ಎನ್.ಆರ್.ಪುರದ ವ್ಯಕ್ತಿ ಲಂಚ: ಅಧಿಕಾರಿಗೆ 3 ವರ್ಷ ಜೈಲು!
– ಲಂಚ ಪಡೆವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಸರ್ಕಾರಿ ಅಧಿಕಾರಿ
– ಮೂಡಿಗೆರೆಯ ಚಾರ್ಮಾಡಿ ಘಾಟಿಯಲ್ಲಿ ಹುಚ್ಚಾಟಕ್ಕೆ ಪೊಲೀಸರ ಬ್ರೇಕ್!
NAMMUR EXPRESS NWES
ಎನ್.ಆರ್.ಪುರ: ( N R Pura ) ಎನ್.ಆರ್.ಪುರದ ವ್ಯಕ್ತಿಯಿಂದ ಅಂಗಡಿ ಲೈಸೆನ್ಸ್ ವಿಚಾರವಾಗಿ ಲಂಚ ಪಡೆದ ಅಧಿಕಾರಿಗೆ 3 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ವ್ಯಕ್ತಿಯಿಂದ ಲಂಚ ಪಡೆವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಸರ್ಕಾರಿ ಅಧಿಕಾರಿ ಈಗ ಜೈಲುಪಾಲಾಗಲಿದ್ದಾರೆ. ಲಂಚ ಪಡೆದ ಆರೋಪದ ಹಿನ್ನೆಲೆಯಲ್ಲಿ ನಿವೃತ್ತ ವಾಣಿಜ್ಯ ತೆರಿಗೆ ಅಧಿಕಾರಿಗೆ ಮೂರು ವರ್ಷ ಕಾರಗೃಹ ಶಿಕ್ಷೆ ಹಾಗೂ ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.
ಏನಿದು ಘಟನೆ?:
ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್. ಪುರದ ಪಾಂಡು ಎಂಬುವವರು ತಮ್ಮ ಅಂಗಡಿ ಹೆಸರನ್ನು ಬದಲಾಯಿಸಿಕೊಡುವಂತೆ ತರೀಕೆರೆ ವಾಣಿಜ್ಯ ತೆರಿಗೆ ಇಲಾಖೆಗೆ ಅರ್ಜಿ ಸಲ್ಲಿಸಿದ್ದರು. ಅಂದು ಕಾರ್ಯನಿರ್ವಹಿಸುತ್ತಿದ್ದ ವಾಣಿಜ್ಯ ತೆರಿಗೆ ಅಧಿಕಾರಿ ಟಿ .ಪಾಲಾಕ್ಷಪ್ಪಐದು ಸಾವಿರ ರೂ.ಗಳಿಗೆ ಬೇಡಿಕೆ ಇಟ್ಟಿದ್ದರು. ದೂರುದಾರದಿಂದ ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ ಪಾಲಾಕ್ಷಪ್ಪ ಮತ್ತು ಗುರುಮೂರ್ತಿ ಲೋಕಾಯುಕ್ತ ಬಲೆಗೆ ಬಿದ್ದಿದ್ದರು. ಜಿಲ್ಲಾ ಪ್ರಧಾನ ಸತ್ರ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದು, ಆರೋಪಿ ಟಿ. ಪಾಲಾಕ್ಷಪ್ಪನಿಗೆ ಮೂರು ವರ್ಷ ಕಾರಾಗೃಹ ಸಜೆ, 40,000 ದಂಡ ವಿಧಿಸಿ ನ್ಯಾಯಾಧೀಶರು ತೀರ್ಪು ನೀಡಿದ್ದಾರೆ. ಇನ್ನೊಬ್ಬ ಆರೋಪಿ ಗುರುಮೂರ್ತಿಯನ್ನು ಖುಲಾಸೆಗೊಳಿಸಲಾಗಿದೆ.
ಮೂಡಿಗೆರೆಯ ಚಾರ್ಮಾಡಿ ಘಾಟಿ ಜಲಪಾತದ ಬಳಿ ಪೊಲೀಸ್ ನಿಯೋಜನೆ
ಮೂಡಿಗೆರೆ ಚಾರ್ಮಾಡಿ ಘಾಟಿಯಲ್ಲಿ ಪ್ರವಾಸಿಗರ ಹುಚ್ಚಾಟ ಮಿತಿ ಮೀರಿದೆ. ಜಲಪಾತಗಳಲ್ಲಿ ಯಾವುದೇ ಸುರಕ್ಷತೆ ಇಲ್ಲದೆ ಸೆಲ್ಸಿ ತೆಗೆದುಕೊಳ್ಳುವ ಪ್ರಕರಣಗಳು ಹೆಚ್ಚಾಗಿವೆ. ಇದೀಗ ಪೊಲೀಸರು ಇದಕ್ಕೆಲ್ಲ ಬ್ರೇಕ್ ಹಾಕಲು ಮುಂದಾಗಿದ್ದಾರೆ.
ಜಲಪಾತದ ಸ್ಥಳಗಳಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಕುಂದಾಪುರದ ಅರಶಿನಗುಂಡಿ ಜಲಪಾತದಲ್ಲಿ ರೀಲ್ಸ್ ಮಾಡಲು ಹೋಗಿ ಜಲಪಾತಕ್ಕೆ ಬಿದ್ದು ಭದ್ರಾವತಿಯ ಶರತ್ ಸಾವನ್ನಪ್ಪಿದ್ದ ಈ ಘಟನೆ ನಡೆದ ಬಳಿಕವೂ ಪ್ರವಾಸಿಗರು ಜಲಪಾತಗಳಲ್ಲಿ ಅಪಾಯಕಾರಿಯಾಗಿ ಸೆಲ್ಸಿ, ರೀಲ್ಸ್ ಮಾಡುವುದು ಕಂಡುಬಂದಿದೆ ಅಲ್ಲದೆ ಚಾರ್ಮಾಡಿ ಜಲಪಾತಗಳ ಬಳಿ ರಸ್ತೆ ಮಧ್ಯೆ ಗಾಡಿ ನಿಲ್ಲಿಸಿಕೊಂಡು ಕುಣಿಯುತ್ತಿದ್ದ ಪ್ರವಾಸಿಗರು ಜಾರುವ ಬಂಡೆಗಳ ಮೇಲೆ ಹತ್ತಿ ಫೋಟೋ ಕ್ಲಿಕ್ಕಿಸಿಕೊಳ್ಳಲು ಮುಂದಾಗುತ್ತಿದ್ದರು. ಈ ಹುಚ್ಚಾಟ ತಡೆಯಲು ಜಲಪಾತಗಳ ಬಳಿ ಹೈವೆ ಪ್ಯಾಟ್ರೋಲ್ ಪೊಲೀಸರ ನಿಯೋಜನೆ ಮಾಡಲಾಗಿದ್ದು ಇಡೀ ದಿನ ಪೊಲೀಸರು ಸ್ಥಳದಲ್ಲೇ ಮೊಕ್ಕಾಂ ಹೂಡಲಿದ್ದಾರೆ. ಇದರಿಂದ ಪ್ರಯಾಣಿಕರಿಗೂ ಕಿರಿಕಿರಿ ಇಲ್ಲದಾಗಲಿದೆ.
ಇದನ್ನೂ ಓದಿ : ಖರ್ಗೆ ಮೈಬಣ್ಣದ ವಿವಾದ: ಜ್ಞಾನೇಂದ್ರ ಕ್ಷಮೆಗೆ ಕಾಂಗ್ರೆಸ್ ಪಟ್ಟು!
HOW TO APPLY : NEET-UG COUNSELLING 2023