ಕರಾವಳಿಗೆ ಸಿಎಂ: ಹೈ ಅಲರ್ಟ್ ಸಭೆ!
– ಉಡುಪಿ ವಿಡಿಯೋ ಪ್ರಕರಣ ಚರ್ಚೆ
– ಮಳೆ ಹಾನಿ, ಡೆಂಗ್ಯೂ ನೆರೆ ಪರಿಹಾರದ ಬಗ್ಗೆ ಪರಿಶೀಲನೆ
– ರಾಜ್ಯದಲ್ಲಿ ಈಗ ಕರಾವಳಿಯದ್ದೆ ಸುದ್ದಿ!
NAMMUR EXPRESS NEWS
ಉಡುಪಿ/ ಮಂಗಳೂರು: ಉಡುಪಿ ಪ್ರಕರಣ ದ ಮೂಲಕ ರಾಜ್ಯದಲ್ಲಿ ಭಾರಿ ಸುದ್ದಿಯಾಗಿರುವ ಕರಾವಳಿಗೆ ಈಗ ಭಾನುವಾರ ಸಿಎಂ ಸಿದ್ದರಾಮಯ್ಯ ಭೇಟಿ ಮಾಡಲಿದ್ದಾರೆ. ಉಡುಪಿ ಖಾಸಗಿ ಕಾಲೇಜಲ್ಲಿ ಅನ್ಯ ಸಮುದಾಯದ ಮೂವರು ವಿದ್ಯಾರ್ಥಿನಿಯರು ಶೌಚಾಲಯದಲ್ಲಿ ಯುವತಿಯರು ಸ್ನಾನ ಮಾಡುವ ವಿಡಿಯೋ ಮಾಡುತ್ತಿರುವ ಪ್ರಕರಣ ಭಾರಿ ಕೋಲಾಹಲ ಸೃಷ್ಟಿ ಮಾಡಿದ್ದೂ, ಅದರ ಬಗ್ಗೆಯೂ ಸಿಎಂ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ. ಬಳಿಕ ಉಡುಪಿ ಪ್ರಗತಿ ಪರಿಶೀಲನೆ ಸಭೆಯಲ್ಲಿ ಭಾಗವಹಿಸಿ ಅಭಿವೃದ್ಧಿ ಮಳೆ ಹಾನಿ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ. ಬಳಿಕ ಮಧ್ಯಾಹ್ನದ ಮೇಲೆ ದಕ್ಷಿಣ ಕನ್ನಡ ಜಿಲ್ಲೆಯ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡೆಂಗ್ಯೂ ಜ್ವರ ಹೆಚ್ಚಳ!
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಡೆಂಗ್ಯೂ ಜ್ವರ ಪ್ರಕರಣಗಳು ಕೂಡ ಹೆಚ್ಚಾಗಿವೆ. ಒಂದು ತಿಂಗಳ ಅವಧಿಯಲ್ಲಿ ಜಿಲ್ಲೆಯಲ್ಲಿ ಸುಮಾರು 24 ಡೆಂಗ್ಯೂ ಪ್ರಕರಣಗಳು ದಾಖಲಾಗಿವೆ. ಜಿಲ್ಲೆಯಲ್ಲಿ ಜನವರಿಯಿಂದ ಜುಲೈ ಮೊದಲ ವಾರದವರೆಗೆ 72 ಡೆಂಗ್ಯೂ ಜ್ವರ ಪ್ರಕರಣಗಳು ದಾಖಲಾಗಿದ್ದವು. ಜೂನ್ನಿಂದ ಜುಲೈ ಮೊದಲ ವಾರದವರೆಗೆ 24 ಪ್ರಕರಣಗಳು ವರದಿಯಾಗಿವೆ. ಮಳೆಯ ಪ್ರಮಾಣ ಹೆಚ್ಚಾಗಿರುವುದರಿಂದ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗುತ್ತಿದ್ದು, ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಮೂಲಗಳು ತಿಳಿಸಿವೆ ಮಂಗಳೂರು ನಗರವೊಂದರಲ್ಲೇ ಒಟ್ಟು 51 ಡೆಂಗ್ಯೂ ಜ್ವರ ಪ್ರಕರಣಗಳು ವರದಿಯಾಗಿವೆ. ಗ್ರಾಮೀಣ ಪ್ರದೇಶದಲ್ಲಿ ಸುಮಾರು 1,300 ಆಶಾ ಕಾರ್ಯಕರ್ತೆಯರು ಇದೇ ರೀತಿಯ ಚಟುವಟಿಕೆಯಲ್ಲಿ ನಿರತರಾಗಿದ್ದಾರೆ. ಜಿಲ್ಲೆಯಲ್ಲಿ 48 ಮಲೇರಿಯಾ ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 21 ಮಂದಿ ಇತರ ಜಿಲ್ಲೆಗಳು ಮತ್ತು ಇತರ ರಾಜ್ಯಗಳಿಂದ ಬಂದವರು ಎಂದು ಅವರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ : ರಾಜ್ಯದಲ್ಲಿ ಮತ್ತೆ ಸುದ್ದಿ ಮಾಡಿದ ತೀರ್ಥಹಳ್ಳಿ ಪ್ರತೀಕ್ ಗೌಡ ಕೇಸ್!
HOW TO APPLY : NEET-UG COUNSELLING 2023