ಪುತ್ತಿಲ ಪರಿವಾರದ ವಿರುದ್ಧ ಕೇಸ್!
– ಅನುಮತಿ ರಹಿತ ವಿಜಯೋತ್ಸವ ಆಚರಣೆ
– ಪೊದೆಯಲ್ಲಿ ಅಪರಿಚಿತ ಮೃತದೇಹ ಪತ್ತೆ
– ಸಲಿಂಗಕಾಮಿ ಉಪನ್ಯಾಸಕನಿಗೆ ಜೀವಾವಧಿ ಶಿಕ್ಷೆ
NAMMUR EXPRESS NEWS
ಪುತ್ತೂರು: ಪುತ್ತೂರು ನಿಡ್ನಳ್ಳಿ ಮತ್ತು ಆರ್ಯಾಪು ಪಂಚಾಯತ್ ಗಳಲ್ಲಿ ಜುಲೈ 22ರಂದು ನಡೆದ ಉಪ ಚುನಾವಣೆಯ ಫಲಿತಾಂಶ ಜುಲೈ 26ರಂದು ಹೊರ ಬಿದ್ದಿತ್ತು.ಈ ನಿಟ್ಟಿನಲ್ಲಿ ಆರ್ಯಾಪು ಪಂಚಾಯತ್ ಚುನಾವಣೆಯಲ್ಲಿ ಪುತ್ತಿಲ ಪರಿವಾರದ ಸದಸ್ಯ ಸುಬ್ರಮಣ್ಯ ಬಲ್ಯಾಯ ವಿಜಯ ಸಾದಿಸಿದ್ದರು. ಈ ನಿಟ್ಟಿನಲ್ಲಿ ಪುತ್ತೂರು ಮಿನಿ ವಿಧಾನಸೌಧದಿಂದ ಪುತ್ತಿಲ ಪಾರಿವಾರದ ಕಚೇರಿ ವರೆಗೆ ಪುತ್ತೂರಿನ ಮುಖ್ಯ ರಸ್ತೆಯಲ್ಲಿ ಅನುಮತಿ ಪಡೆಯದೇ ವಿಜಯೋತ್ಸವ ನಡೆಸಿದ್ದು ಈ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪುತ್ತಿಲ ಪರಿವಾರದ ವಿರುದ್ಧ ಸಾರ್ವಜನಿಕ ಶಾಂತಿಭಂಗ ಕೇಸು ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಪೊದೆಯಲ್ಲಿ ಅಪರಿಚಿತ ಮೃತದೇಹ ಪತ್ತೆ
ಪುತ್ತೂರು ತಾಲೂಕು ಪಾಂಗ್ಲಾಯಿ ಬಳಿ ಪೊದೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮೃತದೇಹ ಪತ್ತೆಸ್ಥಿತಿಯಲ್ಲಿ ಪತ್ತೆಯಾದ ಘಟನೆ ಪಾಂಗ್ಲಾಯಿಯಲ್ಲಿ ನಡೆದಿದೆ. ಸ್ಥಳೀಯರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಸ್ಥಳೀಯರು ಹಾಗೂ ಆದರ್ಶ ಆಸ್ಪತ್ರೆಯ ಆಂಬ್ಯುಲೆನ್ಸ್ ಚಾಲಕ ದಯಾನಂದ್ ರವರ ಸಹಕಾರದಿಂದ ಮೃತದೇಹವನ್ನು ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
23 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ
ಸುಲಿಗೆ ಪ್ರಕರಣದಲ್ಲಿ 23 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿಯನ್ನು ಉಳ್ಳಾಲದ ಬಶೀರ್(51) ಎಂದು ಗುರುತಿಸಲಾಗಿದೆ. ಈತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ತಿಳಿದು ಬಂದಿದೆ. 2000 .ಡಿಸೆಂಬರ್ 17ರಂದು ರಾತ್ರಿ ಮಹಿಳೆಯೊಬ್ಬರನ್ನು ಅಡ್ಡಗಟ್ಟಿ ಆರೋಪಿಗಳು ಚೂರಿ ತೋರಿಸಿ ಕುತ್ತಿಗೆಯಲ್ಲಿದ್ದ ಕರಿಮಣಿ ಸರವನ್ನು ಕಸಿದು ಸುಲಿಗೆ ಮಾಡಿ ಪರಾರಿಯಾಗಿದ್ದರೆನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಉರ್ವಾ ಪೊಲೀಸ್ ಠಾಣೆಯಲ್ಲಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಸಲಿಂಗಕಾಮಿ ಉಪನ್ಯಾಸಕನಿಗೆ ಜೀವಾವಧಿ ಶಿಕ್ಷೆ
ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿಯೊಂದಿಗೆ ಅನೈಸರ್ಗಿಕ ರೀತಿಯಲ್ಲಿ ಲೈಂಗಿಕ ಕ್ರಿಯೆ ನಡೆಸಿ ದೌರ್ಜನ್ಯ ಎಸಗಿದ ಅಪರಾಧಿ ಉಪನ್ಯಾಸಕನಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್ ಟಿಎಸ್ಸಿ-1) ಜೀವಾವಧಿ ಶಿಕ್ಷೆ ವಿಧಿಸಿದೆ.
