ಉಡುಪಿ ಘಟನೆ ಮಾಸುವ ಮುನ್ನ ವಿಟ್ಲ ಬಳಿ ಗ್ಯಾಂಗ್ ರೇಪ್!
– ಕೇರಳ ಮೂಲದ ಯುವಕರಿಂದ ಬಾಲಕಿ ಅತ್ಯಾಚಾರ
– ವಿದ್ಯಾರ್ಥಿನಿಯರ ಚಿತ್ರೀಕರಣ ಕೇಸ್: ತನಿಖಾಧಿಕಾರಿ ಬದಲಾವಣೆ
– ಗೌಪ್ಯ ಸ್ಥಳದಲ್ಲಿ ವಿದ್ಯಾರ್ಥಿನಿಯರ ವಿಚಾರಣೆ
NAMMUR EXPRESS NEWS
ಬಂಟ್ವಾಳ: ಅಪ್ರಾಪ್ತ ಬಾಲಕಿಯನ್ನು ಪ್ರೀತಿಸುವುದಾಗಿ ನಂಬಿಸಿ ಗ್ಯಾಂಪ್ ರೇಪ್ ನಡೆಸಿದ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೆರುವಾಯಿ ಗ್ರಾಮದ 16 ವರ್ಷ ಪ್ರಾಯದ ಬಾಲಕಿಗೆ ಕೇರಳ ಭಾಗದ ಕೆಲವು ಯುವಕರಿಂದ ಹಲವು ಸಮಯದಿಂದ ನಿರಂತರ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಹೇಳಲಾಗಿದೆ. ಶನಿವಾರ ವಿಟ್ಲ ಠಾಣೆಗೆ ಆಗಮಿಸಿದ ಪರಿಶಿಷ್ಟಪಂಗಡದ ಬಾಲಕಿಯ ಪೋಷಕರು ಘಟನೆಯ ಬಗ್ಗೆ ಕೇರಳ ಮೂಲದ ಕೆಲವು ಯುವಕರ ಮೇಲೆ ಪ್ರಕರಣ ದಾಖಲಿಸಿದ್ದಾರೆ. ವಿಟ್ಲ ಠಾಣೆಯಲ್ಲಿ ಪೊಕ್ಸೋ ಪ್ರಕರಣ ದಾಖಲಿಸಿದ್ದು, ತನಿಖೆ ಆರಂಭಿಸಿದ್ದಾರೆ ಎಂದು ತಿಳಿದುಬಂದಿದೆ.
ವಿದ್ಯಾರ್ಥಿನಿಯರ ಚಿತ್ರೀಕರಣ ಕೇಸ್: ತನಿಖಾಧಿಕಾರಿ ಬದಲಾವಣೆ
ಖಾಸಗಿ ಕಾಲೇಜು ಶೌಚಾಲಯದಲ್ಲಿ ವೀಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖಾಧಿಕಾರಿಯನ್ನು ಉಡುಪಿ ಎಸ್ಪಿ ಬದಲಾಯಿಸಿದ್ದಾರೆ. ಮಲ್ಪೆ ಸರ್ಕಲ್ ಇನ್ಸ್ಪೆಕ್ಟರ್ ಮಂಜುನಾಥ್ ಗೌಡ ಈವರಿಗೆ ತನಿಖಾಧಿಕಾರಿಯಾಗಿದ್ದರು. ತನಿಖಾಧಿಕಾರಿಯನ್ನು ಬದಲು ಮಾಡಿ ಎಂದು ಎಬಿವಿಪಿಯಿಂದ ಒತ್ತಡ ಬಂದಿತ್ತು. ಪೊಲೀಸರು ಎಫ್ಐಆರ್ ದಾಖಲು ಮಾಡಲು ವಿಳಂಬ ಮಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಬಹಳ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಕುಂದಾಪುರ ಡಿವೈಎಸ್ಪಿ ಬೆಳ್ಳಿಯಪ್ಪ ಅವರಿಗೆ ತನಿಖೆ ಜವಾಬ್ದಾರಿಯನ್ನ ನೀಡಲಾಗಿದೆ. ಮಹಿಳೆಯರಿಗೆ ಸಂಬಂಧಿಸಿದ ಪ್ರಕರಣ ಆಗಿರುವುದರಿಂದ, ವಿದ್ಯಾರ್ಥಿನಿಯರು, ಕಾಲೇಜು ಸಿಬ್ಬಂದಿ ಹೇಳಿಕೆ ದಾಖಲಿಸಲು ಸುಲಭವಾಗುವಂತೆ ತನಿಖಾ ತಂಡದಲ್ಲಿ ಹೆಚ್ಚುವರಿ ಮಹಿಳಾ ಪೊಲೀಸ್ ಸಿಬ್ಬಂದಿಯನ್ನು ನೇಮಿಸಲು ಉಡುಪಿ ಎಸ್ಪಿ ಅಕ್ಷಯ್ ನಿರ್ಧರಿಸಿದ್ದಾರೆ.
