ಮಲಗಿದ್ದ ಮಗು ಬಾಯಿಗೆ ಬಿದ್ದ ಹಲ್ಲಿ: ಮಗು ಸಾವು!
– ಮಕ್ಕಳ ಬಗ್ಗೆ ಹುಷಾರು: ಈ ಘಟನೆ ಏನು..?
– ಮಗು ಸಾವಿಗೆ ಹಲ್ಲಿ ವಿಷ ಕಾರಣನಾ…?
NAMMUR EXPRESS NEWS
ಮಲಗಿದ್ದ ಪುಟ್ಟ ಮಗು ಬಾಯಿಗೆ ಹಲ್ಲಿ ಬಿದ್ದು ಮಗು ಮೃತಪಟ್ಟಿರುವ ದಾರುಣ ಘಟನೆ ಛತ್ತೀಸ್ಗಢದ ಕೋಬ್ರಾದಲ್ಲಿ ನಡೆದಿದೆ. ಮಗುವಿನ ಬಾಯಿಗೆ ಹಲ್ಲಿ ನುಗ್ಗಿ 3 ವರ್ಷದ ಮಗು ಮೃತಪಟ್ಟಿದೆ. ಬಾಯಿ ಒಳಗೆ ಮಗು ಬಿದ್ದ ಪರಿಣಾಮ ಉಸಿರುಗಟ್ಟಿ ಮಗು ಸಾವನ್ನಪ್ಪಿದೆ. ರಾಜ್ಕುಮಾರ್ ಚಂಡೆ ಮೂರನೇ ಮಗ ಜಗದೀಶ್ ಮೃತ ದುರ್ದೈವಿ. ಘಟನೆಯ ವೇಳೆ ಎರಡೂವರೆ ವರ್ಷದ ಜಗದೀಶ್ ಮಲಗಿದ್ದ ಎನ್ನಲಾಗಿದ್ದು, ಈ ವೇಳೆ ಆತನ ತಾಯಿ ಮನೆಗೆಲಸ ಮಾಡುತ್ತಿದ್ದಳು. ಸ್ವಲ್ಪ ಸಮಯದ ನಂತರ ಮಲಗಿದ್ದ ಜಗದೀಶ ಮಗನನ್ನು ನೋಡಿದಾಗ ಆತ ನಿಶ್ಚಲವಾಗಿ ಬಿದ್ದಿದ್ದ. ಕೂಡಲೇ ಅನುಮಾನಗೊಂಡ ತಾಯಿಯು ಬಾಲಕನ ಹತ್ತಿರ ಬಂದಾಗ ಆತನ ಬಾಯಲ್ಲಿ ಹಲ್ಲಿ ಸತ್ತು ಬಿದ್ದಿರುವುದನ್ನು ಕಂಡು ಬಂದಿದೆ. ಇದರಿಂದ ಗಾಬರಿಗೊಂಡ ಮಹಿಳೆ ಜೋರಾಗಿ ಕೂಗಿಕೊಂಡಿದ್ದು, ಸ್ಥಳೀಯರು ಬಂದು ನೋಡಿದಾಗ ಮಗು ಅದಾಗಲೇ ಮೃತಪಟ್ಟಿರುವುದು ಕಂಡು ಬಂದಿದೆ.
ಬಾಯಿಯೊಳಗೆ ಹಲ್ಲಿ ಬಿದ್ದು ಉಸಿರುಗಟ್ಟಿರುವ ಶಂಕೆ, ಘಟನೆ ಕುರಿತು ಮಾಹಿತಿ ಪಡೆದ ತಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಹಲ್ಲಿಯ ವಿಷದಿಂದ ಬಾಲಕ ಸಾವನ್ನಪ್ಪಿರುವ ಸಾಧ್ಯತೆ ಇಲ್ಲ ಎಂದು ತಜ್ಞರು ಸ್ಪಷ್ಟಪಡಿಸಿದ್ದಾರೆ. ಹಲ್ಲಿ ಉಸಿರಾಟಕ್ಕೆ ಅಡ್ಡಿಯಾಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿರಬಹುದು ಎಂದು ಹೇಳಲಾಗುತ್ತಿದೆ. ಮರಣೋತ್ತರ ಪರೀಕ್ಷೆಯ ನಂತರ ಸತ್ಯ ಏನೆಂಬುದು ತಿಳಿದು ಬರಬೇಕಿದೆ.
ಇದನ್ನೂ ಓದಿ : ಖಾಸಗಿ ಚಾನಲ್ ವಿರುದ್ದ ಕಿಮ್ಮನೆ 5 ಕೋಟಿ ಕೇಸ್!?
HOW TO APPLY : NEET-UG COUNSELLING 2023