ವಿಚ್ಛೇದನ ಪ್ರಕರಣ ವರ್ಷದೊಳಗೆ ಇತ್ಯರ್ಥ!
– ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ
– ಇನ್ನು ಡೈವೋರ್ಸ್ ಬೇಗ ಸಿಗುತ್ತೆ..!
NAMMUR EXPRESS NEWS
ಬೆಂಗಳೂರು : ವಿವಾಹ ವಿಚ್ಛೇದನ ಸೇರಿ ವೈವಾಹಿಕ ಪ್ರಕರಣಗಳ ವಿಲೇವಾರಿಯಲ್ಲಿ ವಿಳಂಬವಾಗುತ್ತಿರುವ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಹೈಕೋರ್ಟ್, ವೈವಾಹಿಕ ಪ್ರಕರಣಗಳನ್ನು ಗರಿಷ್ಠ ಒಂದು ವರ್ಷದೊಳಗೆ ಇತ್ಯರ್ಥಪಡಿಸಬೇಕು ಎಂದು ಕೌಟುಂಬಿಕ ನ್ಯಾಯಾಲಯಗಳಿಗೆ ಆದೇಶಿಸಿದೆ. ತನ್ನ ವಿವಾಹ ವಿಚ್ಛೇದನ ಅರ್ಜಿ ತ್ವರಿತಗತಿಯಲ್ಲಿಇತ್ಯರ್ಥಪಡಿಸುವಂತೆ ಕೌಟುಂಬಿಕ ನ್ಯಾಯಾಲಯಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಎನ್. ರಾಜೀವ್ ಸಲ್ಲಿಸಿದ್ದ ಅರ್ಜಿಯನ್ನು ಮಾನ್ಯ ಮಾಡಿರುವ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠ, ಈ ಆದೇಶ ನೀಡಿದೆ. ಎರಡೂ ಕುಟುಂಬ ಮೇಲೆ ಕೆಟ್ಟ ಪರಿಣಾಮ ಪ್ರಕರಣಗಳ ವಿಚಾರಣೆ ವಿಳಂಬ ಎರಡೂ ಕುಟುಂಬಗಳ ಮೇಲೆ ಅತ್ಯಂತ ಕೆಟ್ಟ ಪರಿಣಾಮ ಬೀರುತ್ತದೆ ಎಂದು ಅಭಿಪ್ರಾಯಪಟ್ಟಿರುವ ನ್ಯಾಯಾಲಯ, ‘ಧಿ’ಮನುಷ್ಯ ಜೀವನದ ಅಲ್ಪಾವಧಿಯನ್ನು ಗಮನದಲ್ಲಿಟ್ಟುಕೊಂಡು ವೈವಾಹಿಕ ಪ್ರಕರಣಗಳ ವಿಲೇವಾರಿಯನ್ನು ಸಮರೋಪಾದಿಯಲ್ಲಿ ಕೈಗೊಳ್ಳಬೇಕಿದೆ ಎಂದು ಹೇಳಿದೆ.
ಬದುಕು ತೀರಾ ಚಿಕ್ಕದು ‘ಲೈಫ್ ಈಸ್ ಟೂ ಶಾರ್ಟ್ ಟು ಬಿ ಲಿಟ್ಲ್’ (ಬದುಕು ತೀರಾ ಚಿಕ್ಕದು) ಎಂಬ ಆಂಗ್ಲಇತಿಹಾಸಕಾರರ ಹೇಳಿಕೆ ಉಲ್ಲೇಖಿಸಿರುವ ನ್ಯಾಯಮೂರ್ತಿ, ಮದುವೆಯ ವಿಸರ್ಜನೆ ಅಥವಾ ರದ್ದು ಬಯಸುವ ವೈವಾಹಿಕ ಪ್ರಕರಣಗಳನ್ನು ತ್ವರಿತಗತಿಯಲ್ಲಿಗರಿಷ್ಠ ಒಂದು ವರ್ಷದ ಮಿತಿಯೊಳಗೆ ವಿಲೇವಾರಿ ಮಾಧಿಡುಧಿವ ಎಲ್ಲಾಪ್ರಯತ್ನಗಳನ್ನು ಕೌಟುಂಬಿಕ ಅಥವಾ ವಿಚಾರಣಾ ನ್ಯಾಯಾಲಯಗಳು ಮಾಡಬೇಕು ಎಂದು ಆದೇಶಿಸಿದ್ದಾರೆ.
