10 ಕೋಟಿ ಲಾಟರಿ ಹಣ ಗೆದ್ದ ಮಹಿಳೆಯರು!
– ಎಲ್ಲರೂ ಸೇರಿ ಲಾಟರಿ ಟಿಕೆಟ್ ತೆಗೆದುಕೊಂಡಿದ್ದರು
– ಒಬ್ಬೊಬ್ಬರಿಗೆ ತಲಾ 90 ಲಕ್ಷ ರೂ. ಹಂಚಿಕೆ!
NAMMUR EXPRESS NEWS
ಮಲಪ್ಪುರಂ: ನಗರ ಸ್ವಚ್ಛಗೊಳಿಸುವ 11 ಮಹಿಳೆಯರ ಪೌರಕಾರ್ಮಿಕ ಗುಂಪೊಂದು 10 ಕೋಟಿ ಲಾಟರಿ ಹಣ ಗೆದ್ದಿದೆ. ಈ ಪ್ರಕರಣ ಭಾರೀ ಕುತೂಹಲ ಮೂಡಿಸಿದೆ. ಕೇರಳ ರಾಜ್ಯ ಸರ್ಕಾರದ ಲಾಟರಿ ವಿಭಾಗ ಮಾನ್ಸೂನ್ ಬಂಪರ್ ಆಪ ವಿಜೇತರನ್ನು ಘೋಷಣೆ ಮಾಡಿದ್ದು 11 ಮಹಿಳೆಯರು ವಿಜೇತರಾಗಿದ್ದಾರೆ. ಪರಪ್ಪಂನಂಗಡಿ ನಗರಸಭೆಯ ‘ಹರಿತ ಕರ್ಮ ಸೇನೆ’ಯ 11 ಮಹಿಳೆಯರು ತಲಾ 25 ಷೇರು ಹಾಕಿ ವಾರದ ಹಿಂದೆ 250 ರೂ.ಲಾಟರಿ ಟಿಕೇಟ್ ಖರೀದಿಸಿದ್ದರು. ಇದೀಗ ಅವರು ಕೋಟಿ ಕೋಟಿ ಹಣ ಗೆದ್ದಿದ್ದಾರೆ.
ನಾವು ಮೊದಲು ಹಣವನ್ನು ಒಟ್ಟುಗೂಡಿಸಿ ಲಾಟರಿ ಟಿಕೇಟ್ ಖರೀದಿಸಿದ್ದೇವು, ಈಗ ಬಹುಮಾನ ಗೆದ್ದಿರುವುದು ಖುಷಿ ಹೆಚ್ಚಿಸಿದೆ’ ಎನ್ನುತ್ತಾರೆ ಲಾಟರಿ ಹಣ ವಿಜೇತೆ ರಾಧಾ ಎನ್ನುವ ಮಹಿಳೆ. ಸಾಲಗಳ ಬಾಕಿ, ಮಕ್ಕಳ ಮದುವೆ, ಆಸ್ಪತ್ರೆ, ಚಿಕಿತ್ಸೆಯ ವೆಚ್ಚ ಸೇರಿ ನಾವೆಲ್ಲರೂ ಆರ್ಥಿಕವಾಗಿ ಸಾಕಷ್ಟು ಸಂಕಷ್ಟಗಳನ್ನು ಎದುರಿಸುತ್ತಿದ್ದೆವು. ಈಗ ಹಣ ಗೆದ್ದಿರುವುದು ಬದುಕಿನಲ್ಲಿ ಹಲವು ಸಮಸ್ಯೆಗಳ ನಿವಾರಣೆಗೆ ನೆರವಾಗಲಿದೆ’ ಎನ್ನುತ್ತಾರೆ ಇನ್ನೊಬ್ಬ ಮಹಿಳೆ.
ಇದನ್ನೂ ಓದಿ : ರಾಜ್ಯದಲ್ಲಿ ಮತ್ತೆ ಸುದ್ದಿ ಮಾಡಿದ ತೀರ್ಥಹಳ್ಳಿ ಪ್ರತೀಕ್ ಗೌಡ ಕೇಸ್!
HOW TO APPLY : NEET-UG COUNSELLING 2023