ಪತ್ನಿ ಕಿರುಕುಳಕ್ಕೆ ನವ ವಿವಾಹಿತ ಬಲಿ?!
– ಹಾಸನದ ಚನ್ನರಾಯಪಟ್ಟಣದಲ್ಲಿ ನಡೆದ ಘಟನೆ
– ಪ್ರೀತಿಸಿ ಮದುವೆಯಾಗಿದ್ದೇ ತಪ್ಪಾಯ್ತಾ?
NAMMUR EXPRESS NEWS
ಹಾಸನ: ( Hassan ) ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಕರಿಯಪ್ಪನಗುಡಿ ಗ್ರಾಮದಲ್ಲಿ ನೇಣು ಬಿಗಿದುಕೊಂಡು ನವವಿವಾಹಿತ ಸಾವಿಗೆ ಶರಣಾದ ಘಟನೆ ನಡೆದಿದೆ.
ಕಿರಣ್ ಬಿ.ಬಿ. (26) ಮೃತ ದುರ್ದೈವಿ. ಮೂಲತಃ ಚನ್ನರಾಯಪಟ್ಟಣ ತಾಲ್ಲೂಕಿನ ಉದಯಪುರ ಗ್ರಾಮದವನಾದ ಕಿರಣ್, ಬೇಕರಿ ನಡೆಸುತ್ತಿದ್ದ. ಕಳೆದ ಫೆ.19 ರಂದು ದಂಡಿಗನಹಳ್ಳಿ ಹೋಬಳಿಯ ವಗರಹಳ್ಳಿ ಗ್ರಾಮದ ಸ್ಪಂದನಾ (24) ಎಂಬುವವರನ್ನು ಪ್ರೀತಿಸಿ ಮದುವೆಯಾಗಿದ್ದ. ಮದುವೆ ನಂತರ ಪತ್ನಿ ಸ್ಪಂದನಾ ಸೇರಿ ಆಕೆಯ ತಂದೆ ವಾಸು, ತಾಯಿ ಗೀತಾ, ಅಜ್ಜಿ ರತ್ನಮ್ಮ ಹಣಕ್ಕಾಗಿ ಬೇಡಿಕೆಯಿಟ್ಟು ಕಿರುಕುಳ ನೀಡುತ್ತಿದ್ದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ.
ಕಿರಣ್ ವಿರುದ್ಧ ಸುಳ್ಳು ವರದಕ್ಷಿಣೆ ಕಿರುಕುಳ ಕೇಸ್
ಮದುವೆಯಾಗಿ ಒಂದು ವರ್ಷವೂ ಕಳೆದಿಲ್ಲ ಅಷ್ಟರಲ್ಲಿಯೇ ಕಿರಣ್ ವಿರುದ್ಧ ಸುಳ್ಳು ವರದಕ್ಷಿಣೆ ಕಿರುಕುಳ ಕೇಸ್ ದಾಖಲಿಸಿ ಜೈಲಿಗೆ ಕಳುಹಿಸಿದ್ದ ಬಗ್ಗೆ ಕಿರಣ್ ಪೋಷಕರು ಆರೋಪ ಮಾಡಿದ್ದಾರೆ. ಇನ್ನು ಜೈಲುಪಾಲಾಗಿದ್ದ ಕಿರಣ್,ವಾರದ ಹಿಂದೆ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ. ಈ ಎಲ್ಲಾ ಘಟನೆಯಿಂದ ಮನನೊಂದು ಜುಲೈ 31ರ ರಾತ್ರಿ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಕುರಿತು ಹೊಳೇನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಕಾಳುಮೆಣಸು ಬೆಳೆಗಾರರಿಗೆ ಬಂಪರ್!
HOW TO APPLY : NEET-UG COUNSELLING 2023