ಶಿವಮೊಗ್ಗದಿಂದ ಗೋವಾ, ಹೈದ್ರಾಬಾದ್ , ತಿರುಪತಿಗೂ ವಿಮಾನ!
– ವಿಮಾನ ಸೇವೆಗೆ ಶೀಘ್ರ 3 ಸಂಸ್ಥೆಗಳಿಗೆ ಪರ್ಮಿಟ್
– ನೂತನ ವಿಮಾನ ಸೇವೆಗೆ ಬುಕ್ಕಿಂಗ್: ಆ.31ರಿಂದ ಹಾರಾಟ
NAMMUR EXPRESS NEWS
ಬೆಂಗಳೂರು: ( Shivamogga Airport ) ಶಿವಮೊಗ್ಗದಿಂದ ತಿರುಪತಿ, ಗೋವಾ ಹಾಗೂ ಹೈದರಾಬಾದ್ಗೆ ವಿಮಾನಯಾನ ಸೇವೆ ಶೀಘ್ರ ಆರಂಭವಾಗಲಿದೆ. ಈ ಸಂಬಂಧ ಮೂರು ಸಂಸ್ಥೆಗಳಿಗೆ ಅನುಮತಿ ದೊರೆತಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಆಗಸ್ಟ್ 31ರಂದು ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಮೊದಲ ವಿಮಾನ ಹಾರಾಟ ನಡೆಸಲಿದೆ. ಇಂಡಿಗೊ ಏರ್ಲೈನ್ಸ್ ಬುಕ್ಕಿಂಗ್ ಸೇವೆ ಆರಂಭಿಸಿದೆ. ಮೊದಲು ಹಾರಲಿರುವ ವಿಮಾನದಲ್ಲಿ ಪ್ರಯಾಣಿಸುವ ಅವಕಾಶಕ್ಕೆ ಸಾಕಷ್ಟು ಬೇಡಿಕೆ ಬಂದಿದೆ. ಉಡಾನ್ ಯೋಜನೆಯಡಿ ಅನುಮತಿ ಪಡೆದಿರುವ ಸ್ಪೈಸ್ ಜೆಟ್, ಸ್ಟಾರ್ ಏರ್ಲೈನ್ಸ್ ಹಾಗೂ ಅಲಯನ್ಸ್ ಸಂಸ್ಥೆಗಳು ವಿಮಾನ ಸಂಚಾರಕ್ಕೆ ಸಿದ್ಧತೆ ನಡೆಸಿವ ಎಂದು ತಿಳಿಸಿದ್ದಾರೆ. ಈ ಸಂಬಂಧ ನಾಗರಿಕ ವಿಮಾನಯಾನ ನಿರ್ದೇಶನಾಲಯದ ಅನುಮತಿ ದೊರೆತ ನಂತರ ಸೇವೆ ಆರಂಭಿಸಲಿವೆ ಎಂದು ಮಾಹಿತಿ ನೀಡಿದರು.
ಮಲೆನಾಡು ಪ್ರವಾಸೋದ್ಯಮ ಚೇತರಿಕೆ
ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ ಸೇರಿದಂತೆ ಮಲೆನಾಡಿನ ಪ್ರವಾಸೋದ್ಯಮಕ್ಕೆ ಈ ನೂತನ ವಿಮಾನ ನಿಲ್ದಾಣ ಪೂರಕ ಆಗಲಿದೆ ಎನ್ನಲಾಗಿದೆ.
ಇದನ್ನೂ ಓದಿ : ರಾಜ್ಯದಲ್ಲಿ ಮತ್ತೆ ಸುದ್ದಿ ಮಾಡಿದ ತೀರ್ಥಹಳ್ಳಿ ಪ್ರತೀಕ್ ಗೌಡ ಕೇಸ್!
HOW TO APPLY : NEET-UG COUNSELLING 2023