ತ್ವರಿತ ವಿಲೇವಾರಿ ವೈವಾಹಿಕ ಪ್ರಕರಣಗಳಲ್ಲಿ ತ್ವರಿತ ತೀರ್ಪು ನೀಡಿದಲ್ಲಿಇಬ್ಬರೂ ತಮ್ಮ ಜೀವನ ಪುನರ್ ರೂಪಿಸಿಕೊಳ್ಳಬಹುದು. ವೈವಾಹಿಕ ಪ್ರಕರಣಗಳ ವಿಲೇವಾರಿಯಲ್ಲಿವಿಳಂಬವಾದರೆ ಇಬ್ಬರ ಮೇಲೂ ಕೆಟ್ಟ ಪರಿಣಾಮ ಉಂಟಾಗುತ್ತದೆ. ಆದ್ದರಿಂದ ಏಳು ವರ್ಷಗಳಷ್ಟು ಹಳೆಯದಾದ ರಾಜೀವ್ ಪ್ರಕರಣವನ್ನು ಮೂರು ತಿಂಗಳಲ್ಲಿಇತ್ಯರ್ಥಪಡಿಸಬೇಕು” ಎಂದು ಸಂಬಂಧಿಸಿದ ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶರಿಗೆ ಸೂಚನೆ ನೀಡಿರುವ ಹೈಕೋರ್ಟ್ನ ಏಕಸದಸ್ಯಪೀಠ, ಇಂತಹದ್ದೇ ಪ್ರಕರಣಗಳನ್ನು ಎದುರಿಸುತ್ತಿರುವವರು ತಮ್ಮ ಅರ್ಜಿಗಳ ತ್ವರಿತ ವಿಲೇವಾರಿಗೆ ನಿರ್ದೇಶನ ನೀಡುವಂತೆ ಕೋರಿ ನ್ಯಾಯಾಲಯದ ಕದ ತಟ್ಟುವ ಪ್ರಮೇಯ ಉದ್ಭವಿಸಬಾರದು. ಆದ್ದರಿಂದ ಈ ಆದೇಶವನ್ನು ಸಂಬಂಧಪಟ್ಟ ಎಲ್ಲರಿಗೂ ರವಾನಿಸಬೇಕು ” ಎಂದು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಅವರಿಗೆ ನಿರ್ದೇಶನ ನೀಡಿದೆ.
ಪತ್ನಿಯೊಂದಿಗಿನ ವಿವಾಹ ಬಂಧವನ್ನು ಅನೂರ್ಜಿತಗೊಳಿಸಬೇಕು ಎಂದು ಕೋರಿ ರಾಜೀವ್ 2016ರಲ್ಲಿ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ತ್ವರಿತ ವಿಲೇವಾರಿಯಾಗದ ಕಾರಣ ತಮ್ಮ ಅರ್ಜಿಯನ್ನು ಮೂರು ತಿಂಗಳಲ್ಲಿಇತ್ಯರ್ಥಪಡಿಸುವಂತೆ ಕೌಟುಂಬಿಕ ನ್ಯಾಯಾಲಯಕ್ಕೆ ನಿರ್ದೇಶನ ನೀಡಬೇಕು ಎಂದು ಹೈಕೋರ್ಟ್ಗೆ ಮನವಿ ಮಾಡಿದ್ದರು.
ಇದನ್ನೂ ಓದಿ : ರಾಜ್ಯದಲ್ಲಿ ಮತ್ತೆ ಸುದ್ದಿ ಮಾಡಿದ ತೀರ್ಥಹಳ್ಳಿ ಪ್ರತೀಕ್ ಗೌಡ ಕೇಸ್!
HOW TO APPLY : NEET-UG COUNSELLING 2023