ವಿದ್ಯಾರ್ಥಿನಿಯರ ವಿಚಾರಣೆ
ಉಡುಪಿ ನಗರದ ಖಾಸಗಿ ಕಾಲೇಜಿನ ಟಾಯ್ಲೆಟ್ನಲ್ಲಿ ವೀಡಿಯೋ ಚಿತ್ರೀಕರಿಸಿದ ಮೂವರು ಆರೋಪಿತ ವಿದ್ಯಾರ್ಥಿನಿಯರನ್ನು ಗೌಪ್ಯ ಸ್ಥಳದಲ್ಲಿ ಮಲ್ಪೆ ಪೊಲೀಸರು ವಿಚಾರಣೆ ನಡೆಸಿದ್ದಾರೆ. ವಿದ್ಯಾರ್ಥಿನಿಯರಿಂದ ಪ್ರತ್ಯೇಕವಾಗಿ ಹೇಳಿಕೆಗಳನ್ನು ದಾಖಲು ಮಾಡಲಾಗಿದೆ. ಪೊಲೀಸರ ತನಿಖೆಗೆ ಖುದ್ದು ಹಾಜರಾಗಬೇಕು ಎಂದು ಉಡುಪಿ ಜೆಎಂಎಫ್ಸಿ ನ್ಯಾಯಾಲಯ ಜಾಮೀನು ಕೊಡುವ ಸಂದರ್ಭದಲ್ಲಿ ವಿದ್ಯಾರ್ಥಿನಿಯರಿಗೆ ಸೂಚಿಸಿತ್ತು. ಈ ನಡುವೆ ಎರಡು ಬಾರಿ ಭೇಟಿಯಾಗಿ ಸಂತ್ರಸ್ತ ವಿದ್ಯಾರ್ಥಿನಿಯ ಹೇಳಿಕೆಯನ್ನೂ ಪೊಲೀಸರು ದಾಖಲಿಸಿಕೊಂಡಿದ್ದಾರೆ.ಇದರ ನಡುವೆ ಬಿಜೆಪಿ ಪ್ರತಿಭಟನೆಯ ನಂತರ ತನಿಖೆಯಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ತನಿಖಾಧಿಕಾರಿಯನ್ನು ಬದಲಾಯಿಸಬೇಕು ಎಂಬ ಒತ್ತಡ ಬಂದ ನಂತರ ಮಲ್ಪೆ ಇನ್ಸ್ಪೆಕ್ಟರ್ ಮಂಜುನಾಥ್ ಗೌಡ ಅವರ ಬದಲಿಗೆ ಕುಂದಾಪುರದ ಡಿವೈಎಸ್ಪಿ ಬೆಳ್ಳಿಯಪ್ಪ ಅವರನ್ನು ತನಿಖೆಗೆ ನಿಯೋಜಿಸಲಾಗಿದೆ.
ಇದನ್ನೂ ಓದಿ : ರಾಜ್ಯದಲ್ಲಿ ಮತ್ತೆ ಸುದ್ದಿ ಮಾಡಿದ ತೀರ್ಥಹಳ್ಳಿ ಪ್ರತೀಕ್ ಗೌಡ ಕೇಸ್!
HOW TO APPLY : NEET-UG COUNSELLING 2023