ಮೂಡುಬಿದಿರೆ: ಇಬ್ಬರು ಅಧಿಕಾರಿಗಳ ಅಮಾನತು!
– ಆಹ್ವಾನ ಪತ್ರಿಕೆಯಲ್ಲಿ ಪ್ರಿಯಾಂಕ್ ಖರ್ಗೆ ಹೆಸರು ಇಲ್ಲ
– ಶಿಷ್ಟಾಚಾರ ಉಲ್ಲಂಘನೆ: ಸಿಎಂ ಎನ್ ಮಾಡ್ತಾರೆ?
NAMMUR EXPRESS NEWS
ಮೂಡಬಿದಿರೆ: ಗ್ರಾಮ ಪಂಚಾಯತ್ ಕಟ್ಟಡದ ಉದ್ಘಾಟನಾ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೆಸರು ಹಾಕದೇ ಶಿಷ್ಟಾಚಾರ ಉಲ್ಲಂಘಿಸಿದ ಆರೋಪದ ಮೇಲೆ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಮೂಡುಬಿದಿರೆ ತಾಲ್ಲೂಕು ಪಂಚಾಯಿತ್ ಕಾರ್ಯನಿರ್ವಹಣಾಧಿಕಾರಿ ದಯಾವತಿ ಹಾಗೂ ಇರುವೈಲ್ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಕಂಠಪ್ಪ ಅವರನ್ನು ಅಮಾನತುಗೊಳಿಸಲಾಗಿದೆ. ಇಬ್ಬರು ಅಧಿಕಾರಿಗಳನ್ನು ಆ.1 ರಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಮಾನತು ಮಾಡಿ ಆದೇಶ ಹೊರಡಿಸಿದ್ದರು. .
ಇರುವೈಲ್ ಪಂಚಾಯಿತಿಯ ನೂತನ ಕಟ್ಟಡ ಸೋಮವಾರ ಉದ್ಘಾಟನೆಯಾಗಬೇಕಿತ್ತು. ಆದರೆ ಆಹ್ವಾನಪತ್ರಿಕೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೆಸರನ್ನು ಹಾಕದೇ ಶಿಷ್ಟಾಚಾರ ಉಲ್ಲಂಘನೆ ಮಾಡಿದ್ದಾರೆ. ಹೀಗಾಗಿ ಈ ಇಬ್ಬರನ್ನೂ ಅಮಾನತು ಮಾಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ್.ಕೆ ಆದೇಶದಲ್ಲಿ ತಿಳಿಸಿದ್ದರು.
ಅಮಾನತು ಆದೇಶ ಹಿಂಪಡೆಯಲು ಆದೇಶ!
ಅಮಾನತು ಆದೇಶ ಹಿಂಪಡೆಯುವಂತೆ ಮೂಡುಬಿದಿರೆ ಬಿಜೆಪಿ ಶಾಸಕ ಉಮಾನಾಥ ಕೋಟ್ಯಾನ್ ಸಿಎಂ ಸಿದ್ದರಾಮಯ್ಯಗೆ ಒತ್ತಾಯಿಸಿದ್ದಾರೆ. ಆ. 1 ರಂದು ಮಂಗಳೂರಿಗೆ ಬಂದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಶಾಸಕ ಉಮಾನಾಥ ಕೋಟ್ಯಾನ್ ಅವರು ಅಧಿಕಾರಿಗಳನ್ನು ವರ್ಗಾವಣೆ ಮಾಡಿರುವ ಬಗ್ಗೆ ಮುಖ್ಯಮಂತ್ರಿ ಗಮನಕ್ಕೆ ತಂದಿದ್ದು, ಅಧಿಕಾರಿಗಳ ಅಮಾನತು ವಾಪಸ್ ಪಡೆಯಬೇಕು ಎಂದು ಮನವಿ ಮಾಡಿಕೊಂಡಿದ್ದರು. ಇದಕ್ಕೆ ಸಿದ್ದರಾಮಯ್ಯನವರು ಪ್ರತಿಕ್ರಿಯಿಸಿ, ಈ ಬಗ್ಗೆ ತನಿಖೆ ನಡೆಸುವುದಾಗಿ ಶಾಸಕರಿಗೆ ಭರವಸೆ ನೀಡಿದ್ದಾರೆ.
ಇದನ್ನೂ ಓದಿ : ಖರ್ಗೆ ಮೈಬಣ್ಣದ ವಿವಾದ: ಜ್ಞಾನೇಂದ್ರ ಕ್ಷಮೆಗೆ ಕಾಂಗ್ರೆಸ್ ಪಟ್ಟು!
HOW TO APPLY : NEET-UG COUNSELLING 2023