯ ಚಂದ್ರದ್ರೋಣ ಪರ್ವತ, ಕೆಮ್ಮಣ್ಣು ಗುಂಡಿ ಭಾಗದಲ್ಲಿ ಹಲವು ಕಡೆ ಗುಡ್ಡ ಕುಸಿದಿದೆ. ಮೂಡಿಗೆರೆಯ ಸಾಲುಮನೆ ಶಿವಣ್ಣ ಎಂಬುವರ ಮನೆ ಕುಸಿದಿದೆ. ಶಿವಮೊಗ್ಗ ಜಿಲ್ಲೆ ಸಾಗರ, ಹೊಸನಗರ, ತೀರ್ಥಹಳ್ಳಿಯಲ್ಲಿ ಭಾರೀ ಮಳೆ ಸುರಿಯುತ್ತಿದೆ. ತುಂಗಾ, ವರದಾ, ಭದ್ರ, ಶರಾವತಿ ನದಿ ಅಪಾಯ ಮಟ್ಟದಲ್ಲಿ ಸುರಿಯುತ್ತಿದೆ.
ಮಧ್ಯ ಕರ್ನಾಟಕದಲ್ಲಿ ಇಬ್ಬರು ಮಕ್ಕಳು ಬಲಿ
ದಾವಣಗೆರೆ, ಹಾವೇರಿಯಲ್ಲಿ ಇಬ್ಬರು ಮಕ್ಕಳು ಸಾವನ್ನು ಕಂಡಿವೆ. ಇನ್ನು ವಿಜಯಪುರ ಶಿವಪುರದಲ್ಲೂ ಓರ್ವ ಅಜ್ಜಿ ಮೃತಪಟ್ಟಿದ್ದಾಳೆ. ರಾಜಧಾನಿ ಬೆಂಗಳೂರು ಸೇರಿ ರಾಜ್ಯದಲ್ಲಿ ಮುಂದಿನ 3 ದಿನ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಒಂದೆರಡು ಕಡೆ ಭಾರಿ ಮಳೆ ಸಾಧ್ಯತೆ ಇದ್ದು, ಈ ಹಿನ್ನೆಲೆ ಮೂರು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅತ್ಯಂತ ಬಾರೀ ಮಳೆ ಸಾಧ್ಯತೆ ಇದ್ದು, ಕರಾವಳಿಗೆ ಮಂಗಳವಾರ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬುಧವಾರ ಮತ್ತು ಗುರುವಾರ ಎಲ್ಲಾ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಶಿವಮೊಗ್ಗ,ಚಿಕ್ಕಮಗಳೂರು, ಕೊಡಗು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಹಾಸನ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬುಧವಾರದಿಂದ 4 ದಿನಗಳ ಕಾಲ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಮುಂದಿನ 5 ದಿನಗಳ ಕಾಲ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಮೀನುಗಾರರಿಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ರಾಜಧಾನಿಯಲ್ಲೂ ಭಾರೀ ಮಳೆ!
ರಾಜಧಾನಿ ಬೆಂಗಳೂರಲ್ಲೂ ಕಳೆದ 3-4 ದಿನಗಳಿಂದ ಭಾರೀ ಮಳೆ ಆಗುತ್ತಿದೆ. ಹೀಗೆ ಮಳೆ ಮುಂದುವರಿದಲ್ಲಿ ಭಾರೀ ಅನಾಹುತ ಸಂಭವಿಸಲಿದೆ. ಮಳೆ ಹಿನ್ನೆಲೆ ಭಾರೀ ಟ್ರಾಫಿಕ್ ಜಾಮ್ ಕಂಡು ಬರುತ್ತಿದೆ.
ಇದನ್ನೂ ಓದಿ : ತೀರ್ಥಹಳ್ಳಿ ಹುಡುಗನ ಅನುಮಾನಾಸ್ಪದ ಸಾವು!
HOW TO APPLY : NEET-UG COUNSELLING 2023