ಶಿಕ್ಷೆಗೊಳಗಾದ ವ್ಯಕ್ತಿಯನ್ನು ಕುಳಾಯಿಯ ಪೃಥ್ವಿರಾಜ್ (33) ಎನ್ನಲಾಗಿದೆ. ಈತ ಎಸೆಸ್ಸೆಲ್ಸಿ ವಿದ್ಯಾರ್ಥಿಯೋರ್ವನಿಗೆ 2014ರ ಆ.1ರಿಂದ 2016ರ ಸೆ. 2ರ ವರೆಗೆ ಅನೈಸರ್ಗಿಕ ರೀತಿಯ ಲೈಂಗಿಕ ಕ್ರಿಯೆ ಮೂಲಕ ದೌರ್ಜನ್ಯ ಎಸಗಿದ್ದ. ಈ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಭಟ್ಕಳದಲ್ಲಿ ದೋಣಿ ದುರಂತ: ಇಬ್ಬರು ಮೀನುಗಾರರ ರಕ್ಷಣೆ
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಬಂದರಿನಿಂದ ಮೀನುಗಾರಿಕಾ ತೆರಳಿದ ದೋಣಿಗಳಲ್ಲಿ ಎರಡು ದೋಣಿ ಗಾಳಿ ಮತ್ತು ಅಲೆಗೆ ದೋಣಿ ಮುಳುಗಿ ಅದರಲ್ಲಿದ್ದ ಇಬ್ಬರನ್ನೂ ರಕ್ಷಿಸಿದ ಘಟನೆ ಬೆಳಕಿಗೆ ಬಂದಿದೆ. ಭಟ್ಕಳ ಬಂದರಿನ ಬೆಳಕೆಯಿಂದ ಮೀನುಗಾರಿಕಾ ತೆರಳಿದ ದೋಣಿಗಳು ಮೀನುಗಾರಿಕೆ ಮಾಡುವಾಗ ರಭಸವಾಗಿ ಬಿಸಿದ ಗಾಳಿ ಮತ್ತು ಅಲೆಗೆ ದೋಣಿಯಲ್ಲಿ ಹುಟ್ಟು (ನೀರು ತೆಳ್ಳುವ ಸಾಧನ ) ಸಮುದ್ರ ಪಾಲಾದ ಎರಡು ದೋಣಿಯಲ್ಲಿ ಇಬ್ಬರು ಯುವಕರು ದೋಣಿಯನ್ನು ಹಿಡಿದುಕೊಂಡು ಅಲ್ಲಿಗೆ ಬಂದಿದ್ದರು.
ಇದನ್ನೂ ಓದಿ : ರಾಜ್ಯದಲ್ಲಿ ಮತ್ತೆ ಸುದ್ದಿ ಮಾಡಿದ ತೀರ್ಥಹಳ್ಳಿ ಪ್ರತೀಕ್ ಗೌಡ ಕೇಸ್!
HOW TO APPLY : NEET-UG COUNSELLING 2023